ಪುದುವೆಟ್ಟು: ವಾರ್ಷಿಕ ಪ್ರತಿಭಾ ದಿನಾಚರಣೆಯ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನಾ ಸಮಾರಂಭ

0

ಪುದುವೆಟ್ಟು: ಡಿ.29ರಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ವಾರ್ಷಿಕ ಪ್ರತಿಭಾ ದಿನಾಚರಣೆಯ ಸಾಂಸ್ಕೃತಿಕ ಕಾರ್ಯಕ್ರಮದ ಉದ್ಘಾಟನಾ ಸಮಾರಂಭವನ್ನು ಹಮ್ಮಿಕೊಳ್ಳಲಾಯಿತು.ಸಾಂಸ್ಕೃತಿಕ ಕಾರ್ಯಕ್ರಮವನ್ನು ಎಸ್‌ ಡಿ ಎಂ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮ ಪಾಲಾನಾಧಿಕಾರಿಯಾದ ಸೋಮಶೇಖರ್ ರವರು ದೀಪ ಪ್ರಜ್ವಲನೆ ಮಾಡುವುದರ ಮೂಲಕ ಸಾಂಸ್ಕೃತಿಕ ಕಾರ್ಯಕ್ರಮಗಳಿಗೆ ಚಾಲನೆಯನ್ನು ನೀಡಿದರು.

ವಾರ್ಷಿಕ ಪ್ರತಿಭಾ ದಿನಾಚರಣೆಯ ಸಾಂಸ್ಕೃತಿಕ ಕಾರ್ಯಕ್ರಮವನ್ನು ಉದ್ಘಾಟನೆಗೊಳಿಸಿ ಮಾತನಾಡಿದಂತಹ ಸೋಮಶೇಖರ್ ಶೆಟ್ಟಿ ಅವರು ವಾರ್ಷಿಕ ಪ್ರತಿಭಾ ದಿನಾಚರಣೆ ಎನ್ನುವುದು ಮಕ್ಕಳಿಗೆ ಹಬ್ಬದ ದಿನ, ಮಕ್ಕಳೆಲ್ಲರೂ ಸಂತೋಷದಿಂದ ಈ ದಿನವನ್ನು ಕಳೆಯುತ್ತಾರೆ.ಈ ವರ್ಷದ ವಾರ್ಷಿಕ ಪ್ರತಿಭಾ ದಿನಾಚರಣೆಯಲ್ಲಿ ಪುದುವೆಟ್ಟು ಶಾಲೆಯಲ್ಲಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿರುವುದು ಬಹಳಷ್ಟು ಸಂತೋಷವಾಗಿದೆ.ಯಕ್ಷಗಾನ ತುಳುನಾಡ ವೈಭವ ಇಂತಹ ಕಾರ್ಯಕ್ರಮಗಳನ್ನು ಆಯೋಜನೆ ಮಾಡಿರುವುದು ಹಳ್ಳಿಯ ಜನರಿಗೆ ಇದೊಂದು ವಿನೂತನ ಕಾರ್ಯಕ್ರಮವಾಗಿ ಮೂಡಿಬರಲಿದೆ ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಅವರು ಮಕ್ಕಳಿಂದ ರಚಿತವಾಗಿರುವ ಚಿಗುರು ಎನ್ನುವ ಹಸ್ತಪತ್ರಿಕೆಯನ್ನು ಬಿಡುಗಡೆಗೊಳಿಸಿದರು.

ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪಗೌಡರವರು ಶಾಲೆಯ ವಾರ್ಷಿಕ ವರದಿ ವಾಚನವನ್ನು ಮಂಡಿಸಿದರು.ಸಂಜೆಯ ಕಾರ್ಯಕ್ರಮದಲ್ಲಿ ಬಹುಮಾನ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಕಲಿಕೆಯಲ್ಲಿ ಪ್ರಥಮ, ದ್ವಿತೀಯ ಸ್ಥಾನ ಪಡೆದಂತಹ ವಿದ್ಯಾರ್ಥಿಗಳಿಗೆ ಬಹುಮಾನವನ್ನು ನೀಡಿ ಗೌರವಿಸಲಾಯಿತು.ಬಹುಮಾನ ವಿತರಣಾ ಕಾರ್ಯಕ್ರಮವನ್ನು ಶಾಲೆಯ ಹಿರಿಯ ಶಿಕ್ಷಕಿ ತೇಜಾವತಿಯವರು ನಡೆಸಿಕೊಟ್ಟರು.

