Site icon Suddi Belthangady

ಬುರೂಜ್ ಶಾಲೆಗೆ ವಿಜ್ಞಾನ ಪರೀಕ್ಷೆಯಲ್ಲಿ ರಾಜ್ಯ ಮಟ್ಟದ ಪ್ರಶಸ್ತಿ

ಪುಂಜಾಲಕಟ್ಟೆ: ಬುರೂಜ್ ಆಂಗ್ಲ ಮಾಧ್ಯಮ ಫ್ರೌಡಶಾಲೆ ರಝಾನಗರ ಇಲ್ಲಿಯ ವಿದ್ಯಾರ್ಥಿಗಳು ಚಿಂತನಾ ಪ್ರಕಾಶನ ಚಿತ್ರದುರ್ಗದವರು ಸಂಘಟಿಸಿರುವ ರಾಜ್ಯ ಮಟ್ಟದ ಚಿಂತನಾ ವಿಜ್ಞಾನ ಸ್ಪರ್ಧಾ ಪರೀಕ್ಷೆಯಲ್ಲಿ ರಾಜ್ಯಮಟ್ಟದ ಪ್ರಶಸ್ತಿ ಪಡೆದಿರುತ್ತಾರೆ.

ಬುರೂಜ್ ಶಾಲೆ “ಉತ್ತಮ ರಾಜ್ಯ ಶಾಲೆ ” ಎಂಬ ಮನ್ನಣೆಗೆ ಪಾತ್ರವಾಗಿದೆ.ಒಂಭತ್ತನೆ ತರಗತಿಯ ಮುಹಮ್ಮದ್ ಸಿಫಾಝ್ ರಾಜ್ಯ ಮಟ್ಟದಲ್ಲಿ ಪ್ರಥಮ, ಶಿಥಿಲ್ ಶೆಟ್ಟಿ ಜಿಲ್ಲಾ ಮಟ್ಟದಲ್ಲಿ ಪ್ರಥಮ, ಆರನೇ ತರಗತಿಯ ಪ್ರತೀಕಾ, ಎಂಟನೇ ತರಗತಿಯ ರಝಾ ಅಲಿಖಾನ್ ತಾಲೂಕು ಮಟ್ಟದಲ್ಲಿ ಪ್ರಥಮ ಸ್ಥಾನ ಪಡೆದು ಶಾಲೆಗೆ ಹಾಗೂ ಹೆತ್ತವರಿಗೆ ಕೀರ್ತಿಯನ್ನು ತಂದಿರುತ್ತಾರೆ.

ಶಾಲಾ ಆಡಳಿತ ಮಂಡಳಿ ಮತ್ತು ಶಿಕ್ಷಕ ವೃಂದ ಅಭಿನಂದಿಸಿದೆ.

Exit mobile version