ಪುದುವೆಟ್ಟು: ವಾರ್ಷಿಕ ಪ್ರತಿಭಾ ದಿನಾಚರಣೆಯ ಅಂಗವಾಗಿ ನಡೆದ ಬಹುಮಾನ ವಿತರಣಾ ಕಾರ್ಯಕ್ರಮ

0

ಪುದುವೆಟ್ಟು: ಡಿ.21ರಂದು ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾಥಮಿಕ ಶಾಲೆ ಪುದುವೆಟ್ಟು ಇಲ್ಲಿ ವಾರ್ಷಿಕ ಪ್ರತಿಭಾ ದಿನಾಚರಣೆಯ ಅಂಗವಾಗಿ ಬಹುಮಾನ ವಿತರಣಾ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.

ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದ ದೇವಾಲಯದ ಪಾರುಪತ್ಯಗಾರರಾದ ಲಕ್ಷ್ಮೀನಾರಾಯಣ್ ರಾವ್, ಶ್ರೀ ಕ್ಷೇತ್ರ ಧರ್ಮಸ್ಥಳದ ಗಿರೀಶ್ ಕುದ್ರಂತಾಯ, ನಿಡ್ಲೆ ಮತ್ತು ಉಜಿರೆ ವಲಯದ ಸಮೂಹ ಸಂಪನ್ಮೂಲ ವ್ಯಕ್ತಿ ಪ್ರತಿಮಾ, ಚಿತ್ತರಂಜನ್ ಜೈನ್, ರಂಜಿತ್, ಶಾಲೆಯ ಶಿಕ್ಷಕ ರಕ್ಷಕ ಸಂಘದ ಅಧ್ಯಕ್ಷ ಟಿಕ್ಕ ಸಾಹೇಬ್, ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪ ಗೌಡ, ಕಾರ್ಯಕ್ರಮದ ಅಧ್ಯಕ್ಷತೆಯನ್ನು ಪುದುವೆಟ್ಟು ಗ್ರಾಮ ಪಂಚಾಯತ್ ನ ಅಧ್ಯಕ್ಷೆ ಅನಿತಾ ಅವರು ವಹಿಸಿಕೊಂಡಿದ್ದರು.

ಮುಖ್ಯ ಅತಿಥಿಯಾಗಿ ಆಗಮಿಸಿ ಮಕ್ಕಳಿಗೆ ಬಹುಮಾನವನ್ನು ವಿತರಿಸಿ ಮಾತನಾಡಿದ ಲಕ್ಷ್ಮೀನಾರಾಯಣ್ ರಾವ್ ರವರು ವಾರ್ಷಿಕ ಪ್ರತಿಭಾ ದಿನಾಚರಣೆ ಎನ್ನುವುದು ಮಕ್ಕಳಿಗೆ ಒಂದು ಹಬ್ಬದ ದಿನವಾಗಿದೆ.ಈ ದಿನ ವಿದ್ಯಾರ್ಥಿಗಳೆಲ್ಲರೂ ಕೂಡ ತಮ್ಮ ನೋವುಗಳನ್ನು ಮರೆತು ಬಹಳ ಆನಂದದಿಂದ ಕಳೆಯುವಂತಹ ಒಂದು ದಿನ.ಪುದುವೆಟ್ಟು ಶಾಲೆಯಲ್ಲಿ ವರ್ಷದಿಂದ ವರ್ಷಕ್ಕೆ ವಿದ್ಯಾರ್ಥಿಗಳ ದಾಖಲಾತಿಯಲ್ಲಿ ಕೂಡ ಹೆಚ್ಚಳವಾಗಿರುವುದು ಸಂತಸದಾಯಕ ವಿಷಯವಾಗಿದೆ ಎಂದು ತಿಳಿಸಿ ಪುದುವೆಟ್ಟಿಗೂ ತನಗೂ ಇರುವಂತಹ ಒಡನಾಟವನ್ನು ಈ ಸಂದರ್ಭದಲ್ಲಿ ಮೇಲುಕು ಹಾಕಿದರು.

