ಸೋಣಂದೂರು: ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ವತಿಯಿಂದ ಸೋಣಂದೂರು ಸ.ಹಿ.ಪ್ರಾ.ಶಾಲೆಗೆ ಧ್ವನಿವರ್ಧಕ ಕೊಡುಗೆ

0

ಸೋಣಂದೂರು: ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ಸೋಣಂದೂರು ಪಣಕಜೆ ಇದರ ಆಶ್ರಯದಲ್ಲಿ ಇತ್ತೀಚೆಗೆ ನಡೆದ 4ನೇ ವರ್ಷದ ಕಬಡ್ಡಿ ಪಂದ್ಯಾಟದ ಅಂಗವಾಗಿ ಸ.ಹಿ.ಪ್ರಾ.ಶಾಲೆ ಸೋಣಂದೂರು ಶಾಲೆಗೆ ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ವತಿಯಿಂದ ಕೊಡುಗೆಯಾಗಿ ನೀಡಿದ ಧ್ವನಿವರ್ಧಕವನ್ನು ಮಾಲಾಡಿ ಗ್ರಾಮ ಪಂಚಾಯತ್ ಅಧ್ಯಕ್ಷರು ಪುನೀತ್ ಕುಮಾರ್ ಶಾಲಾ ಅಧ್ಯಾಪಕರಿಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷ ನಾಗೇಶ್ ಜಿ ಗೌಡ ಮತ್ತು ಮಹಮ್ಮಾಯಿ ಕಟ್ಟೆ ಫ್ರೆಂಡ್ಸ್ ನ ಎಲ್ಲಾ ಪದಾಧಿಕಾರಿಗಳು ಮತ್ತು ಹಳೇ ವಿದ್ಯಾರ್ಥಿಗಳು ಮತ್ತು ಎಸ್.ಡಿ.ಎಂ.ಸಿ ಯ ಸದಸ್ಯರು, ಅಧ್ಯಾಪಕ ವೃಂದದವರು ಮತ್ತು ಮಕ್ಕಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here