ರಾಮ ಮಂದಿರ ಟ್ರಸ್ಟ್ ನಿಂದ ವೀರೇಂದ್ರ ಹೆಗ್ಗಡೆಯವರಿಗೆ ವಿಶೇಷ ಆಹ್ವಾನ ಪತ್ರಿಕೆ

0

ಧರ್ಮಸ್ಥಳ: ಜನವರಿ 21 ಮತ್ತು 22ರಂದು ಅಯೋದ್ಯೆಯಲ್ಲಿ ನಡೆಯಲಿರುವ ರಾಮಮಂದಿರದ ಐತಿಹಾಸಿಕ ಧಾರ್ಮಿಕ ಕಾರ್ಯಕ್ರಮಗಳಿಗೆ ವಿಶೇಷ ಆಹ್ವಾನ ಪತ್ರಿಕೆಯನ್ನು ರಾಮಮಂದಿರ ಟ್ರಸ್ಟ್ ಧರ್ಮಸ್ಥಳದ ಧರ್ಮಾಧಿಕಾರಿ ಪರಮಪೂಜ್ಯ ಡಾ.ಡಿ. ವೀರೇಂದ್ರ ಹೆಗ್ಗಡೆಯವರಿಗೆ ಕಳುಹಿಸಿದ್ದು, ಅದನ್ನು ವಿಶ್ವಹಿಂದೂ ಪರಿಷತ್ ಮತ್ತು ಭಜರಂಗದಳ ಪ್ರಮುಖರು ಪೂಜ್ಯರಿಗೆ ಇಂದು ಹಸ್ತಾಂತರಗೊಳಿಸಿದರು.

ಈ ಸಂದರ್ಭದಲ್ಲಿ ಮಂಗಳೂರು ಮಹಾನಗರ ಸಹ ಸಂಘ ಚಾಲಕ್ ಸುನಿಲ್ ಆಚಾರ್, ವಿಶ್ವಹಿಂದೂ ಪರಿಷತ್ ಮಂಗಳೂರು ಜಿಲ್ಲಾಧ್ಯಕ್ಷ ಎಚ್.ಕೆ ಪುರುಷೋತ್ತಮ್, ವಿಶ್ವಹಿಂದೂ ಪರಿಷತ್ ಉಪಾಧ್ಯಕ್ಷ ಮನೋಹರ್ ಸುವರ್ಣ, ವಿಶ್ವ ಹಿಂದೂ ಪರಿಷತ್ ಮಂಗಳೂರು ವಿಭಾಗ ಸಾಮರಸ್ಯ ಪ್ರಮುಖ್ ಭಾಸ್ಕರ್ ಧರ್ಮಸ್ಥಳ, ವಿಶ್ವಹಿಂದೂ ಪರಿಷತ್ ಪುತ್ತೂರು ಜಿಲ್ಲಾಧ್ಯಕ್ಷ ಡಾ.ಕೃಷ್ಣಪ್ರಸನ್ನ, ಭಜರಂಗದಳ ಜಿಲ್ಲಾ ಸಂಚಾಲಕ ಭರತ್ ಕುಮ್ಡೇಲು, ವಿಶ್ವಹಿಂದೂ ಪರಿಷತ್ ಮಂಗಳೂರು ಕಾರ್ಯದರ್ಶಿ ಶಿವಾನಂದ ಮೆಂಡನ್ ಮತ್ತಿತರರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here