ಬೆಳ್ತಂಗಡಿ ತಾಲೂಕು ಆಸ್ಪತ್ರೆಯಲ್ಲಿ ಬಾಣಂತಿಯರಿಗೆ ಆರೋಗ್ಯದ ಬಗ್ಗೆ ಮಾಹಿತಿ ಕಾರ್ಯಾಗಾರ, ಗರ್ಭಿಣಿಯರಿಗೆ ಸಾಮೂಹಿಕ ಸೀಮಂತ

0

ಬೆಳ್ತಂಗಡಿ: ಕರ್ನಾಟಕ ಸರಕಾರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಕರ್ನಾಟಕ ರಾಜ್ಯ ಏಡ್ಸ್ ನಿಯಂತ್ರಣ ಸೊಸೈಟಿ ಬೆಂಗಳೂರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಮಂಗಳೂರು ಜಿಲ್ಲಾ ಏಡ್ಸ್ ನಿಯಂತ್ರಣ ಹಾಗೂ ತಡೆಗಟ್ಟುವ ಘಟಕ, ಮಂಗಳೂರು ತಾಲೂಕು ಆರೋಗ್ಯಾಧಿಕಾರಿ ಕಚೇರಿ, ತಾಲೂಕು ಸಾರ್ವಜನಿಕ ಆಸ್ಪತ್ರೆ ಬೆಳ್ತಂಗಡಿ ಇವರ ಸಹಯೋಗದಲ್ಲಿ ತಾಯಿಯಿಂದ ಮಗುವಿಗೆ ಹರಡುವ ಹೆಚ್.ಐ.ವಿ, ಸಿಫಿಲಿಸ್ ಮತ್ತು ಹೆಪಟೈಟಿಸ್‌ ನಿರ್ಮೂಲನೆ ಆಂದೋಲನ ಕಾರ್ಯಕ್ರಮದ ಮೂಲಕ ಆರೋಗ್ಯದ ಬಗ್ಗೆ ಮಾಹಿತಿಯನ್ನು ನೀಡಲಾಯಿತು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಬೆಳ್ತಂಗಡಿಯ ತಾಲೂಕು ಆಸ್ಪತ್ರೆ ಆಡಳಿತ ವೈದ್ಯಾಧಿಕಾರಿ ಡಾ.ಚಂದ್ರಕಾಂತ್ ವಹಿಸಿದ್ದರು ಹಾಗೂ ನೇತ್ರ ತಜ್ಞ ವೈದ್ಯಾಧಿಕಾರಿ ಡಾ.ರಮೇಶ್, ದಂತ ವೈದ್ಯೆ ಡಾ.ಹೇಮಲತಾ, ಸ್ತ್ರೀ ರೋಗ ತಜ್ಞ ಜಾನೀಸ್, ಐಸಿಟಿಸಿ ಆಪ್ತ ಸಮಾಲೋಚಕ ಬೆಳ್ತಂಗಡಿ ತಾಲೂಕು ಆಸ್ಪತ್ರೆಯ ಧರ್ಮಪಾಲ್ ಭಾಗವಹಿಸಿದರು.

ಸಿಫಿಲಿಸ್ ಮತ್ತು ಹೆಪಟೈಟಿಸ್‌ ನಿರ್ಮೂಲನೆ ಬಗ್ಗೆ ಡಾ.ಚಂದ್ರಕಾಂತ್ ಮಾಹಿತಿ ನೀಡಿದರು.ಡಾ.ರಮೇಶ್ ಗರ್ಭಿಣಿಯರಿಗೆ ಕಣ್ಣಿನ ಸುರಕ್ಷತೆ ಹಾಗೂ ಕಾಳಜಿ ವಹಿಸುವ ಬಗ್ಗೆ ಮಾಹಿತಿ ನೀಡಿದರು.ಡಾ.ಜಾನೀಸ್ ಹೆಚ್.ಐ.ವಿ ಮತ್ತು ಸಿಫಿಲಿಸ್ ಹಾಗೂ ಗರ್ಭಿಣಿಯರ ಆಗೋಗ್ಯದ ಕುರಿತು ಮಾಹಿತಿ ನೀಡಿದರು.

ಧರ್ಮಪಾಲ್ ರವರು ಪ್ರಾಸ್ತಾವಿಕ ಭಾಷಣ ನೀಡಿ ಹೆಚ್.ಐ.ವಿ ಹರಡುವ ವಿಧಾನ, ರೋಗ ಲಕ್ಷಣ, ತಡೆಗಟ್ಟುವ ಕ್ರಮ, ಚಿಕಿತ್ಸೆ ಕುರಿತಾಗಿ ಮಾಹಿತಿ ನೀಡಿದರು.

ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಬೆಳ್ತಂಗಡಿ ತಾಲೂಕಿನ ಸುಮಾರು 40 ಗರ್ಭಿಣಿ ತಾಯಂದಿರಿಗೆ ಆರೋಗ್ಯ ಇಲಾಖೆ ವತಿಯಿಂದ ಸಾಮೂಹಿಕ ಸೀಮಂತ ಕಾರ್ಯಕ್ರಮ ನಡೆಸಲಾಯಿತು.

ಲೀಲಾವತಿ ಎಲ್.ಎಚ್.ವಿ ತಾಲೂಕು ಆರೋಗ್ಯಾಧಿಕಾರಿ ಕಛೇರಿ ಬೆಳ್ತಂಗಡಿ ಹಾಗೂ ಮರಿಯಮ್ಮ ಹಿರಿಯ ಆರೋಗ್ಯ ಸುರಕ್ಷಾಧಿಕಾರಿ ಉಪಸ್ಥಿತರಿದ್ದರು.

ಕಾರ್ಯಕ್ರಮ ನಿರೂಪಣೆಯನ್ನು ಬೆಳ್ತಂಗಡಿ ತಾಲೂಕು ಆರೋಗ್ಯಾಧಿಕಾರಿ ಕಚೇರಿಯ ಸಿಬ್ಬಂದಿ ಅಜೇಯ್ ನೆರವೇರಿಸಿದರು. ರಮ್ಯ.ಬಿ ಆಪ್ತ ಸಮಾಲೋಚಕಿ ಆರ್.ಕೆ.ಎಸ್.ಕೆ ವಂದಿಸಿದರು.

LEAVE A REPLY

Please enter your comment!
Please enter your name here