Site icon Suddi Belthangady

ಉಜಿರೆ: ಶ್ರೀ ಧ.ಮಂ. ಪದವಿ ಪೂರ್ವ ಕಾಲೇಜಿನಲ್ಲಿ ವಾರ್ಷಿಕ ಕ್ರೀಡಾಕೂಟ

ಉಜಿರೆಯ ಶ್ರೀ ಧ.ಮಂ.ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾ ಕೂಟವು ಶ್ರೀ ರತ್ನವರ್ಮ ಕ್ರೀಡಾಂಗಣದಲ್ಲಿ ನೆರವೇರಿತು.

ಉಪ್ಪಿನಂಗಡಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ದೈಹಿಕ ನಿರ್ದೇಶಕ ಪ್ರವೀಣ್ ಕುಮಾರ್ ಕ್ರೀಡಾಕೂಟವನ್ನು ಉದ್ಘಾಟಿಸಿದರು.ಆರಂಭದಲ್ಲಿ ಕಾಲೇಜು ವಿದ್ಯಾರ್ಥಿಗಳ 29 ತಂಡಗಳಿಂದ ಆಕರ್ಷಕ ಪಥ ಸಂಚಲನ ಕಾರ್ಯಕ್ರಮ ನಡೆಯಿತು.ಬಳಿಕ ಉಜಿರೆಯ ಶ್ರೀ ಜನಾರ್ದನ ಸ್ವಾಮಿ ಕ್ಷೇತ್ರದಿಂದ ಕಾಲೇಜಿನ ಎಂಟು ಮಂದಿ ರಾಷ್ಟ್ರ ಮಟ್ಟದ ಕ್ರೀಡಾಪಟುಗಳು ತಂದ ಕ್ರೀಡಾ ಜ್ಯೋತಿಯನ್ನು ಬೆಳಗಿಸುವುದರ ಮೂಲಕ ಕ್ರೀಡಾಕೂಟಕ್ಕೆ ವಿದ್ಯುಕ್ತ ಚಾಲನೆ ನೀಡಲಾಯಿತು.

ಕಾಲೇಜಿನ ರಾಜ್ಯಮಟ್ಟದ ಕ್ರೀಡಾಪಟು ಇಂಚರಾರವರು ವಿದ್ಯಾರ್ಥಿಗಳಿಗೆ ಕ್ರೀಡಾ ಪ್ರತಿಜ್ಞಾ ವಿಧಿಯನ್ನು ಬೋಧಿಸಿದರು.ಕ್ರೀಡಾಕೂಟದ ಉದ್ಘಾಟಕರಾದ ಪ್ರವೀಣ್ ಕುಮಾ‌ರ್ ಅವರು ಮಾತನಾಡುತ್ತಾ ಇಂತಹ ವಾರ್ಷಿಕ ಕ್ರೀಡಾ ಕೂಟವು ವಿದ್ಯಾರ್ಥಿಗಳ ಕ್ರೀಡಾ ಪ್ರತಿಭೆಗಳನ್ನು ಗುರುತಿಸಿ, ಅವರಿಗೆ ಉನ್ನತ ಅವಕಾಶಕ್ಕೆ ಏರಲು ಸಹಾಯಮಾಡುತ್ತದೆ.ಇದರಿಂದ ವಿದ್ಯಾರ್ಥಿಗಳ ದೈಹಿಕ ಆರೋಗ್ಯ ಹಾಗೂ ಕ್ರೀಡಾ ಸ್ಫೂರ್ತಿಗಳು ವಿಕಸನಗೊಂಡು ಸ್ವಸ್ಥ ಸಮಾಜ ನಿರ್ಮಾಣಕ್ಕೆ ಸಹಾಯಕವಾಗುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ ಬಿ. ಅವರು ಮಾತನಾಡುತ್ತಾ ವಿದ್ಯಾರ್ಥಿಗಳಲ್ಲಿ ಕ್ರೀಡಾ ಸ್ಫೂರ್ತಿಯನ್ನು ಉಳಿಸಲು, ಕ್ರೀಡಾ ಕೂಟಗಳು ಅವಶ್ಯಕ.ಕ್ರೀಡೆಗಳಲ್ಲಿ ಸೋಲು ಎಂಬುದು ಗೆಲುವಿನ ಭಾಗವೆಂಬುದನ್ನು ಮರೆಯಬಾರದು ಎಂದು ಹೇಳಿದರು.

ವೇದಿಕೆಯಲ್ಲಿ ಕಾಲೇಜಿನ ಉಪಪ್ರಾಚಾರ್ಯರಾದ ಡಾ.ರಾಜೇಶ್ ಬಿ. ಹಾಗೂ ಶ್ರೀ ಧ.ಮಂ. ಕ್ರೀಡಾ ಸಂಘದ ಕಾರ್ಯದರ್ಶಿಗಳಾದ ರಮೇಶ್ ಎಚ್. ಅವರು ಉಪಸ್ಥಿತರಿದ್ದರು.ಕಾಲೇಜಿನ ಈ ಪ್ರಾಧ್ಯಾಪಕರಾದ ದಿವ್ಯಾಕುಮಾರಿ ಅವರು ಅಭ್ಯಾಗತರನ್ನು ಸ್ವಾಗತಿಸಿದರು.ಕಾಲೇಜಿನ ದೈಹಿಕ ನಿರ್ದೇಶಕ ಸಂದೇಶ್ ಪೂಂಜಾರವರು ವಂದನಾರ್ಪಣೆ ಸಲ್ಲಿಸಿದರು.ಕಾಲೇಜಿನ ಪ್ರಾಧ್ಯಾಪಕ ದೀಕ್ಷಿತ್ ರೈ ಹಾಗೂ ಧರ್ಮೇಂದ್ರರವರು ಕಾರ್ಯಕ್ರಮ ನಿರ್ವಹಿಸಿದರು.

Exit mobile version