ಧರ್ಮಸ್ಥಳ ದೇವಸ್ಥಾನದಲ್ಲಿ ಸ್ವಚ್ಛತಾ ಕಾರ್ಯ

0

ಧರ್ಮಸ್ಥಳ: ಧಾರ್ಮಿಕ ಶ್ರದ್ಧಾಕೇಂದ್ರಗಳ ಸ್ವಚ್ಛತಾ ಸಪ್ತಾಹದ ಅಂಗವಾಗಿ ಜ.12ರಂದು ಧರ್ಮಸ್ಥಳದಲ್ಲಿ ಶ್ರೀ ಮಂಜುನಾಥ ಸ್ವಾಮಿ ದೇವಸ್ಥಾನದಲ್ಲಿ ದೇವಳದ  ಸಿಬ್ಬಂದಿ, ಗ್ರಾಮಾಭಿವೃದ್ಧಿ ಯೋಜನೆಯ ಸಿಬ್ಬಂದಿ ಮತ್ತು ಊರಿನ ನಾಗರಿಕರು ಸ್ವಚ್ಛತಾ ಕಾರ್ಯದಲ್ಲಿ ಭಾಗವಹಿಸಿದರು.

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಆಶ್ರಯದಲ್ಲಿ ಜನವರಿ 7 ರಿಂದ 12ರ ವರೆಗೆ ಮಂದಿರ, ಚರ್ಚ್, ಮಂದಿರ, ಬಸದಿ, ಮಸೀದಿಗಳು ಸೇರಿದಂತೆ ಎಲ್ಲಾ ಧಾರ್ಮಿಕ ಶ್ರದ್ಧಾಕೇಂದ್ರಗಳಲ್ಲಿ ಸ್ವಚ್ಛತಾ ಸಪ್ತಾಹ ಆಯೋಜಿಸಲಾಗಿದೆ. ರಾಜ್ಯದೆಲ್ಲೆಡೆ 16,529 ಶ್ರದ್ಧಾಕೇಂದ್ರಗಳನ್ನು ಗುರುತಿಸಿದ್ದು, 4,13,010 ಮಂದಿ ಸ್ವಯಂ ಸೇವಕರು ಸ್ವಚ್ಛತಾ ಸಪ್ತಾಹದಲ್ಲಿ ಭಾಗವಹಿಸುತ್ತಿದ್ದಾರೆ.

ಕಳೆದ 8 ವರ್ಷಗಳಿಂದ ವರ್ಷಕ್ಕೆ ಎರಡು ಬಾರಿ, ಸ್ವಾತಂತ್ರ್ಯ ದಿನಾಚರಣೆ ಮತ್ತು ಮಕರ ಸಂಕ್ರಾಂತಿ ಸಂದರ್ಭ ಶ್ರದ್ಧಾಕೇಂದ್ರಗಳ ಸ್ವಚ್ಛತಾ ಸಪ್ತಾಹ ಆಯೋಜಿಸಲಾಗುತ್ತದೆ.

LEAVE A REPLY

Please enter your comment!
Please enter your name here