ಮರೋಡಿ: 2023-24ನೇ ಸಾಲಿನ ವಿಕಲಚೇತನರ ಸಮನ್ವಯ ಗ್ರಾಮ ಸಭೆಯು ಗ್ರಾಮ ಪಂಚಾಯತ್ ಸಭಾಭವನದಲ್ಲಿ ನಡೆಯಿತು.
ಸಭೆಯ ಅಧ್ಯಕ್ಷತೆಯನ್ನು ಗ್ರಾಮ ಪಂಚಾಯತ್ ಅಧ್ಯಕ್ಷ ರತ್ನಾಕರ್ ಬುಣ್ಣಾನ್ ವಹಿಸಿದ್ದರು.
ವಿಕಲಚೇತನರನ್ನು ಸಮಾಜದ ಮುಖ್ಯವಾಹಿನಿಗೆ ತರಲು, ಸ್ವಾಭಿಮಾನದಿಂದ ಜೀವನ ನಡೆಸಲು ಅನುವಾಗುವಂತಹ ಕಾರ್ಯಕ್ರಮಗಳನ್ನು ಗ್ರಾಮ ಪಂಚಾಯತ್ ವತಿಯಿಂದ ಹಮ್ಮಿಕೊಳ್ಳಲಾಗುವುದೆಂದು ತಿಳಿಸಿದರು.
ಸಭೆಯಲ್ಲಿ ತಾಲೂಕು ವಿವಿದೋದ್ದೇಶ ಪುನರ್ವಸತಿ ಸಂಯೋಜಕರಾದ ಜೋನ್ ಬ್ಯಾಪ್ತಿಸ್ಟ್ ಡಿಸೋಜಾ ಮಾತಾನಾಡಿ ಸರಕಾರದ ಎಲ್ಲಾ ಯೋಜನೆಗಳ ನೆರವನ್ನು ಅರ್ಹ ಫಲಾನುಭವಿಗಳು ಪಡೆದುಕೊಳ್ಳುವಂತೆ ಕರೆನೀಡಿ ಯೋಜನೆಗಳ ಮಾಹಿತಿಯನ್ನು ನೀಡಿದರು.
ಸಭೆಯಲ್ಲಿ ಗ್ರಾಮ ಪಂಚಾಯತ್ ಸದಸ್ಯರಾದ ಪದ್ಮಶ್ರೀ ಜೈನ್, ಧನಲಕ್ಷ್ಮೀ, ಸಮಿತಾ, ಸಿಎಚ್ಒ ಇಂಫಲಾ, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯತರ್ತೆಯರು ಉಪಸ್ಥಿತರಿದ್ದರು.
ಇದೇ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲ್ಲಾ ವಿಕಲಚೇನರಿಗೆ ಕ್ರೀಡಾಕೂಟವನ್ನು ಕೂಡಾ ಆಯೋಜಿಸಲಾಗಿತ್ತು.ಉತ್ಸಾಹದಿಂದ ಕ್ರೀಡಾಕೂಟದಲ್ಲಿ ಪಾಲ್ಗೊಂಡು ವಿಜೇತರಾದ ಕ್ರೀಡಾಳುಗಳಿಗೆ ಬಹುಮಾನ ವಿತರಿಸಲಾಯಿತು.
ಸಭೆಯಲ್ಲಿ ಆಯ್ದ ವಿಕಲಚೇತರಿಗೆ ಸಾಧನ ಸಲಕರಣೆಗಳನ್ನು ಪ್ರಧಾನ ಮಾಡಲಾಯಿತು. ಗ್ರಾಮ ಪಂಚಾಯತಿಯ ಗ್ರಾಮೀಣ ಪುನರ್ವಸತಿ ಕಾರ್ಯಕರ್ತೆ ದಿವ್ಯ ಎನ್ ಮತ್ತು ಗ್ರಾಮ ಪಂಚಾಯತ್ ಸಿಬ್ಬಂದಿಗಳು ಕಾರ್ಯಕ್ರಮದ ಸಂಪೂರ್ಣ ಯಶಸ್ವಿಗೆ ಸಹಕರಿಸಿದರು.