ಬೆಳ್ತಂಗಡಿ ಸ.ಪ್ರ.ದ.ಕಾಲೇಜಿನಲ್ಲಿ ರಾಷ್ಟ್ರೀಯ ಯುವ ದಿನ ಆಚರಣೆ

0

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಬೆಳ್ತಂಗಡಿ ಇಲ್ಲಿಯ ರೋವರ್ ರೇಂಜರ್ಸ್, ಯುವ ರೆಡ್ ಕ್ರಾಸ್ ಘಟಕ, ರಾಷ್ಟ್ರೀಯ ಸೇವಾ ಯೋಜನೆ ಹಾಗೂ ಸ್ನಾತ್ತಕೋತ್ತರ ವಿಭಾಗದ ಸಂಯುಕ್ತ ಆಶ್ರಯದಲ್ಲಿ ಜ.12ರಂದು ರಾಷ್ಟ್ರೀಯ ಯುವ ದಿನವನ್ನು ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳಾಗಿದ್ದ ಡಾ.ಸುಬ್ರಹ್ಮಣ್ಯ ಕೆ. ಇವರು ಮಾತನಾಡಿ ಸ್ವಾಮಿ ವಿವೇಕಾನಂದರ ಸಂದೇಶ ಇಂದಿನ ಯುವ ಜನತೆಗೆ ದಾರಿದೀಪವಾಗಿದೆ ಅವರ ಆದರ್ಶಗಳು ಮುಂದಿನ ಅನೇಕ ಪೀಳಿಗೆಗಳಿಗೆ ದರ್ಶಿತ್ವವನ್ನು ನೀಡುತ್ತದೆ ಎಂದು ತಿಳಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊಫೆಸರ್ ರಾಘವ ಎನ್. ಇವರು ವಹಿಸಿದ್ದರು.

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಪುಂಜಾಲಕಟ್ಟೆ ಇದರ ನಿಕಟಪೂರ್ವ ಪ್ರಾಂಶುಪಾಲರಾದ ಡಾ. ಶರತ್ ಕುಮಾರ್ ಟಿ ಕೆ ಇವರು ಅತಿಥಿಗಳಾಗಿದ್ದರು.

ವೇದಿಕೆಯಲ್ಲಿ ಸ್ನಾತ್ತಕೋತ್ತರ ವಿಭಾಗದ ಸಂಯೋಜಕರಾದ ಡಾ.ರವಿ ಎಂ ಎನ್, ರೇಂಜರ್ ಲೀಡರ್ ಪ್ರೊಫೆಸರ್ ರಾಜೇಶ್ವರಿ ಎಚ್ಎಸ್, ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ಪ್ರೊಫೆಸರ್ ಪದ್ಮನಾಭ ಹಾಗೂ ವಾಣಿಜ್ಯ ವಿಭಾಗದ ಪ್ರಾಧ್ಯಾಪಕರಾದ ಪ್ರೊಫೆಸರ್ ನವೀನ್ ಉಪಸ್ಥಿತರಿದ್ದರು.

ಕುಮಾರಿ ಪವಿತ್ರ ಸ್ವಾಗತಿಸಿ, ಪ್ರಜ್ಞ ವಂದನಾರ್ಪಣೆಗೈದರು.ಲೋಲಾಕ್ಷ ಇವರು ಕಾರ್ಯಕ್ರಮವನ್ನು ನಿರೂಪಿಸಿದರು.

LEAVE A REPLY

Please enter your comment!
Please enter your name here