ಜ.9: ಉಜಿರೆಯಲ್ಲಿ ಉಚಿತ ನೇತ್ರ ಪರೀಕ್ಷೆ ಮತ್ತು ಚಿಕಿತ್ಸಾ ಶಿಬಿರ

0

ಉಜಿರೆ: ಉಜಿರೆ ರಾಮನಗರದ ಆದರ್ಶ ಸೇವಾ ಸಮಿತಿ ಮತ್ತು ಮಂಗಳೂರು ವೆನ್ಲಾಕ್ ಆಸ್ಪತ್ರೆಯ ಸಂಚಾರಿ ನೇತ್ರ ಚಿಕಿತ್ಸಾ ಘಟಕ, ಜಿಲ್ಲಾ ಅಂಧತ್ವ ನಿವಾರಣಾ ಸಂಸ್ಥೆ ಮತ್ತು ಉಜಿರೆ ಪ್ರಾಥಮಿಕ ಆರೋಗ್ಯ ಕೇಂದ್ರ ಇವುಗಳ ಸಂಯುಕ್ತ ಆಶ್ರಯದಲ್ಲಿ ಉಚಿತ ನೇತ್ರ ಪರೀಕ್ಷೆ ಮತ್ತು ಚಿಕಿತ್ಸಾ ಶಿಬಿರವನ್ನು ಜ.9 ಮಂಗಳವಾರ ಬೆಳಿಗ್ಗೆ 9.30ರಿಂದ ಮದ್ಯಾಹ್ನ 1ರವರೆಗೆ ಉಜಿರೆ ಶ್ರೀ ಶಾರದಾ ಮಂಟಪದಲ್ಲಿ ಆಯೋಜಿಸಲಾಗಿದೆ.

ಬೆಳ್ತಂಗಡಿ ರೋಟರಿ ಕ್ಲಬ್ ಮತ್ತು ಲಯನ್ಸ್ ಕ್ಲಬ್, ಉಜಿರೆಯ ಶ್ರೀ ಶಾರದಾ ಸೇವಾ ಟ್ರಸ್ಟ್ ಮತ್ತು ಶ್ರೀ ಶಾರದಾ ಪೂಜಾ ಸಮಿತಿ ಹಾಗು ಉಜಿರೆ ಎರ್ನೋಡಿ ಶ್ರೀ ಆದಿನಾಗಬ್ರಹ್ಮ ಮೊಗೇರ್ಕಳ ಸೇವಾ ಟ್ರಸ್ಟ್ ಸಹಕಾರದೊಂದಿಗೆ ನಡೆಯಲಿರುವ ಉಚಿತ ನೇತ್ರ ಚಿಕಿತ್ಸಾ ಶಿಬಿರವನ್ನು ಉಜಿರೆ ಶ್ರೀ ಜನಾಧನ ಸ್ವಾಮಿ ದೇವಸ್ಥಾನದ ಅನುವಂಶಿಕ ಆಡಳಿತ ಮೊಕ್ತೇಸರ ಶರತ್ ಕೃಷ್ಣ ಪಡುವೆಟ್ನಾಯರು ಆದರ್ಶ ಸೇವಾ ಸಮಿತಿ ಅಧ್ಯಕ್ಷ ರಮೇಶ್ ಪ್ರಭು ಅವರ ಅಧ್ಯಕ್ಷತೆಯಲ್ಲಿ ಉದ್ಘಾಟಿಸಲಿದ್ದಾರೆ.ಶಿಬಿರದಲ್ಲಿ ನೇತ್ರ ತಜ್ಞರಿಂದ ಕಣ್ಣಿನ ಉಚಿತ ಪರೀಕ್ಷೆ,ಚಿಕಿತ್ಸೆ ಹಾಗು ಸಲಹೆ ನೀಡಲಾಗುವುದು.

ಕಣ್ಣಿನಪೊರೆ ಶಸ್ತ್ರ ಚಿಕಿತ್ಸೆಗೆ ಆಯ್ಕೆಯಾದವರಿಗೆ ಮಂಗಳೂರಿನ ಜಿಲ್ಲಾ ಆಸ್ಪತ್ರೆಯಲ್ಲಿ ಉಚಿತ ಶಸ್ತ್ರ ಚಿಕಿತ್ಸೆ ಮಾಡಲಾಗುವುದು ಹಾಗು ಕನ್ನಡಕದ ಅವಶ್ಯಕತೆ ಇದ್ದವರಿಗೆ ರಿಯಾಯತಿ ದರದಲ್ಲಿ ವಿತರಿಸಲಾಗುವುದು ಎಂದು ಆದರ್ಶ ಸೇವಾ ಸಮಿತಿ ಅಧ್ಯಕ್ಷ ರಮೇಶ್ ಪ್ರಭು ತಿಳಿಸಿ ಶಿಬಿರದ ಪೂರ್ಣ ಪ್ರಯೋಜನ ಪಡೆಯುವಂತೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here