ನಡ ಸರಕಾರಿ ಹಿರಿಯ ಪ್ರಾಥಮಿಕ ಶಾಲಾ ನೂತನ ಕಟ್ಟಡ ಉದ್ಘಾಟನೆ

0

ನಡ: ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ನಡ ಇದರ ಶಾಲಾ ನೂತನ ಕಟ್ಟಡದ ಉದ್ಘಾಟನೆ ಜ.6 ರಂದು ನಡೆಯಿತು.

ವಿಧಾನ ಪರಿಷತ್ ಶಾಸಕ ಅನುದಾನದಲ್ಲಿ ರೂ.1.17 ಕೋಟಿ ವೆಚ್ಚದ 7 ಕೊಠಡಿ, ಶೌಚಾಲಯ, ಸ್ಮಾರ್ಟ್ ಕ್ಲಾಸ್ ಉದ್ಘಾಟನೆಗೊಂಡಿತು.

ಸಮಾರಂಭವನ್ನು ಉದ್ಘಾಟಿಸಿ ಅಧ್ಯಕ್ಷತೆಯನ್ನು ಶಾಸಕ ಹರೀಶ್ ಪೂಂಜ ವಹಿಸಿದ್ದರು.ವಿಧಾನ ಪರಿಷತ್ ಮಂಜುನಾಥ್ ಭಂಡಾರಿ ಸ್ಮಾರ್ಟ್ ಕ್ಲಾಸ್ ಉದ್ಘಾಟಿಸಿದರು.ವಿಧಾನ ಪರಿಷತ್ ಶಾಸಕ ಕೆ.ಹರೀಶ್ ಕುಮಾರ್ ಪ್ರಸ್ತಾವಿಕವಾಗಿ ಮಾತನಾಡಿ ಸ್ವಾಗತಿಸಿದರು.

ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್, ನಡ ಗ್ರಾಮ ಪಂಚಾಯತ್ ಅಧ್ಯಕ್ಷೆ ಮಂಜುಳಾ, ಶಿಕ್ಷಣಾಧಿಕಾರಿ ತಾರಾಕೇಸರಿ, ಧನಂಜಯ ಅಜ್ರಿ ನಡ ಗುತ್ತು, ಎಸ್ ಡಿ ಎಂ ಸಿ ಅಧ್ಯಕ್ಷ ವಸಂತ ಗೌಡ, ಮುಖ್ಯ ಶಿಕ್ಷಕಿ ಪುಷ್ಪಾ ಉಪಸ್ಥಿತರಿದ್ದರು.

ಕಾರ್ಯಕ್ರಮದ ಮೊದಲು ಹಾಗೂ ನಂತರ ವಿದ್ಯಾರ್ಥಿ ವಿದ್ಯಾರ್ಥಿನಿಯರಿಂದ ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.

LEAVE A REPLY

Please enter your comment!
Please enter your name here