Site icon Suddi Belthangady

ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟವು ಡಿ.23ರಂದು ನಡೆಯಿತು.

ಉದ್ಘಾಟನೆಯನ್ನು ಧರ್ಮಸ್ಥಳ ಮಂಜುನಾಥೇಶ್ವರ ವಸತಿ ಪದವಿಪೂರ್ವ ಕಾಲೇಜಿನ ದೈಹಿಕ ಶಿಕ್ಷಕ ನಿವೃತ್ತ ಸೇನಾನಿ ಲಕ್ಷ್ಮಣ ರವರು ನೆರವೇರಿಸಿ ಮಾತನಾಡುತ್ತಾ ಕ್ರೀಡೆಗಳಲ್ಲಿ ವಿದ್ಯಾರ್ಥಿಗಳು ಪಾಲ್ಗೊಳ್ಳುವುದರಿಂದ ಅವರ ದೈಹಿಕ ಮತ್ತು ಮಾನಸಿಕ ಅರೋಗ್ಯ ಸದೃಢವಾಗುವುದು ಎಂದು ನುಡಿದರು.

ಕಾಲೇಜಿನ ಪ್ರಾಂಶುಪಾಲ ಡಾ. ಅಶೋಕ್‌ ಕುಮಾರ್‌,  ದೈಹಿಕ ಶಿಕ್ಷಣ ನಿರ್ದೇಶಕರಾದ ಪ್ರಭಾಕರ್‌ ಮತ್ತು ಕ್ರೀಡಾ ವಿಭಾಗದ ಸಂಯೋಜಕ ಡಾ.ರವೀಶ್‌ಪಡುಮಲೆ ವೇದಿಕೆಯಲ್ಲಿ ಉಪಸ್ಥಿತರಿದ್ದರು.

ವಿದ್ಯಾರ್ಥಿನಿ ಸಹನ ಕಾರ್ಯಕ್ರಮ ನಿರೂಪಿಸಿದರು.ಕ್ರೀಡಾಕೂಟದಲ್ಲಿ ಕಾಲೇಜಿನ ವಿದ್ಯಾರ್ಥಿಗಳು ಉತ್ಸಾಹದಿಂದ ಭಾಗವಹಿಸಿದರು.

Exit mobile version