Site icon Suddi Belthangady

ಉಜಿರೆ: ಎಸ್.ಡಿ.ಎಂ ಪದವಿ ಪೂರ್ವ ಕಾಲೇಜಿನಲ್ಲಿ ಭಿತ್ತಿಪತ್ರಿಕೆ ಸ್ಪರ್ಧೆ

ಉಜಿರೆ: ಎಸ್.ಡಿ.ಎಂ ಪದವಿಪೂರ್ವ ಕಾಲೇಜು ವಾರ್ಷಿಕೋತ್ಸವದ ಅಂಗವಾಗಿ ವಿಭಾಗ ಮಟ್ಟದಲ್ಲಿ ವಿದ್ಯಾರ್ಥಿಗಳಿಗೆ ಭಿತ್ತಿಪತ್ರಿಕೆ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು.

ಕಾರ್ಯಕ್ರಮಕ್ಕೆ ಅಭ್ಯಾಗತರಾಗಿ ಆಗಮಿಸಿದ ನಿವೃತ್ತ ಪ್ರಾಂಶುಪಾಲ ಡಾ.ಜಯಕುಮಾರ ಶೆಟ್ಟಿ ಶುಭಹಾರೈಸಿದರು.

ಸಂಸ್ಥೆಯ ಪ್ರಾಂಶುಪಾಲ ಪ್ರೋ.ಪ್ರಮೋದ್ ಕುಮಾರ್.ಬಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹದ ಮಾತುಗಳನ್ನಾಡಿದರು.ಎಸ್.ಡಿ.ಎಂ ಪದವಿ ಕಾಲೇಜಿನ ಆಂಗ್ಲಭಾಷಾ ಉಪನ್ಯಾಸಕಿ ಪವಿತ್ರ ಹಾಗೂ ಎಸ್.ಡಿ.ಎಂ ಕನ್ನಡ ಮಾಧ್ಯಮ ಪ್ರೌಢಶಾಲೆಯ ಕಲಾ ಶಿಕ್ಷಕ ಶ್ರೀರಾಮ ಅವರು ತೀರ್ಪುಗಾರರಾಗಿ ಭಾಗವಹಿಸಿದರು.

ಆಂಗ್ಲ ಭಾಷಾ ವಿಭಾಗ ಪ್ರಥಮ, ಜೀವಶಾಸ್ತ್ರ ಹಾಗೂ ಗಣಿತ ವಿಭಾಗ ದ್ವಿತೀಯ, ಭೌತಶಾಸ್ತ್ರ ವಿಭಾಗ ತೃತೀಯ ಸ್ಥಾನವನ್ನು ಪಡೆಯಿತು. ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳು ಹಾಗೂ ಸಂಸ್ಥೆಯ ಉಪನ್ಯಾಸಕರು, ಸಿಬ್ಬಂದಿಗಳು ಉಪಸ್ಥಿತರಿದ್ದರು.

Exit mobile version