ಉಜಿರೆ ಎಸ್.ಡಿ.ಎಂ ಪ.ಪೂ ಕಾಲೇಜಿನಲ್ಲಿ ಡಿಜಿಟಲ್ ಸಾಕ್ಷರತಾ ಜಾಗೃತಿ ಕಾರ್ಯಕ್ರಮ – ಡಿಜಿಟಲ್ ಸಾಕ್ಷರತೆ ಇಂದಿನ ಅಗತ್ಯಗಳಲ್ಲಿ ಒಂದು – ಅರ್ಜುನ್ ಶೆಟ್ಟಿ

0

ಉಜಿರೆ : ಆಧುನಿಕತೆಯ ಭರಾಟೆಯಲ್ಲಿ ಇಂದು ತಂತ್ರಜ್ಞಾನ ಕ್ಷೇತ್ರದಲ್ಲಿ ಮಹತ್ತರ ಬದಲಾವಣೆ ಆಗುತ್ತಿದೆ. ಈ ಡಿಜಿಟಲ್ ಯುಗದಲ್ಲಿ ವ್ಯಾಪಾರ ,  ವ್ಯವಹಾರ , ಬ್ಯಾಂಕಿಂಗ್ ಕ್ಷೇತ್ರಗಳು ಅಗಾಧ ಪ್ರಮಾಣದಲ್ಲಿ ಬೆಳವಣಿಗೆ ಕಾಣುತ್ತಿವೆ. ಸುರಕ್ಷಾ ಹಾಗೂ ಆರೋಗ್ಯ ಸೇತು ಇತ್ಯಾದಿ ಆರೋಗ್ಯ ಕ್ಷೇತ್ರದ ಅಪ್ಲಿಕೇಶನ್ ಇತ್ಯಾದಿಗಳ ಸಬಲೀಕರಣವನ್ನೂ ನೋಡಬಹುದಾಗಿದೆ. ವಿಶೇಷವಾಗಿ ಎಲ್ಲ ಕ್ಷೇತ್ರಗಳಲ್ಲೂ ಡಿಜಿಟಲಿಕರಣವಾಗುತ್ತಿರುವ ಸಂದರ್ಭದಲ್ಲಿ ಡಿಜಿಟಲ್ ಸಾಕ್ಷರತೆ ಇಂದಿನ ಅಗತ್ಯಗಳಲ್ಲಿ ಒಂದು ಎಂದು ಉಜಿರೆಯ ಎಸ್ ಡಿ ಎಂ ಐಟಿ ಯ ಕಂಪ್ಯೂಟರ್ ಸೈನ್ಸ್ ವಿಭಾಗದ ಸಹಾಯಕ ಪ್ರಾಧ್ಯಾಪಕ ಅರ್ಜುನ್ ಶೆಟ್ಟಿ ಅವರು ಹೇಳಿದರು.

ಇವರು ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ವತಿಯಿಂದ ಜಾಗೃತಿ ಸಪ್ತಾಹದ ಅಂಗವಾಗಿ ನಡೆದ ‘ ನಮ್ಮ ನಡಿಗೆ ಡಿಜಿಟಲ್ ಕಡೆಗೆ ‘ ಎಂಬ ಡಿಜಿಟಲ್ ಸಾಕ್ಷರತಾ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದರು.

ಡಿಜಿಟಲಿಕರಣದ ಹೆಸರಿನಲ್ಲಿ ಕೃತಕ ಬುದ್ಧಿಮತ್ತೆ ಉಪಯೋಗಿಸಿ ಮಾಡುತ್ತಿರುವ ವಂಚನೆಗಳ ಬಗ್ಗೆ ಜಾಗ್ರತೆ ವಹಿಸಬೇಕು ಎಂದು ಈ ಸಂದರ್ಭದಲ್ಲಿ ಕಿವಿಮಾತು ಹೇಳಿದರು.

ರಾಷ್ಟ್ರೀಯ ಸೇವಾ ಯೋಜನೆಯ ಯೋಜನಾಧಿಕಾರಿ ಡಾ.ಪ್ರಸನ್ನಕುಮಾರ ಐತಾಳ್ , ಸಹ ಯೋಜನಾಧಿಕಾರಿ ಪದ್ಮಶ್ರೀ ರಕ್ಷಿತ್ , ಘಟಕದ ನಾಯಕರಾದ ಸುದರ್ಶನ ನಾಯಕ್ ಹಾಗೂ ದಕ್ಷಾ ಉಪಸ್ಥಿತರಿದ್ದರು.

ನಿರಂತಸಾಗರ್ ಜೈನ್ ಸ್ವಾಗತಿಸಿ , ಸಿದ್ದಾಂತ್ ವಂದಿಸಿದರು. ಚಾರಿತ್ರ್ಯ ಜೈನ್ ನಿರೂಪಿಸಿದರು. 

LEAVE A REPLY

Please enter your comment!
Please enter your name here