ಬೆಳ್ತಂಗಡಿ: ಪ್ರಸನ್ನ ಫಾರ್ಮಸಿ ಕಾಲೇಜಿನಲ್ಲಿ 2023-24 ನೇ ಸಾಲಿನ ಶೈಕ್ಷಣಿಕ ಕ್ರೀಡಾಕೂಟವನ್ನು ಆಯೋಜಿಸಲಾಗಿತ್ತು.ಕ್ರೀಡೆ ದೈಹಿಕ ಕ್ಷಮತೆಯನ್ನು ಹೆಚ್ಚಿಸುದರ ಜೊತೆಗೆ ಮಾನಸಿಕ ನೆಮ್ಮದಿ ಹಾಗೂ ಆತ್ಮಸ್ಥೈರ್ಯವನ್ನು ವೃದ್ಧಿಸುತ್ತದೆ.ಪಠ್ಯದ ಜೊತೆಗೆ ಪಠ್ಯೇತರ ಚಟುವಟಿಕೆಗಳು ವಿದ್ಯಾರ್ಥಿಯ ವ್ಯಕ್ತಿತ್ವ ವಿಕಾಸನಕ್ಕೆ ಕಾರಣವಾಗುತ್ತದೆ.ವಿದ್ಯಾರ್ಥಿಗಳು ತಮ್ಮ ಸಾಮರ್ಥ್ಯವನ್ನು ಅರಿತುಕೊಂಡು ಆತ್ಮವಿಶ್ವಾಸದೊಂದಿಗೆ ಕ್ರೀಡೆಗಳಲ್ಲಿ ಭಾಗವಹಿಸಬೇಕು ಎಂದು ಮುಖ್ಯ ಅತಿಥಿ ಪ್ರಸನ್ನ ಹಾಸ್ಟೆಲ್ ನ ನಿಲಯಪಾಲಕರು ರಾಧೇಶ್ ಕುಮಾರ್ ಶೈಕ್ಷಣಿಕ ಕ್ರೀಡಾಕೂಟ ಉದ್ಘಾಟಿಸಿ ಮಾತನಾಡಿದರು.
ಇಂದಿನ ಯುವಜನತೆಯಲ್ಲಿ ಕ್ರೀಡಾ ಮನೋಭಾವನೆ ಬೆಳೆದರೆ ಜೀವನದ ಪ್ರತಿಕೂಲ ಪರಿಸ್ಥಿತಿಯಲ್ಲೂ ವಿದ್ಯಾರ್ಥಿಗಳು ಸಾಧನೆ ಮಾಡಿ ಜೀವನವನ್ನು ರೂಪಿಸಿಕೊಳ್ಳುತ್ತಾರೆ.ದೈಹಿಕ ಧೃಡತೆ ಶಿಸ್ತು ಸ್ವಾಭಿಮಾನವನ್ನು ಮತ್ತು ಸಾಹಸ ಗುಣಗಳನ್ನು ಬೆಳೆಸುವುದರೊಂದಿಗೆ ದೇಶಾಭಿಮಾನವು ಬೆಳೆಯುತ್ತದೆ ಎಂದು ಪ್ರಸನ್ನ ಫಾರ್ಮಸಿ ಕಾಲೇಜಿನ ಪ್ರಾಂಶುಪಾಲರು ಡಾ.ಎಂ.ಮಲ್ಲಿಕಾರ್ಜುನ ಗೌಡ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದರು.
ವೇದಿಕೆಯಲ್ಲಿ ಪ್ರಸನ್ನ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲ ಸರ್ವೇಶ್ ಎನ್.ಜಿ ರವರು ಹಾಗೂ ಪ್ರಸನ್ನ ಎಜುಕೇಷನ್ ಟ್ರಸ್ಟ್ ನ ಆಡ್ಮಿನಿಸ್ಟ್ರೇಟಿವ್ ಆಫೀಸರ್ ಹೇಮಂತ್ ಕುಮಾರ್ ರವರು ಹಾಗೂ ಪ್ರಾಧ್ಯಾಪಕ ವೃಂದದವರು ಉಪಸ್ಥಿತರಿದ್ದರು.
ವಿದ್ಯಾರ್ಥಿಗಳ ವಿವಿಧ ತಂಡದಿಂದ ಪಥಸಂಚಲನ ನಡೆಯಿತು.ವಿದ್ಯಾರ್ಥಿಗಳು ಕ್ರೀಡಾಜ್ಯೋತಿಯನ್ನು ತರುವುದರ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.ದ್ವಿತೀಯ ವರ್ಷದ ವಿದ್ಯಾರ್ಥಿನಿ ಸಲ್ಮಾ ಪ್ರತಿಜ್ಞಾವಿಧಿ ಭೋದಿಸಿದರು.ಪ್ರಥಮ ವರ್ಷದ ವಿದ್ಯಾರ್ಥಿನಿ ಪ್ರಿಯಾ ಸ್ವಾಗತಿಸಿ, ಸಲ್ಮಾ ವಂದಿಸಿದರು, ಬಳಿಕ ವಿವಿಧ ರೀತಿಯ ಕ್ರೀಡಾ ಸ್ಪರ್ಧೆಗಳು ನಡೆದವು.