ಉಜಿರೆ: ಉಜಿರೆ ಗ್ರಾಮ ಪಂಚಾಯತ್ ನ 2023-24ನೇ ಸಾಲಿನ ದ್ವಿತೀಯ ಹಂತದ ಗ್ರಾಮಸಭೆ ಜ.10 ರಂದು ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾಕಿರಣ್ ಕಾರಂತ್ ಇವರ ಅಧ್ಯಕ್ಷತೆಯಲ್ಲಿ ಶಾರದಾ ಮಂಟಪದಲ್ಲಿ ನಡೆಯಿತು.
ಮಾರ್ಗದರ್ಶಿ ಅಧಿಕಾರಿಯಾಗಿ ನೆರಿಯ ಪಶು ಆಸ್ಪತ್ರೆಯ ಪಶು ವೈದ್ಯಾಧಿಕಾರಿ ಡಾ.ಯತೀಶ್ ಕುಮಾರ್ ಭಾಗವಹಿಸಿ ಗ್ರಾಮ ಸಭೆಯನ್ನು ಮುನ್ನಡೆಸಿದರು.
ಉಪಾಧ್ಯಕ್ಷ ರವಿ ಕುಮಾರ್ ಬರಮೇಲು, ಪಂಚಾಯತ್ ಸದಸ್ಯರು, ವಿವಿಧ ಇಲಾಖೆಯ ಅಧಿಕಾರಿಗಳು, ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು ಗ್ರಾಮಸ್ಥರು ಹಾಜರಿದ್ದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ಪಿ.ಹೆಚ್.ಪ್ರಕಾಶ್ ಶೆಟ್ಟಿ ಸ್ವಾಗತಿಸಿ, ಕಾರ್ಯಕ್ರಮ ನಿರ್ವಹಿಸಿದರು.ಕಾರ್ಯದರ್ಶಿ ಶ್ರವಣ್ ಕುಮಾರ್ ಕಳೆದ ಗ್ರಾಮ ಸಭೆಯ ನಡವಳಿಗಳ ಬಗ್ಗೆ ಅನುಪಾಲನಾ ವರದಿ ವಾಚಿಸಿದರು.
ಪಂಚಾಯತ್ ಸಿಬ್ಬಂದಿಗಳು ಸಹಕರಿಸಿದರು.
p>