ಉಜಿರೆ: ಇಲ್ಲಿನ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಅನುದಾನಿತ ಹಿರಿಯ ಪ್ರಾರ್ಥಮಿಕ ಶಾಲೆಯ ವಾರ್ಷಿಕ ಪ್ರತಿಭಾ ದಿನಾಚರಣೆಯು ಡಿ.30 ರಂದು ಜರುಗಿತು.
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಸತೀಶ್ಚಂದ್ರ ಎಸ್. ಕಾರ್ಯಕ್ರಮ ಉದ್ಘಾಟಿಸಿ “ಇಂಗ್ಲಿಷ್ ಮಾಧ್ಯಮ ಶಾಲೆಗಳ ಸ್ಪರ್ಧೆಯ ಮದ್ಯೆಯು ಈ ನಮ್ಮ ಎಸ್.ಡಿ.ಎಂ ಕನ್ನಡ ಮಾಧ್ಯಮ ಶಾಲೆಯಲ್ಲಿ 400ಕ್ಕೂ ಮಿಕ್ಕಿ ಮಕ್ಕಳಿರುವುದು ಶಾಲೆಯಲ್ಲಿ ಹಮ್ಮಿಕೊಳ್ಳುವಂತಹ ವಿವಿಧ ಶೈಕ್ಷಣಿಕ ಚಟುವಟಿಕೆಗಳು, ಕಾರ್ಯಕ್ರಮಗಳು ಕಾರಣ.ಹೀಗೆ ಉತ್ತಮ ಗುಣಮಟ್ಟದ ಕಾರ್ಯಕ್ರಮಗಳನ್ನು ನಿರಂತರವಾಗಿ ಹಮ್ಮಿಕೊಳ್ಳುತ್ತಿರಿ ಎಂದು ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.
ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಶಿಕ್ಷಣ ಸಂಸ್ಥೆಗಳ ವಿದ್ಯಾರ್ಥಿ ಕ್ಷೇಮಪಾಲನ ಅಧಿಕಾರಿ ಬಿ.ಸೋಮಶೇಖರ್ ಶೆಟ್ಟಿ ಶಾಲಾ ವಿದ್ಯಾರ್ಥಿಗಳ ಕೈಬರಹದಿಂದ ಮೂಡಿದ ಕಥೆ, ಕವನ, ಪ್ರಬಂಧ ಇತ್ಯಾದಿಗಳನ್ನು ಒಳಗೊಂಡ ಹಸ್ತಪತ್ರಿಕೆ ಜ್ಞಾನ ಜ್ಯೋತಿ ಬಿಡುಗಡೆಗೊಳಿಸಿ ಮಾತನಾಡಿದ ಅವರು ಖಾವಂದರ ಆಶಯದಂತೆ ಎಸ್.ಡಿ.ಎಂ. ಶಿಕ್ಷಣ ಸಂಸ್ಥೆಗಳಲ್ಲಿ ಶಿಕ್ಷಣ ಕೇವಲ ನಾಲ್ಕು ಗೋಡೆಗಳಿಗೆ ಸೀಮಿತವಾಗದೆ ವಿದ್ಯಾರ್ಥಿಗಳ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ ವಾತಾವರಣವನ್ನು ಕಲ್ಪಿಸಲಾಗುತ್ತಿದೆ.ವಿದ್ಯಾರ್ಥಿಗಳು ಹಾಗೂ ಪೋಷಕರು ಇದರ ಸದುಪಯೋಗ ಪಡೆದುಕೊಳ್ಳಿ.ಜೊತೆಗೆ ಜೀವನ ಮೌಲ್ಯಗಳು ರೂಡಿಸಿಕೊಳ್ಳಿ ಎಂದರು.
ಶಾಲೆಯ ಶಿಕ್ಷಕರ ಕ್ಷೇತ್ರ ಸಂಘದ ಅಧ್ಯಕ್ಷ ವಿಜಯ ಜಿ.ಅರಳಿ, ಉಪಾಧ್ಯಕ್ಷ ಅಬೂಬಕ್ಕರ್ ಉಪಸ್ಥಿತರಿದ್ದರು.
