ಉಜಿರೆ ಎಸ್.ಡಿ.ಎಂ ಪ.ಪೂ ಕಾಲೇಜಿನಲ್ಲಿ ವಾರ್ಷಿಕೋತ್ಸವ

0

ಉಜಿರೆ: ಶ್ರೀ ಧ.ಮಂ.ಪದವಿ ಪೂರ್ವ ಕಾಲೇಜಿನ 2022-23ನೇ ಸಾಲಿನ ಕಾಲೇಜು ವಾರ್ಷಿಕೋತ್ಸವವು ಕಾಲೇಜಿನ ರತ್ನತ್ರಯ ಸಭಾಂಗಣದಲ್ಲಿ ನಡೆಯಿತು.ವಾರ್ಷಿಕೋತ್ಸವ ಕಾರ್ಯಕ್ರಮಕ್ಕೆ ಅಭ್ಯಾಗತರಾಗಿ ಸಿರಿ ಧರ್ಮಸ್ಥಳ ಗ್ರಾಮೋದ್ಯೋಗ ಸಂಸ್ಥೆಯ ಆಡಳಿತ ನಿರ್ದೇಶಕ ಕೆ.ಎನ್.ಜನಾರ್ದನ್ ಅವರು ಆಗಮಿಸಿದ್ದರು.ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶ್ರೀ ಧ.ಮಂ. ಶಿಕ್ಷಣ ಸಂಸ್ಥೆಯ ಕಾರ್ಯದರ್ಶಿ ಡಾ|ಸತೀಶ್ಚಂದ್ರ ಎಸ್ ವಹಿಸಿದ್ದರು.

ಕಾರ್ಯಕ್ರಮದ ಮುಖ್ಯ ಅಭ್ಯಾಗತ ಕೆ.ಎನ್. ಜನಾರ್ದನ್ ಅವರು ಮಾತನಾಡುತ್ತಾ ಇಂದು ಇಡೀ ವಿಶ್ವದಲ್ಲಿ ಭಾರತವು ಯುವ ಸಂಪತ್ತಿನ ಬಲದಿಂದ ಮುಂಚೂಣಿಯತ್ತ ಹೆಜ್ಜೆ ಹಾಕುತ್ತಿದೆ.ಇಂದಿನ ಯುವ ಜನತೆ ದೇಶದ ಭವಿಷ್ಯ.ಜೀವನದಲ್ಲಿ ಯಶಸ್ಸು ಸಿಗಬೇಕೆಂದರೆ ಅದಕ್ಕೆ ಸಾಧನೆಯೊಂದೇ ದಾರಿ.ಆದ್ದರಿಂದ ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಶಿಸ್ತು, ಆಸಕ್ತಿ ಮುಂತಾದ ಗುಣಗಳನ್ನು ಅಳವಡಿಸಿಕೊಂಡು ಸಾಧನೆ ಮಾಡಬೇಕು ಎಂದು ಹೇಳಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಡಾ|ಸತೀಶ್ಚಂದ್ರ ಎಸ್ ಅವರು ಮಾತನಾಡಿ ವಿದ್ಯಾರ್ಥಿಗಳು ಜೀವನದಲ್ಲಿ ಸಾಧನೆ ಮಾಡುವ ಜೊತೆಯಲ್ಲಿ ಉತ್ತಮ ಚಾರಿತ್ರವನ್ನೂ ಮೈಗೂಢಿಸಿಕೊಳ್ಳಬೇಕೆಂದು ಅಭಿಪ್ರಾಯಪಟ್ಟರು.ಕಾಲೇಜಿನ ಉಪಪ್ರಾಚಾರ್ಯರಾದ ಡಾ|ರಾಜೇಶ್ ಬಿ ಅವರು ಅಭ್ಯಾಗತರನ್ನು, ಗಣ್ಯರನ್ನು ಸ್ವಾಗತಿಸಿದರು.ಕಾಲೇಜಿನ ಪ್ರಾಚಾರ್ಯ ಪ್ರಮೋದ್ ಕುಮಾರ್ ಬಿ ಕಾಲೇಜಿನ ವಾರ್ಷಿಕ ವರದಿಯನ್ನು ಮಂಡಿಸಿದರು.

ವೇದಿಕೆಯಲ್ಲಿ ಶ್ರೀ ಧ.ಮಂ.ಪದವಿ ಕಾಲೇಜಿನ ಪ್ರಾಚಾರ್ಯ ಡಾ|ಬಿ.ಎ ಕುಮಾರ್ ಹೆಗ್ಡೆ ಉಪಸ್ಥಿತರಿದ್ದರು.ಕಾಲೇಜಿನ ರಸಾಯನ ಶಾಸ್ತ್ರ ವಿಭಾಗದ ಮುಖ್ಯಸ್ಥ ರಾಜೇಶ್.ಕೆ ಅವರು ವಂದನಾರ್ಪಣೆ ಸಲ್ಲಿಸಿದರು.ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ರಾಜ್ಯಮಟ್ಟದ ರ್‍ಯಾಂಕ್ ವಿಜೇತರಿಗೆ ವಿಶೇಷ ಸನ್ಮಾನ ಮತ್ತು ಶೈಕ್ಷಣಿಕ, ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ನಡೆಯಿತು.ವಿದ್ಯಾರ್ಥಿಗಳಾದ ರಚನಾ, ರಶ್ಮಿತಾ ಹಾಗೂ ಸೌಜನ್ಯರವರು ಕಾರ್ಯಕ್ರಮವನ್ನು ನಿರೂಪಿಸಿದರು.

LEAVE A REPLY

Please enter your comment!
Please enter your name here