Site icon Suddi Belthangady

ಉಜಿರೆ ಶ್ರೀ ಧ.ಮಂ.ಮಹಿಳಾ ಕೈಗಾರಿಕಾ ಸಂಸ್ಥೆಯಲ್ಲಿ ರಾಷ್ಟ್ರೀಯ ಯುವ ದಿನಾಚರಣೆ-ಯುವ ಜನರ ಪ್ರೀತಿ, ಯುವ ಜನರಿಂದಲೇ ಅಭಿವೃದ್ಧಿ ಅದಕ್ಕಾಗಿ ರಾಷ್ಟ್ರೀಯ ಯುವ ದಿನ ಆಚರಣೆ: ಡಾ.ಶ್ರೀಧರ್ ಭಟ್

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಮಹಿಳಾ ಕೈಗಾರಿಕಾ ಸಂಸ್ಥೆ ಉಜಿರೆ ಇಲ್ಲಿ ಜ.12ರಂದು ರಾಷ್ಟ್ರೀಯ ಯುವ ದಿನಾಚರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು.ಈ ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಯಾಗಿ ಶ್ರೀ ಧ.ಮಂ.ಸ್ವಾಯತ್ತ ಕಾಲೇಜಿನ ಸಂಸ್ಕೃತ ಪ್ರಾಧ್ಯಾಪಕ ಡಾ.ಶ್ರೀಧರ್ ಭಟ್ ಅವರು ದೀಪ ಬೆಳಗಿಸಿ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು.

ಈ ಸಂದರ್ಭದಲ್ಲಿ ಮಾತನಾಡಿದ ಅವರು ಇವತ್ತಿನ ದಿನ ಯುವಜನರ ಪ್ರೀತಿ ಯುವ ಜನರಿಂದಲೇ ಅಭಿವೃದ್ಧಿ ಎಂಬ ಉದ್ದೇಶ ಇಟ್ಟುಕೊಂಡು ಆಚರಿಸಲಾಗುತ್ತಿದ್ದು ಅತಿ ಹೆಚ್ಚು ಯುವಜನ ಇರುವ ಭಾರತ ದೇಶವನ್ನು ಪುನರ್ಜೀವನ ಮಾಡಲು ಯುವ ಜನರಿಂದಲೇ ಸಾಧ್ಯ ವಿದ್ಯಾರ್ಥಿ ಜೀವನವನ್ನು ಸರಿಯಾಗಿ ಬಳಸಿಕೊಳ್ಳಬೇಕು ಇಲ್ಲವಾದಲ್ಲಿ ಮುಂದೆ ಪಶ್ಚಾತ್ತಾಪ ಪಡಬೇಕಾಗುತ್ತದೆ.ನಿಮ್ಮಲ್ಲಿ ಅದ್ಬುತವಾದ ಭವಿಷ್ಯವಿದೆ ಅದನ್ನು ಸರಿಯಾಗಿ ಬಳಸಿದರೆ ಭಾರತವನ್ನು ವಿಶ್ವಗುರುವನ್ನಾಗಿ ಮಾಡಲು ಸಾದ್ಯ ಎಂಬ ಸ್ವಾಮಿ ವಿವೇಕಾನಂದರ ಮಾತುಗಳನ್ನು ಪುನರುಚ್ಚಿಸಿದ ಅವರು ವಿದ್ಯಾರ್ಥಿಗಳು ಏಕಾಗ್ರತೆ, ಆತ್ಮವಿಶ್ವಾಸ ಮತ್ತು ಚಾರಿತ್ಯ ಈ ಮೂರು ಗುಣಗಳನ್ನು ಪೂರ್ಣ ಪ್ರಮಾಣದಲ್ಲಿ ತೊಡಗಿಸಿಕೊಂಡಲ್ಲಿ ಯಾವುದೇ ಕೆಲಸದಲ್ಲೂ ಯಶಸ್ಸು ಗ್ಯಾರಂಟಿ.ಯಾವುದೇ ಕೆಲಸವನ್ನು ಆಲೋಚಿಸಿ ಮಾಡಿ, ಹಿತವಾಗುವಂತೆ ಮಾತನಾಡಿ ಎಂದು ಹೇಳಿ ಶುಭ ಹಾರೈಸಿದರು.

ವೇದಿಕೆಯಲ್ಲಿ ಉಪಸ್ಥಿತರಿದ್ದ ಸಂಸ್ಥೆಯ ಪ್ರಾಂಶುಪಾಲ ವಿ.ಪ್ರಕಾಶ್ ಕಾಮತ್ ಇವರು ಮಾತನಾಡಿ ವಿವೇಕಾನಂದರ ಆದರ್ಶಗಳನ್ನು ನಾವೆಲ್ಲರೂ ಮೈಗೂಡಿಸಿಕೊಂಡು ಸಮಾಜದ ಏಳಿಗೆಗೆ ಶ್ರಮಿಸೋಣ ಎಂದು ವಿನಂತಿ ಮಾಡಿಕೊಂಡರು.ಸಂಸ್ಥೆಯ ಕಿರಿಯ ತರಬೇತಿ ಅಧಿಕಾರಿಗಳು ಹಾಗೂ ವಿದ್ಯಾರ್ಥಿನಿಯರು ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು

ಮಿಸ್ ಶಾಲಿನಿ ಕಾರ್ಯಕ್ರಮ ನಿರೂಪಿಸಿದರು ಹಾಗೂ ನಾಗಶ್ರೀ ಅತಿಥಿಗಳ ಪರಿಚಯ ಹೇಳಿ, ಎಲ್ಲರನ್ನೂ ಸ್ವಾಗತಿಸಿ, ವಂದಿಸಿದರು‌.

Exit mobile version