ಮುಖ್ಯ ಅತಿಥಿಯಾಗಿ ಆಗಮಿಸಿ ಮಕ್ಕಳಿಗೆ ಬಹುಮಾನ ವಿತರಿಸಿ ಮಾತನಾಡಿದ ಗಿರೀಶ್ ಕುದ್ರಂತಾಯ ರವರು ವಸಂತ ಭಟ್ ರವರ ಅವಧಿಯಿಂದ ಪುದುವೆಟ್ಟು ಶಾಲೆಯ ಸಂಪರ್ಕ ನನಗಾಯಿತು.ಈ ಶಾಲೆಗೆ ಆಗಮಿಸುವುದೆಂದರೆ ಒಂದು ರೀತಿಯ ಸಂತೋಷ.ಪುದುವೆಟ್ಟು ಶಾಲೆಗೆ ಊರಿನ ಪೋಷಕ ಬಂಧುಗಳು ಹೆಚ್ಚಿನ ಸಹಕಾರವನ್ನು ನೀಡುತ್ತಿದ್ದಾರೆ.ಹೀಗಾಗಿ ಶಾಲೆಯಲ್ಲಿ ಮಕ್ಕಳ ಸಂಖ್ಯೆಯು ಹೆಚ್ಚಾಗಿದೆ.ಇಲ್ಲಿಯ ಶಿಕ್ಷಕ ವೃಂದದವರು ಬಹಳಷ್ಟು ಹೆಚ್ಚಿನ ಪರಿಶ್ರಮವನ್ನು ಪಟ್ಟು ಕಲಿಕೆಗೆ ಪೂರಕವಾದ ವಿವಿಧ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಿದ್ದಾರೆ ಎಂದು ಈ ಸಂದರ್ಭದಲ್ಲಿ ಅಭಿಪ್ರಾಯ ಪಟ್ಟರು.

ನಂತರ ಬಹುಮಾನ ವಿತರಿಸಿ ಮಾತನಾಡಿದ ಉಜಿರೆ ಮತ್ತು ನಿಡ್ಲೆ ಕ್ಲಸ್ಟರ್ ನ ಸಮೂಹ ಸಂಪನ್ಮೂಲ ವ್ಯಕ್ತಿ ಪ್ರತಿಮಾ ರವರು ವಿದ್ಯಾರ್ಥಿಗಳು ಕಲಿಕೆಯಲ್ಲಿ ಹೆಚ್ಚಿನ ಪರಿಶ್ರಮ ಪಡಬೇಕಾದರೆ ವಿದ್ಯಾರ್ಥಿಗಳ ಪೋಷಕರು ಕೂಡ ಅಷ್ಟೇ ಕಾಳಜಿಯನ್ನು ವಹಿಸಬೇಕು.ಪ್ರತಿ ವಿದ್ಯಾರ್ಥಿಯ ಮನೆಯಲ್ಲಿ ಪ್ರತಿದಿನ ಕನಿಷ್ಠ ಒಂದು ಗಂಟೆಯಾದರೂ ವಿದ್ಯಾರ್ಥಿಗಳೊಂದಿಗೆ ಪೋಷಕರು ಬೆರೆಯಬೇಕು ಎಂದು ತಿಳಿಸಿದರು.

ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಶಾಲೆಯ ಶಿಕ್ಷಕರಕ್ಷಕ ಸಂಘದ ಅಧ್ಯಕ್ಷ ಟಿಕ್ಕಾ ಸಾಹೇಬ್ ರವರು ವಾರ್ಷಿಕ ಪ್ರತಿಭಾ ದಿನಾಚರಣೆಯು ವರ್ಷದಲ್ಲಿ ಒಂದು ಸಲ ಆಚರಿಸುವಂತಹ ಶಾಲಾ ಹಬ್ಬವಾಗಿದೆ.ಪೋಷಕ ಬಂಧುಗಳು ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕ್ರಮಕ್ಕೆ ಆಗಮಿಸಿ ಕಾರ್ಯಕ್ರಮವನ್ನು ಚಂದಗಾಣಿಸಿ ಕೊಟ್ಟಿದ್ದೀರಿ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದ ಪುದುವೆಟ್ಟು ಗ್ರಾಮ ಪಂಚಾಯತ್ ಅಧ್ಯಕ್ಚೆ ಅನಿತಾ ರವರು ಮುಗ್ಧ ಮನಸ್ಸಿನ ಮಕ್ಕಳಲ್ಲಿ ಅದ್ಬುತ ಪ್ರತಿಭೆಗಳು ಇರುವಂತದ್ದನ್ನು ನಾವು ಕಾಣಬಹುದು.ಇಂತಹ ಪ್ರತಿಭೆಗಳನ್ನು ಅನಾವರಣಗೊಳಿಸಲು ಶಾಲಾ ವಾರ್ಷಿಕ ಪ್ರತಿಭಾ ದಿನಾಚರಣೆಯು ಒಂದು ಉತ್ತಮ ವೇದಿಕೆಯಾಗಿದೆ ಎಂದು ಅಭಿಪ್ರಾಯ ಪಟ್ಟರು.