ಈ ವರ್ಷದ ವಲಯ ಮಟ್ಟದ ಕ್ರೀಡಾಕೂಟದಲ್ಲಿ ಪ್ರಥಮ ದ್ವಿತೀಯ ಸ್ಥಾನ ಪಡೆದಂತಹ ವಿದ್ಯಾರ್ಥಿಗಳಿಗೆ ಶಾಲೆಯ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಟಿಕ್ಕಾ ಸಾಹೇಬ್ ರವರ ವತಿಯಿಂದ ಬಹುಮಾನವನ್ನು ನೀಡಲಾಯಿತು.

ಶಾಲಾ ಪೋಷಕ ವೃಂದದವರಿಗೆ ನಡೆಸಿದ ಆಟೋಟ ಸ್ಪರ್ಧೆಯಲ್ಲಿ ವಿಜೇತರಾದವರಿಗೆ ಕಾರ್ಯಕ್ರಮದಲ್ಲಿ ಬಹುಮಾನವನ್ನು ನೀಡಲಾಯಿತು.ಬಹುಮಾನ ವಿತರಣಾ ಕಾರ್ಯಕ್ರಮವನ್ನು ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಶೀಲಾ ಎನ್ ರವರು ನಡೆಸಿಕೊಟ್ಟರು.

ಈ ವರ್ಷದ ವಾರ್ಷಿಕ ಪ್ರತಿಭಾ ದಿನಾಚರಣೆಯಲ್ಲಿ ನೃತ್ಯಗಳು, ಶಾಲಾ ವಿದ್ಯಾರ್ಥಿಗಳಿಂದ ತುಳುನಾಡು ವೈಭವ, ಶಾಲಾ ವಿದ್ಯಾರ್ಥಿಗಳಿಂದ ಸುದರ್ಶನ ವಿಜಯ ಪ್ರಸಂಗ ಯಕ್ಷಗಾನವನ್ನು ಪ್ರಸ್ತುತಪಡಿಸಲಾಯಿತು.

ವಾರ್ಷಿಕ ಪ್ರತಿಭಾ ದಿನಾಚರಣೆಗೆ ಎಸ್ ಡಿ ಎಂ ಶಿಕ್ಷಣ ಸಂಸ್ಥೆಗಳ ಶಾಲೆಯ ಮುಖ್ಯ ಶಿಕ್ಷಕರುಗಳು, ಸಹ ಶಿಕ್ಷಕರುಗಳು, ಶ್ರೀ ಕ್ಷೇತ್ರ ಧರ್ಮಸ್ಥಳದ ಮಣೆಗಾರರಾದ ವಸಂತ್ ಭಟ್ ರವರು, ಸ್ಥಳೀಯ ಶಾಲೆಯ ಮುಖ್ಯ ಶಿಕ್ಷಕರು ಮತ್ತು ಶಿಕ್ಷಕ ವೃಂದದವರು, ಊರ ಮಹನೀಯರು, ಪುದುವೆಟ್ಟು ಗ್ರಾಮ ಪಂಚಾಯತ್ ನ ಅಧ್ಯಕ್ಷರು ಮತ್ತು ಸದಸ್ಯರುಗಳು, ಪುದುವೆಟ್ಟು ಗ್ರಾಮ ಪಂಚಾಯತ್ ನ ಮಾಜಿ ಅಧ್ಯಕ್ಷರು ಮತ್ತು ಉಪಾಧ್ಯಕ್ಷರು ಮತ್ತು ಸದಸ್ಯರುಗಳು, ಪುದುವೆಟ್ಟು ಹಾಲು ಉತ್ಪಾದಕರ ಸಂಘದ ಅಧ್ಯಕ್ಷರು ಮತ್ತು ಸದಸ್ಯರುಗಳು, ಸ್ಥಳೀಯ ಅಂಗನವಾಡಿ ಕೇಂದ್ರದ ಕಾರ್ಯಕರ್ತೆ ಮತ್ತು ಸಹಾಯಕಿ, ಸ್ಥಳೀಯ ಪ್ರಗತಿಪರ ಕೃಷಿಕರಾದ ಚಿತ್ತರಂಜನ್ ಜೈನ್, ವಾಣಿ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಯದುಪತಿ ಗೌಡ, ಸ್ಥಳೀಯ ವನದುರ್ಗ ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರುಗಳು, ಕೆಇಬಿ ಯ ಎಇ ಆದ ಸುಹಾಸ್, ಪುದುವೆಟ್ಟು ಶಾಲೆಯ ಶಿಕ್ಷಕ ರಕ್ಷಕ ಸಂಘದ ಮಾಜಿ ಅಧ್ಯಕ್ಷ ಅಬ್ದುಲ್ ಗಪೂರ್, ಪುದುವೆಟ್ಟು ಶ್ರೀ ಗಣೇಶೋತ್ಸವ ಸಮಿತಿಯ ಅಧ್ಯಕ್ಷರು ಮತ್ತು ಸದಸ್ಯರುಗಳು, ಉಜಿರೆ ರತ್ನಮಾನಸದ ರವಿಚಂದ್ರ, ಉಜಿರೆ ಶಿಕ್ಷಕರ ತರಬೇತಿ ಕೇಂದ್ರದ ಉಪನ್ಯಾಸಕ ಮಂಜು ಮುಂತಾದವರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದು ಕಾರ್ಯಕ್ರಮವನ್ನು ಚಂದಗಾಣಿಸಿಕೊಟ್ಟರು.

ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ತುಳುನಾಡು ವೈಭವವನ್ನು ಉಜಿರೆಯ ಕುಮಾರಿ ಪ್ರಾವೀಣ್ಯ ಮತ್ತು ಕುಮಾರಿ ಪ್ರಣಾಮ್ಯರ ಮಾರ್ಗದರ್ಶನದಲ್ಲಿ, ಯಕ್ಷಗಾನವನ್ನು ಉಜಿರೆಯ ಕಲಾಕೇಂದ್ರದ ಅರುಣ್ ರವರ ನೇತೃತ್ವದಲ್ಲಿ ಪ್ರಸ್ತುತಪಡಿಸಲಾಯಿತು.

ಸಾಂಸ್ಕೃತಿಕ ಕಾರ್ಯಕ್ರಮದ ನಿರೂಪಣೆಯನ್ನು ಶಾಲೆಯ ಶಿಕ್ಷಕಿಯಾದ ಸುಜಾತಾ ರವರು ನಡೆಸಿಕೊಟ್ಟರು.

ವಾರ್ಷಿಕ ಪ್ರತಿಭಾ ದಿನಾಚರಣೆಗೆ ಆಗಮಿಸಿದ ಗಣ್ಯರನ್ನು ಶಾಲೆಯ ಶಿಕ್ಷಕನಿಶಾಂತ್ ಕುಮಾರ್ ರವರು ಸ್ವಾಗತಿಸಿದರು.ಕಾರ್ಯಕ್ರಮದ ಕೊನೆಯಲ್ಲಿ ಶಾಲೆಯ ಶಿಕ್ಷಕ ಪವನ್ ಕುಮಾರ್ ಅವರು ಆಗಮಿಸಿದ ಎಲ್ಲಾ ವಿದ್ಯಾ ಅಭಿಮಾನಿಗಳಿಗೆ ಧನ್ಯವಾದ ಸಲ್ಲಿಸಿದರು.

ಈ ಸಂದರ್ಭದಲ್ಲಿ ಶಾಲೆಯ ಎಲ್ಲಾ ಶಿಕ್ಷಕ ವೃಂದದವರು ಉಪಸ್ಥಿತರಿದ್ದು ಸಹಕರಿಸಿದರು.ಕಾರ್ಯಕ್ರಮದ ಕೊನೆಯಲ್ಲಿ ಆಗಮಿಸಿದ ಎಲ್ಲರಿಗೂ ಊಟದ ವ್ಯವಸ್ಥೆಯನ್ನು ಕಲ್ಪಿಸಲಾಗಿತ್ತು.

LEAVE A REPLY

Please enter your comment!
Please enter your name here