ಧರ್ಮಸ್ಥಳ ಶಾಂತಿವನ ಟ್ರಸ್ಟ್ ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ ಎಸ್.ಡಿ.ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಬಹುಮಾನ

0

ಬೆಳ್ತಂಗಡಿ: ಶಾಂತಿವನ ಟ್ರಸ್ಟ್ ನಡೆಸಿದ ತಾಲೂಕು ಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ವಿಭಾಗದಲ್ಲಿ ನಡೆಸಿದ ವಿವಿಧ ಸ್ಪರ್ಧೆಗಳಲ್ಲಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು ಭಾಗವಹಿಸಿ ವಿವಿಧ ಬಹುಮಾನಗಳನ್ನು ಪಡೆದುಕೊಂಡಿರುತ್ತಾರೆ.

ಪ್ರೌಢಶಾಲಾ ವಿಭಾಗದಲ್ಲಿ 10ನೇ ತರಗತಿಯ ಹಂಸಿನಿ ಭಿಡೆ ಭಾಷಣ ಸ್ಪರ್ಧೆಯಲ್ಲಿ ಪ್ರಥಮ ಬಹುಮಾನ ಹಾಗೂ ಎಂಟನೇ ತರಗತಿಯ ಮಂದಾರ್ ಚಿತ್ರಕಲೆ ಸ್ಪರ್ಧೆಯಲ್ಲಿ ಮೂರನೇ ಬಹುಮಾನ ಪಡೆದಿರುತ್ತಾರೆ. ಪ್ರಥಮ ಸ್ಥಾನ ಪಡೆದ ಹಂಸಿನಿ ಭಿಡೆ ಜಿಲ್ಲಾ ಮಟ್ಟಕ್ಕೆ ಆಯ್ಕೆ ಆಗಿರುತ್ತಾಳೆ.

ಪ್ರಾಥಮಿಕ ಶಾಲಾ ವಿಭಾಗದಲ್ಲಿ 6ನೇ ತರಗತಿಯ ಅಕ್ಷಯ್ ಕೃಷ್ಣ ಚಿತ್ರಕಲಾ ಸ್ಪರ್ಧೆಯಲ್ಲಿ ದ್ವಿತೀಯ ಸ್ಥಾನವನ್ನು ಹಾಗೂ ಏಳನೇ ತರಗತಿಯ ಪ್ರಾಪ್ತಿ ಶೆಟ್ಟಿ ಶ್ಲೋಕ ಕಂಠಪಾಠ ಸ್ಪರ್ಧೆಯಲ್ಲಿ ದ್ವಿತೀಯ ಬಹುಮಾನವನ್ನು ಪಡೆದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.

LEAVE A REPLY

Please enter your comment!
Please enter your name here