Site icon Suddi Belthangady

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೆಳಾಲು ಕಾರ್ಯಕ್ಷೇತ್ರದಲ್ಲಿ ಶ್ರೀ ಜ್ಞಾನ ವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬೆಳಾಲು ಕಾರ್ಯಕ್ಷೇತ್ರದ ಓಂ ಶ್ರೀ ಜ್ಞಾನವಿಕಾಸ ಮಹಿಳಾ ಕೇಂದ್ರದ ವಾರ್ಷಿಕೋತ್ಸವ ಕಾರ್ಯಕ್ರಮವು ಕೊಲ್ಪಾಡಿ ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆಯಿತು.

ಕಾರ್ಯಕ್ರಮದ ಉದ್ಘಾಟನೆಯನ್ನು ನೆರವೇರಿಸಿದ ಬೆಳಾಲು ಗ್ರಾಮ ಪಂಚಾಯತ್ ಅಧ್ಯಕ್ಷೆ ವಿದ್ಯಾರವರು ಮಹಿಳೆಯು ತನ್ನನ್ನು ತಾನು ಮರೆತು ತನ್ನ ಕುಟುಂಬದ ಅತ್ತೆ ಮಾವನ ಗಂಡ ಮಕ್ಕಳ ಸೇವೆಯಲ್ಲಿ ತನ್ನನ್ನು ತಾನು ತೊಡಗಿಸಿಕೊಂಡಿರುತ್ತಾಳೆ.ಒಂದು ಮಹಿಳೆ ಅಭಿವೃದ್ಧಿಯಾದರೆ ಕುಟುಂಬ ಅಭಿವೃದ್ಧಿ ಆಗಲು ಸಾಧ್ಯ ಎಂಬ ನಿಟ್ಟಿನಲ್ಲಿ ಮಹಿಳೆಯರಿಗಾಗಿ ಮಾತೃಶ್ರೀ ಹೇಮಾವತಿ ಅಮ್ಮನವರು ಹಮ್ಮಿಕೊಂಡ ಈ ಜ್ಞಾನ ವಿಕಾಸ ಕಾರ್ಯಕ್ರಮದಿಂದ ಅದೆಷ್ಟು ಮಹಿಳೆಯರಿಗೆ ವಿವಿಧ ಮಾಹಿತಿಯನ್ನು ನೀಡುವುದರೊಂದಿಗೆ ತನ್ನ ಪ್ರತಿಭೆಗಳನ್ನು ಹೊರಹಾಗಲು ಅವಕಾಶ ಕಲ್ಪಿಸಿರುತ್ತಾರೆ ಎಂದು ತಿಳಿಸಿದರು.

ತಾಲೂಕಿನ ಗೌರವಾನ್ವಿತ ಯೋಜನಧಿಕಾರಿಯವರಾದ ಸುರೇಂದ್ರ ರವರು ಜ್ಞಾನವಿಕಾಸ ಕೇಂದ್ರದ ಧ್ಯೇಯೋದ್ದೇಶಗಳ ಬಗ್ಗೆ ಮಾಹಿತಿಯನ್ನು ನೀಡಿದರು.

ಕಾರ್ಯಕ್ರಮದಲ್ಲಿ ಒಕ್ಕೂಟ ಮಾಜಿ ಅಧ್ಯಕ್ಷ ಎಲ್ಯಣ್ಣ ನಾಯಕ್, ನೂತನ ಅಧ್ಯಕ್ಷೆ ನೀಲಾವತಿ, ವಲಯ ಮೇಲ್ವಿಚಾರಕರಾದ ವನಿತಾ, ಜ್ಞಾನವಿಕಾಸ ಸಮನ್ವಯಾಧಿಕಾರಿ ಮಧುರ ಉಪಸ್ಥಿತರಿದ್ದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಜ್ಞಾನ ವಿಕಾಸ ಕೇಂದ್ರದ ಸದಸ್ಯೆ ಲೀಲಾವತಿಯವರು ವಹಿಸಿದ್ದರು.ಸೇವಾ ಪ್ರತಿನಿಧಿ ಪ್ರಮೀಳಾದವರು ನಿರೂಪಿಸಿದ ಈ ಕಾರ್ಯಕ್ರಮದಲ್ಲಿ ಸಾವಿತ್ರಿ ಸ್ವಾಗತಿಸಿ, ಲೀಲಾವತಿ ಧನ್ಯವಾದವಿತ್ತರು.

ಕಾರ್ಯಕ್ರಮದಲ್ಲಿ ಜ್ಞಾನವಿಕಾಸ ಕೇಂದ್ರದ ಸದಸ್ಯರು ವಿವಿಧ ಸಾಂಸ್ಕೃತಿಕ ಕಾರ್ಯಕ್ರಮ ನೀಡಿದರು.

Exit mobile version