ಬೆಳ್ತಂಗಡಿ ಪಟ್ಟಣ ಪಂಚಾಯತ್ ನಿಂದ ವಿಕಸಿತ ಭಾರತ ಸಂಕಲ್ಪ ಯಾತ್ರೆ, ವಿವಿಧ ಯೋಜನೆಗಳ ಮಾಹಿತಿ ಕಾರ್ಯಾಗಾರ

0

ಬೆಳ್ತಂಗಡಿ: ಬೆಳ್ತಂಗಡಿ ಪಟ್ಟಣ ಪಂಚಾಯತ್ ನಿಂದ ವಿಕಸಿತ ಭಾರತ ಸಂಕಲ್ಪ ಯಾತ್ರೆ, ವಿವಿಧ ಯೋಜನೆಗಳ ಮಾಹಿತಿ ಕಾರ್ಯಾಗಾರ ಬೆಳ್ತಂಗಡಿ ಪಟ್ಟಣ ಪಂಚಾಯತ್ ನಿಂದ ವಿಕಸಿತ ಭಾರತ ಸಂಕಲ್ಪ ಯಾತ್ರೆ, ವಿವಿಧ ಯೋಜನೆಗಳ ಮಾಹಿತಿ ಕಾರ್ಯಾಗಾರಬೆಳ್ತಂಗಡಿ ಪಟ್ಟಣ ಪಂಚಾಯತ್ ಮತ್ತು ಬ್ಯಾಂಕ್ ಆಫ್ ಬರೋಡಾ ಇವರ ಸಂಯೋಗದೊಂದಿಗೆ ವಿಕಸಿತ ಭಾರತ ಸಂಕಲ್ಪ ಯಾತ್ರೆ ಮತ್ತು ಮಾನ್ಯ ಕೇಂದ್ರ ಸರಕಾರದ ಯೋಜನೆಗಳಾದ ಪ್ರಧಾನಮಂತ್ರಿ ಸುರಕ್ಷಾ ವಿಮಾ ಯೋಜನೆ, ಪ್ರಧಾನಮಂತ್ರಿ ಜೀವನ್ ಜ್ಯೋತಿ ವಿಮಾ ಯೋಜನೆ, ಪ್ರಧಾನ ಮಂತ್ರಿ ಶ್ರಮಯೋಗಿ ಮನ್ ಧನ್ ಯೋಜನೆ, ಒನ್ ನೇಷನ್ ಒನ್ ರೇಷನ್ ಕಾರ್ಡ್ ಯೋಜನೆ, ಪಿಎಂ ಜನ್ ಧನ್ ಯೋಜನೆ, BoCW ಅಡಿಯಲ್ಲಿ ನೋಂದಣಿ, ಪ್ರಧಾನ ಮಂತ್ರಿ ಜನನಿ ಸುರಕ್ಷಾ ಯೋಜನೆ, ಪ್ರಧಾನ ಮಂತ್ರಿ ಮಾತೃ ವಂದನಾ ಯೋಜನೆಗಳ ಮಾಹಿತಿ ಮತ್ತು ನೋಂದಣಿ ಕಾರ್ಯಕ್ರಮ ಡಿ.30 ರಂದು ಮಿನಿ ವಿಧಾನಸೌಧ ಮುಂಭಾಗದಲ್ಲಿ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ತಂಗಡಿ ತಹಶೀಲ್ದಾರ್ ಪೃಥ್ವಿ ಸಾನಿಕಂ ವಹಿಸಿದ್ದರು.

ವೇದಿಕೆಯಲ್ಲಿ ಪಟ್ಟಣ ಪಂಚಾಯತ್ ನಿಕಟ ಪೂರ್ವ ಅಧ್ಯಕ್ಷೆ ರಜನಿ ಕುಡ್ವ, ಸಂಪನ್ಮೂಲ ವ್ಯಕ್ತಿ ಉಷಾ ನಾಯಕ್, ನೋಡೆಲ್ ಅಧಿಕಾರಿಯಾಗಿ ಬ್ಯಾಂಕ್ ಆಫ್ ಬರೋಡ ಸುಕೇಶ್ ಕುಮಾರ್ ಹಾಗೂ ಎಸ್.ಬಿ.ಐ ಬ್ಯಾಂಕ್, ಫೆಡರಲ್ ಬ್ಯಾಂಕ್, ಕೆನರಾ ಬ್ಯಾಂಕ್ ವ್ಯವಸ್ಥಾಪಕರು ಉಪಸ್ಥಿತರಿದ್ದರು.ಕಾರ್ಯಕ್ರಮವನ್ನು ಪಟ್ಟಣ ಪಂಚಾಯತ್ ಮುಖ್ಯ ಅಧಿಕಾರಿ ರಾಜೇಶ್ ಸ್ವಾಗತಿಸಿ, ಚಂದ್ರಹಾಸ ಬಹಳಂಜ ನಿರೂಪಿಸಿದರು.

ಭತ್ತದ ಕೃಷಿಯಲ್ಲಿ, ಶಿಕ್ಷಣ ವಿಭಾಗದಲ್ಲಿ ಮತ್ತು ಇತರ ವಿಭಾಗದಲ್ಲಿ ಸಾಧನೆ ಮಾಡಿದವರಿಗೆ ಗೌರವಾರ್ಪಣೆ ಮಾಡಲಾಯಿತು.

LEAVE A REPLY

Please enter your comment!
Please enter your name here