Site icon Suddi Belthangady

ತಾಲೂಕು ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳಿಂದ ಡಾ.ವೀರೇಂದ್ರ ಹೆಗ್ಗಡೆ, ಬ್ರಹ್ಮಾನಂದ ಶ್ರೀಗಳ ಭೇಟಿ

ಬೆಳ್ತಂಗಡಿ: ತಾಲೂಕು ಪತ್ರಕರ್ತರ ಸಂಘದ ನೂತನ ಪದಾಧಿಕಾರಿಗಳು ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರನ್ನು ಹಾಗೂ ಕನ್ಯಾಡಿ ಶ್ರೀ ರಾಮ ಕ್ಷೇತ್ರದ ಪೀಠಾಧಿಪತಿ ಸದ್ಗುರು ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರನ್ನು ಭೇಟಿ ಮಾಡಿ ಆಶೀರ್ವಾದ ಪಡೆದರು.

ಧರ್ಮಸ್ಥಳ ಕ್ಷೇತ್ರದ ಡಿ.ಹರ್ಷೇಂದ್ರ ಕುಮಾರ್, ಎಸ್.ಡಿ.ಎಂ ಶಿಕ್ಷಣ ಸಂಸ್ಥೆಗಳ ಕಾರ್ಯದರ್ಶಿ ಡಾ.ಎಸ್.ಸತೀಶ್ಚಂದ್ರ, ಡಾ.ಡಿ.ವೀರೇಂದ್ರ ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವೀರು ಶೆಟ್ಟಿ ಅವರನ್ನು ಭೇಟಿಯಾಗಿ ಸಂಘದ ಮುಂದಿನ ಕಾರ್ಯಯೋಜನೆಗಳ ಬಗ್ಗೆ ಸಮಾಲೋಚನೆ ನಡೆಸಿದರು.

ಈ ಸಂದರ್ಭದಲ್ಲಿ ಪತ್ರಕರ್ತರ ಸಂಘದ ನೂತನ ಅಧ್ಯಕ್ಷ ಚೈತ್ರೇಶ್ ಇಳಂತಿಲ, ಕಾರ್ಯದರ್ಶಿ ಗಣೇಶ್ ಬಿ.ಶಿರ್ಲಾಲು, ಕೋಶಾಧಿಕಾರಿ ಪುಷ್ಪರಾಜ್ ಶೆಟ್ಟಿ, ಉಪಾಧ್ಯಕ್ಷ ಶಿಬಿ ಧರ್ಮಸ್ಥಳ, ಜೊತೆ ಕಾರ್ಯದರ್ಶಿ ಮನೋಹರ್ ಬಳಂಜ ಅವರನ್ನು ಗೌರವಿಸಿದರು.

ಪತ್ರಕರ್ತರ ಸಂಘದ ಜಿಲ್ಲಾ ಕಾರ್ಯದರ್ಶಿ ಭುವನೇಶ್ ಜಿ.ಗೇರುಕಟ್ಟೆ, ತಾಲೂಕು ಪತ್ರಕರ್ತರ ಸಂಘದ ಸದಸ್ಯರಾದ ದೇವಿಪ್ರಸಾದ್, ಆರ್.ಎನ್.ಪೂವಣಿ, ಶ್ರೀನಿವಾಸ್ ತಂತ್ರಿ, ಅರವಿಂದ ಹೆಬ್ಬಾರ್, ಜಾರಪ್ಪ ಪೂಜಾರಿ ಬೆಳಾಲು, ತುಕರಾಮ್ ಬಿ, ಪ್ರಸಾದ್ ಶೆಟ್ಟಿ ಎಣಿಂಜೆ, ಸಂತೋಷ್ ಪಿ.ಕೋಟ್ಯಾನ್ ಬಳಂಜ, ಧನಕೀರ್ತಿ ಆರಿಗ ಉಪಸ್ಥಿತರಿದ್ದರು.

Exit mobile version