ಕ್ರೀಡೆ ಹಾಗೂ ಕಲಿಕೆ ಇತ್ಯಾದಿಗಳಲ್ಲಿ ಸಾಧನೆ ಮಾಡಿದ ಶಾಲೆಯ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಅತಿಥಿಗಳು ಬಹುಮಾನ ನೀಡಿ ಪುರಸ್ಕರಿಸಿದರು.2022-23 ನೇ ಸಾಲಿನಲ್ಲಿ ಉತ್ತಮ ಸಾಧನೆ ಮಾಡಿದ ಶಾಲೆಯ ಹಿರಿಯ ವಿದ್ಯಾರ್ಥಿನಿ ಕುಮಾರಿ ಶೈಮ ಳನ್ನು ನಗದು ಪುರಸ್ಕಾರ ನೀಡಿ ಸನ್ಮಾನಿಸಲಾಯಿತು.
ವಿದ್ಯಾರ್ಥಿಗಳು, ಪೋಷಕರು, ಮುಖ್ಯೋಪಾಧ್ಯಾಯರಾದಿಯಾಗಿ ಶಾಲಾ ಶಿಕ್ಷಕವೃಂದ ಸಿಬ್ಬಂದಿ ವೃಂದ ಶಾಲಾ ಹಿರಿಯ ವಿದ್ಯಾರ್ಥಿಗಳು, ಶಿಕ್ಷಕ ರಕ್ಷಕ ಸಂಘದ ಸದಸ್ಯರು, ಉಪಸ್ಥಿತರಿದ್ದರು.
ಶಾಲೆಯ ನಿವೃತ್ತ ಮುಖ್ಯ ಶಿಕ್ಷಕಿಯರು ಹಾಗೂ ಸಹ ಶಿಕ್ಷಕಿಯರು, ಸಿ.ಆರ್.ಪಿ., ಸ್ಥಳೀಯ ಎಸ್.ಡಿ.ಎಂ.ಶಾಲಾ ಶಿಕ್ಷಕರು ಉಪಸ್ಥಿತರಿದ್ದರು.
ಶಾಲಾ ಮುಖ್ಯ ಶಿಕ್ಷಕ ಬಾಲಕೃಷ್ಣ ನಾಯ್ಕ್ ಶಾಲಾ ಶೈಕ್ಷಣಿಕ ವರದಿ ವಾಚಿಸಿದರು.ಸಹ ಶಿಕ್ಷಕಿ ಅನುಷಾ ಪ್ರಾಸ್ತವಿಸಿ ಕಾರ್ಯಕ್ರಮ ನಿರೂಪಿಸಿದರು.ಶಿಕ್ಷಕ ಕೂಸಪ್ಪ ಸ್ವಾಗತಿಸಿ.ಹಿರಿಯ ಶಿಕ್ಷಕಿ ಗೀತಾ ವಂದಿಸಿದರು.
ಸಾಂಸ್ಕೃತಿಕ ಕಾರ್ಯಕ್ರಮದ ನಿರೂಪಣೆಯನ್ನು ಸಹ ಶಿಕ್ಷಕಿ ಜ್ಯೋತಿ ನೆರವೇರಿಸಿದರು.ಶಾರೀರಿಕ ಶಿಕ್ಷಣ ಶಿಕ್ಷಕ ಗಿರೀಶ್ ಧನ್ಯವಾದ ಸಮರ್ಪಿಸಿದರು.
ವಿದ್ಯಾರ್ಥಿಗಳಿಂದ ಕಾಮಿನಿ ಕಾಪಟ್ಯ ಎಂಬ ಯಕ್ಷಗಾನ ಪ್ರಸಂಗ, ಕುವೆಂಪು ಅವರ ಕರಿಸಿದ್ದ ಎಂಬ ನಾಟಕ ಹಾಗೂ ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು ಪ್ರಸ್ತುತಗೊಂಡವು.