ಬಹುಮಾನ ವಿತರಣಾ ಕಾರ್ಯಕ್ರಮದಲ್ಲಿ ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಬಹುಮಾನ ಪಡೆದ ಮಕ್ಕಳ ವಿವರವನ್ನು ಶಾಲೆಯ ಶಿಕ್ಷಕಿತಿ ಪುಷ್ಪಲತಾ ರವರು ನೆರವೇರಿಸಿಕೊಟ್ಟರು.ಕ್ರೀಡೆಯಲ್ಲಿ ಬಹುಮಾನವನ್ನು ಪಡೆದ ಮಕ್ಕಳ ವಿವರವನ್ನು ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕಿ ಶೀಲಾ ಎನ್ ರವರು ನೆರವೇರಿಸಿಕೊಟ್ಟರು.ಅಂಗನವಾಡಿಯ ಮಕ್ಕಳಿಗೆ ನಡೆಸಿದಂತಹ ಆಟೋಟ ಸ್ಪರ್ಧೆಗಳ ವಿವರವನ್ನು ಅಂಗನವಾಡಿ ಕಾರ್ಯಕರ್ತೆಯಾದ ಸಂಜೀವಿನಿ ಅವರು ನೆರವೇರಿಸಿ ಕೊಟ್ಟರು.

ವಿದ್ಯಾರ್ಥಿಗಳ ಪ್ರಾರ್ಥನಾ ಗೀತೆಯೊಂದಿಗೆ ಪ್ರಾರಂಭಗೊಂಡ ಕಾರ್ಯಕ್ರಮದಲ್ಲಿ ಶಾಲೆಯ ಮುಖ್ಯ ಶಿಕ್ಷಕ ಶೀನಪ್ಪ ಗೌಡರವರು ಆಗಮಿಸಿದ ಎಲ್ಲಾ ಅತಿಥಿ ಗಣ್ಯರನ್ನು ಪ್ರಾಸ್ತಾವಿಕ ಮಾತುಗಳ ಮೂಲಕ ಸ್ವಾಗತಿಸಿದರು. ಶಾಲಾ ಶಿಕ್ಷಕ ನಿಶಾಂತ್ ಕುಮಾರ್ ರವರು ಕಾರ್ಯಕ್ರಮವನ್ನು ನಿರೂಪಿಸಿದರು.ಶಾಲಾ ಶಿಕ್ಷಕ ಪವನ್ ಕುಮಾರ್ ರವರು ಕಾರ್ಯಕ್ರಮಕ್ಕೆ ಧನ್ಯವಾದಗಳು ಸಮರ್ಪಿಸಿದರು.

ಈ ಸಂದರ್ಭದಲ್ಲಿ ಆಗಮಿಸಿದ ಎಲ್ಲ ವಿದ್ಯಾರ್ಥಿಗಳಿಗೆ ವಾರ್ಷಿಕ ಪ್ರತಿಭಾ ದಿನದ ಅಂಗವಾಗಿ ಮಾತೃಶ್ರೀ ಹೇಮಾವತಿ ಅಮ್ಮನವರ ವತಿಯಿಂದ ವಿದ್ಯಾರ್ಥಿಗಳಿಗೆ ಸಿಹಿತಿಂಡಿಯನ್ನು ವಿತರಿಸಲಾಯಿತು.ಶಾಲೆಯ ಎಲ್ಲಾ ಶಿಕ್ಷಕರು ಈ ಸಂದರ್ಭದಲ್ಲಿದ್ದು ಕಾರ್ಯಕ್ರಮಕ್ಕೆ ಸಹಕರಿಸಿದರು.

LEAVE A REPLY

Please enter your comment!
Please enter your name here