2024: ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು: ಹೊಸ ಹುರುಪು, ನವ ಚೈತನ್ಯದೊಂದಿಗೆ ಹೊಸ ವರ್ಷವನ್ನು ಸಂಭ್ರಮ-ಸಡಗರದಿಂದ ಸ್ವಾಗತಿಸೋಣ: ಡಾ.ಡಿ.ವೀರೇಂದ್ರ ಹೆಗ್ಗಡೆ

0

ಧರ್ಮಸ್ಥಳ: ಎಲ್ಲರಿಗೂ ಹೊಸ ವರ್ಷದ ಶುಭಾಶಯಗಳು.ಹೊಸ ಹುರುಪು, ನವ ಚೈತನ್ಯದೊಂದಿಗೆ ಹೊಸ ವರ್ಷವನ್ನು ಸಂಭ್ರಮ- ಸಡಗರದಿಂದ ಸ್ವಾಗತಿಸೋಣ.

ಹವಾಮಾನ ವೈಪರೀತ್ಯ ಹಾಗೂ ಬದಲಾದ ಸನ್ನಿವೇಶದಲ್ಲಿ ಪ್ರಕೃತಿ-ಪರಿಸರ ಸಂರಕ್ಷಣೆ, ಸ್ವಚ್ಛತೆ ಹಾಗೂ ಆರೋಗ್ಯ ಭಾಗ್ಯ ಕಾಪಾಡುವ ಬಗ್ಗೆ ಎಲ್ಲರೂ ವಿಶೇಷ ಕಾಳಜಿ ವಹಿಸಬೇಕಾದ ಅನಿವಾರ್ಯತೆ ಇದೆ. ದುಃಖ, ದುಮ್ಮಾನಗಳು ದೂರವಾಗಿ ಎಲ್ಲೆಲ್ಲೂ ಪರಸ್ಪರ ಪ್ರೀತಿ-ವಿಶ್ವಾಸ, ಗೌರವದೊಂದಿಗೆ, ಶಾಂತಿ ಸಾಮರಸ್ಯ ಮೂಡಿಬರಲಿ.ಮಾನವೀಯತೆ ಮೆರೆಯಲಿ.ಎಲ್ಲರೂ ಅವರವರ ಕ್ಷೇತ್ರದಲ್ಲಿ ಉನ್ನತ ಸೇವೆ-ಸಾಧನೆ ಮಾಡುವಂತಾಗಲೆಂದು ಆಶಿಸುತ್ತಾ, ಸರ್ವರಿಗೂ ಹೊಸ ವರ್ಷ ಹರ್ಷದಾಯಕವಾಗಲಿ ಎಂದು ಹಾರೈಸುತ್ತೇನೆ.ಎಲ್ಲರಿಗೂ ಶ್ರೀ ಮಂಜುನಾಥ ಸ್ವಾಮಿಯ ಅನುಗ್ರಹವಿರಲಿ ಎಂದು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆಯವರು ತಿಳಿಸಿದರು.
,

LEAVE A REPLY

Please enter your comment!
Please enter your name here