ನಡ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡ ಇದರ ಶಾಲಾ ನೂತನ ಕಟ್ಟಡದ ಉದ್ಘಾಟನೆ ಜ.6 ರಂದು ನಡೆಯಲಿದೆ ಎಂದು ವಿಧಾನ ಪರಿಷತ್ ಶಾಸಕ ಕೆ.ಹರೀಶ್ ಕುಮಾರ್ ಹೇಳಿದರು.ಅವರು ಜ.1 ರಂದು ಶಾಲೆಯಲ್ಲಿ ಕರೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು.
ನಡ ಗ್ರಾಮದ ಜನರ ಕೂಡುವಿಕೆಯಿಂದ ನಡ ಗುತ್ತು ದೇವಪ್ಪ ಅಜ್ರಿಯವರ ಮುಂದಾಳತ್ವದಲ್ಲಿ 1925 ನವೆಂಬರ್ 9 ರಂದು ಬಸದಿಯ ಛತ್ರದಲ್ಲಿ ಪ್ರಾರಂಭವಾದ ಈ ಶಾಲೆ.ಆಗ ಗ್ರಾಮದಲ್ಲಿ ಒಂದೇ ಶಾಲೆ ಇದ್ದುದರಿಂದ 600ಕ್ಕೂ ಹೆಚ್ಚು ವಿದ್ಯಾರ್ಥಿಗಳು ಇದ್ದರು.ಪ್ರಸ್ತುತ ಗ್ರಾಮದಲ್ಲಿ 6 ಶಾಲೆಗಳು ಇದ್ದರೂ 92 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ.ಈ ಶಾಲೆಯಲ್ಲಿ ಹಳೆಯ ಕಟ್ಟಡ ಇದ್ದುದರಿಂದ ಸರಕಾರ ಅನುದಾನದಲ್ಲಿ ರೂ.1.17 ಕೋಟಿ ವೆಚ್ಚದ 7 ಕೊಠಡಿ, ಶೌಚಾಲಯ, ಸ್ಮಾರ್ಟ್ ಕ್ಲಾಸ್ ಗಳನ್ನು ಒಳಗೊಂಡ ಎಲ್ಲಾ ನೂತನ ಕಟ್ಟಡ ನಿರ್ಮಾಣವಾಗಿದೆ.ಇದರ ಉದ್ಘಾಟನೆ ಜ.6 ರಂದು ನಡೆಯಲಿದೆ.
ಕರ್ನಾಟಕ ಸರಕಾರದ ಸಭಾಧ್ಯಕ್ಷ ಯು. ಟಿ. ಖಾದರ್ ಸಮಾರಂಭದ ಉದ್ಘಾಟನೆಯನ್ನು, ಶಿಕ್ಷಣ ಸಚಿವ ಎಸ್ ಮಧು ಬಂಗಾರಪ್ಪ ನೂತನ ಕಟ್ಟಡವನ್ನು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ ಮಾಡಲಿದ್ದಾರೆ.ಅಧ್ಯಕ್ಷತೆಯನ್ನು ಶಾಸಕ ಹರೀಶ್ ಪೂಂಜ ವಹಿಸಲಿದ್ದಾರೆ.ಸಂಸದ ನಳಿನ್ ಕುಮಾರ್ ಕಟೀಲ್, ರಾಜ್ಯ ಸಭಾ ಸದಸ್ಯರು ಡಾ.ಡಿ.ವೀರೇಂದ್ರ ಹೆಗ್ಗಡೆ, ವಿಧಾನ ಪರಿಷತ್ ಶಾಸಕರುಗಳಾದ ಕೋಟ ಶ್ರೀನಿವಾಸ್ ಪೂಜಾರಿ, ಕೆ.ಹರೀಶ್ ಕುಮಾರ್, ಬಿ.ಎಂ.ಫಾರೂಕ್, ಎಸ್.ಎಲ್.ಭೋಜೆ ಗೌಡ, ಪ್ರತಾಪಸಿಂಹ ನಾಯಕ್, ಮಂಜುನಾಥ್ ಭಂಡಾರಿ, ನಡ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಂಜುಳಾ, ಸರಕಾರಿ ಶಿಕ್ಷಣ ಮಹಾ ವಿದ್ಯಾಲಯದ ಪ್ರಾಂಶುಪಾಲ ಡಾ.ಸಿಪ್ರಿಯನ್ ಮೊಂತೆರೋ, ಶಿಕ್ಷಣ ಇಲಾಖೆಯ ಉಪ ನಿರ್ದೇಶಕ ದಯಾನಂದ ರಾಮಚಂದ್ರ ನಾಯ್ಕ, ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆಯ ಪ್ರಾಂಶುಪಾಲೆ ರಾಜಲಕ್ಷೀ ಕೆ, ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ, ಸಮನ್ವಯಾಧಿಕಾರಿ ಮೋಹನ್ ಕುಮಾರ್ ಧನಂಜಯ ಅಜ್ರಿ ನಡ ಗುತ್ತು, ಪಂಚಾಯತ್ ಸದಸ್ಯರು ಇನ್ನಿತರ ಗಣ್ಯರು ಭಾಗವಸಲಿದ್ದಾರೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಜಿ.ಪ.ಮಾಜಿ ಸದಸ್ಯ ರಾಜಶೇಖರ್ ಅಜ್ರಿ, ಪಂಚಾಯತ್ ಅಧ್ಯಕ್ಷೆ ಮಂಜುಳಾ, ಎಸ್ ಡಿ ಎಂ ಸಿ ಅಧ್ಯಕ್ಷ ವಸಂತ ಗೌಡ, ಮುಖ್ಯ ಶಿಕ್ಷಕಿ ಪುಷ್ಪಾ, ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ವಿಜಯ ಗೌಡ, ಮುನಿರಾಜ ಅಜ್ರಿ, ಸಯ್ಯದ್ ಅಭಿಬ್ ಸಾಹೇಬ್, ಶಶಿಕಿರಣ್ ಜೈನ್, ಪ್ರವೀಣ್ ವಿ.ಜೆ.ಉಪಸ್ಥಿತರಿದ್ದರು.