ಡಾ.ಅಮೃತ ಸೋಮೇಶ್ವರವರ ನಿಧನಕ್ಕೆ ಡಾ.ಡಿ.ವೀರೇಂದ್ರ ಹೆಗ್ಗಡೆಯವರಿಂದ ಸಂತಾಪ

0

ಬೆಳ್ತಂಗಡಿ: ಕನ್ನಡ, ತುಳು ಸಾರಸ್ವತ ಲೋಕದ ಖ್ಯಾತ ಸಾಹಿತಿಯಾಗಿ, ಸಂಶೋಧಕರಾಗಿ, ಯಕ್ಷಗಾನ ಪ್ರಸಂಗಕರ್ತರಾಗಿ ಪ್ರಸಿದ್ಧರಾಗಿದ್ದ ಡಾ.ಅಮೃತ ಸೋಮೇಶ್ವರವರು ಮೃದು ಸ್ವಭಾವಿ, ಸಹೃದಯಿಯಾಗಿದ್ದರು.ಶ್ರೀ ಕ್ಷೇತ್ರ ಧರ್ಮಸ್ಥಳದ ಯಕ್ಷಗಾನ ಮೇಳಕ್ಕೆ ಪುರಾಣ, ಐತಿಹಾಸಿಕ ಸೇರಿದಂತೆ 11 ಪ್ರಸಂಗಗಳನ್ನು ಬರೆದುಕೊಟ್ಟಿದ್ದರು.ಅವುಗಳ ಯಶಸ್ವಿ ಪ್ರಯೋಗಗಳು ನಡೆಯುತ್ತಿದ್ದವು.ತುಳುವಿನಲ್ಲಿ ಬರೆದ ಅವರ ಅನೇಕ ಹಾಡುಗಳು ಪ್ರಸಿದ್ಧವಾಗಿದ್ದವು.ಕೆಲವು ಹಾಡಿನ ತುಳು ಭಾಷಾಂತರ ಕೂಡ ಮಾಡಿದ್ದರು.

ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ, ಕರ್ನಾಟಕ ಜಾನಪದ ಅಕಾಡೆಮಿಯಿಂದ ಜಾನಪದ ತಜ್ಞ ಪ್ರಶಸ್ತಿ, ಕನ್ನಡ ಸಾಹಿತ್ಯ ಪರಿಷತ್ ಶತಮಾನೋತ್ಸವ ಪ್ರಶಸ್ತಿ, ಯಕ್ಷಗಾನ ಅಕಾಡೆಮಿಯಿಂದ ಪಾರ್ತಿಸುಬ್ಬ ಪ್ರಶಸ್ತಿ ಹೀಗೆ ಅನೇಕ ಪ್ರಶಸ್ತಿಗಳಿಗೆ ಭಾಜನರಾಗಿ ಮೇರು ಸಾಹಿತಿಯಾಗಿದ್ದ ಅವರನ್ನು ಕಳೆದುಕೊಂಡದ್ದು ಸಾಹಿತ್ಯ ಲೋಕಕ್ಕೆ ತುಂಬಲಾರದ ನಷ್ಟ.

ಬದುಕಿನ ಪ್ರಯಾಣದ ನಡುವೆ ಅನಂತ ಸಾಧನೆಗೈದು ಜನಪ್ರಿಯರೂ ಬಹುಮಾನ್ಯರೂ ಆಗಿರುವರು.ಶ್ರೀ ಕ್ಷೇತ್ರ ಧರ್ಮಸ್ಥಳದ ಅಭಿಮಾನಿಗಳಾಗಿದ್ದು ನಿರಂತರ ಸಂಪರ್ಕದಲ್ಲಿದ್ದವರು.ನಾಡು ಇಂದು ಅತ್ಯಂತ ಹಿರಿಯ ಹಾಗೂ ಮೇಧಾವಿ ಸಾಹಿತಿಯನ್ನು ಕಳೆದುಕೊಂಡಿದೆ.ಅವರ ಆತ್ಮಕ್ಕೆ ಚಿರಶಾಂತಿ ದೊರಕುವಂತೆ ಭಗವಾನ್ ಶ್ರೀ ಮಂಜುನಾಥ ಸ್ವಾಮಿ ಅನುಗ್ರಹಿಸಲೆಂದು ಪ್ರಾರ್ಥಿಸುತ್ತೇನೆ ಎಂದು ಡಾ.ಡಿ.ವೀರೇಂದ್ರ ಹೆಗ್ಗಡೆಯವರು ಸಂತಾಪ ಸೂಚಿಸಿದರು.

p>

LEAVE A REPLY

Please enter your comment!
Please enter your name here