ರಾಷ್ಟ್ರಮಟ್ಟದ ಕರಾಟೆ ಪಂದ್ಯಾಟ- ನಿಶಾನ್ ಹೆಚ್.ಪೂಜಾರಿ ಪ್ರಥಮ ಸ್ಥಾನ ಪಡೆದು ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆ

0

ಉಜಿರೆ : ಹಾಸನ ಡಿಸ್ಟ್ರಿಕ್ಟ್ ಕರಾಟೆ ಅಸೋಸಿಯೇಷನ್, ಮೌಲ್ ಶೂಟೋಕಾನ್ ಕರಾಟೆ ಡೊ ಅಸೋಸಿಯೇಷನ್ ಇಂಡಿಯಾ ಮತ್ತು ಕರ್ನಾಟಕ ರಾಜ್ಯ ಕರಾಟೆ ಅಸೋಸಿಯೇಷನ್ ಸಹಯೋಗದಲ್ಲಿ ಹಾಸನದ ಹಾಸನಾಂಬಾ ಇನ್ ಡೋರ್ ಸ್ಟೇಡಿಯಂ ನಲ್ಲಿ ಜ.7ರಂದು ನಡೆದ ಹಾಸನ್ ಓಪನ್ 3ನೇ ರಾಷ್ಟ್ರಮಟ್ಟದ ಕರಾಟೆ ಪಂದ್ಯಾವಳಿ- 2024 ರಲ್ಲಿ ವೈಯಕ್ತಿಕ ಫೈಟಿಂಗ್ ಮತ್ತು ಕಟಾ ವಿಭಾಗದಲ್ಲಿ ಉಜಿರೆಯ ಅನುಗ್ರಹ ಆಂಗ್ಲ ಮಾಧ್ಯಮ ಶಾಲೆಯ 4ನೇ ತರಗತಿಯ ನಿಶಾನ್ ಹೆಚ್. ಪೂಜಾರಿ ಅವರು ಪ್ರಥಮ ಸ್ಥಾನ ಮತ್ತು 2 ಚಿನ್ನದ ಪದಕ ಪಡೆದು ಅಂತಾರಾಷ್ಟ್ರೀಯ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ.

ನಿಶಾನ್ ಅವರು ಉಜಿರೆಯ ಬರಮೇಲು ನಿವಾಸಿ ರಾಷ್ಟ್ರೀಯ ಹಿಂದೂ ಜಾಗರಣ ವೇದಿಕೆಯ ಗೌರವಾಧ್ಯಕ್ಷ ಹರೀಶ್ ಕುಮಾ‌ರ್ ಬರಮೇಲು ಹಾಗೂ ಯಾಧವಿ ದಂಪತಿ ಪುತ್ರ .ಸೆನ್ಸಾಯ್ ಸಿಹಾನ್ ಅಬ್ದುಲ್ ರಹಮಾನ್ ಅವರಿಂದ ತರಬೇತಿ ಪಡೆದಿದ್ದರು.

LEAVE A REPLY

Please enter your comment!
Please enter your name here