ಹೊಸಗಂಡಿ ಗ್ರಾ.ಪಂ ನ ದ್ವಿತೀಯ ಸುತ್ತಿನ ಗ್ರಾಮ ಸಭೆ

0

ಹೊಸಂಗಡಿ ಗ್ರಾಮ ಪಂಚಾಯತ್ ನ 2023-24ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆ ಗ್ರಾ.ಪಂ.ಅಧ್ಯಕ್ಷ ಜಗದೀಶ್ ಅಧ್ಯಕ್ಷತೆಯಲ್ಲಿ ಜ.12 ಗ್ರಾಮ ಪಂಚಾಯತ್ ನ ಸಭಾವನದಲ್ಲಿ ನಡೆಯಿತು.

ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಚಂದ್ರಶೇಖರ್ ರವರ ಮಾರ್ಗದರ್ಶನದಲ್ಲಿ ಸಭೆ ನಡೆಯಿತು.

ಕಂದಾಯ ಇಲಾಖೆ, ಕೃಷಿ ಇಲಾಖೆ, ಅರಣ್ಯ ಇಲಾಖೆ, ಪೊಲೀಸ್ ಇಲಾಖೆ, ಮೆಸ್ಕಾಂ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಆರೋಗ್ಯ ಇಲಾಖೆ ಹಾಗೂ ಪಶುಸಂಗೋಪನಾ ಇಲಾಖೆಯ ಅಧಿಕಾರಿಗಳು ಇಲಾಖಾ ಮಾಹಿತಿ ನೀಡಿದರು.

ಗ್ರಾಮದ ಅಭಿವೃದ್ಧಿಗೆ ಪೂರಕವಾದ ಚರ್ಚೆಗಳು ನಡೆಯಿತು.

ಗ್ರಾ.ಪಂ. ಉಪಾಧ್ಯಕ್ಷೆ ಶಾಂತ ಕೃಷ್ಣ, ಗ್ರಾ.ಪಂ.ಸದಸ್ಯರುಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

ಪಿಡಿಓ ಗಣೇಶ್ ಸ್ವಾಗತಿಸಿದರು.ಗ್ರಾ.ಪಂ.ಸಿಬ್ಬಂದಿಗಳು ಸಹಕರಿಸಿದರು.

LEAVE A REPLY

Please enter your comment!
Please enter your name here