ಮಡಂತ್ಯಾರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದಲ್ಲಿ ಉಚಿತ ಬೃಹತ್ ವೈದ್ಯಕೀಯ, ಕ್ಯಾನ್ಸರ್ ತಪಾಸಣೆ ಹಾಗೂ ದಂತ ಚಿಕಿತ್ಸಾ ಶಿಬಿರ

0

ಮಡಂತ್ಯಾರು: ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಮಡಂತ್ಯಾರು ಶಾಖೆಯ ಪ್ರಥಮ ವಾರ್ಷಿಕೋತ್ಸವದ ಪ್ರಯುಕ್ತ ಸ್ವರ್ಣ ಸಂಜೀವಿನಿ ಸೇವಾ ಟ್ರಸ್ಟ್ (ರಿ) ಮಡವು, ಜೆಸಿಐ ಮಡಂತ್ಯಾರು, ರೋಟರಿ ಕ್ಲಬ್ ಮಡಂತ್ಯಾರು, ಇದರ ಜಂಟಿ ಸಹಯೋಗದೊಂದಿಗೆ ಇಂಡಿಯನ್ ಕ್ಯಾನ್ಸರ್ ಸೊಸೈಟಿ ಮತ್ತು ಅತ್ತಾವರ ಕೆ.ಎಂ.ಸಿ ಆಸ್ಪತ್ರೆಯ ವೈದರ ತಂಡದವರಿಂದ ಉಚಿತ ಬೃಹತ್ ವೈದ್ಯಕೀಯ, ಕ್ಯಾನ್ಸರ್ ತಪಾಸಣೆ ಮತ್ತು ದಂತಾ ಚಿಕಿತ್ಸಾ ಶಿಬಿರ ಹಾಗೂ ಭಾರತಿಯ ಅಂಚೆ ಇಲಾಖೆ-ಪುತ್ತೂರು ವಿಭಾಗದ ವತಿಯಿಂದ ಆಧಾರ್ ಕಾರ್ಡ್ ನೋಂದಣಿ ಹಾಗೂ ತಿದ್ದುಪಡಿ ಶಿಬಿರವು ಜ.13ರಂದು ಮಡಂತ್ಯಾರು ಶ್ರೀ ದುರ್ಗಾ ಕಾಂಪ್ಲೆಕ್ಸ್ (ಆಶೀರ್ವಾದ್ ಸಭಾಂಗಣ) ನಡೆಯಿತು.

ಶಿಬಿರದ ಸದುಪಯೋಗ ಪಡೆದುಕೊಳ್ಳಿ: ಡಾ|| ಅಶಿತ್
ಮಂಗಳೂರು ಡಿಪಾರ್ಟ್ಮೆಂಟ್ ಆಫ್ ಒರ್ಥೊಡೊಂಟಿಸ್ಟ್ ಮಣಿಪಾಲ್ ಕಾಲೇಜ್ ಆಫ್ ಡೆಂಟಲ್ ಸೈನ್ಸ್ ಪ್ರೊಫೆಸರ್ ಡಾ|| ಅಶಿತ್ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘವು ಬ್ಯಾಂಕಿಂಗ್ ವ್ಯವಹಾರದ ಜೊತೆಗೆ ಸಮಾಜಿಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಸಮಾಜದ ಎಲ್ಲಾ ವರ್ಗದ ಜನರಿಗೆ ಆರೋಗ್ಯದ ದೃಷ್ಟಿಯಿಂದ ಜನರ ಕಾಳಜಿ ಮಾಡುತ್ತಿರುವುದು ಸಂಘದ ಏಳಿಗೆಗೆ ಕಾರಣವಾಗಿದೆ. ಜನರು ಯಾವುದೇ ರೋಗ ಬರುವವರೆಗೆ ಕಾಯಬಾರದು ಅದಕ್ಕೂ ಮುನ್ನ ಖಾಯಿಲೆಯ ಬಗ್ಗೆ ಮುನ್ನೆಚ್ಚರಿಗೆ ವಹಿಸಿ ಇಂತಹ ಶಿಬಿರದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಹೇಳಿದರು.

ಶಾಖೆಗಳ ವಾರ್ಷಿಕೋತ್ಸವದ ಸಂದರ್ಭದಲ್ಲಿ ಉಚಿತ ಆರೋಗ್ಯ ಶಿಬಿರ: ಚಿತ್ತರಂಜನ್ ಬೋಳಾರ್
ಅಧ್ಯಕ್ಷತೆಯನ್ನು ವಹಿಸಿದ್ದ ಸಂಘದ ಅಧ್ಯಕ್ಷ ಸಹಕಾರ ರತ್ನ ಚಿತ್ತರಂಜನ್ ಬೋಳಾರ್ ಮಾತಾನಾಡಿ ಸಂಘವು ಎಲ್ಲಾ ಶಾಖೆಗಳಲ್ಲಿ ವಾರ್ಷಿಕೋತ್ಸವದ ಸಂದರ್ಭದಲ್ಲಿ ಉಚಿತ ಆರೋಗ್ಯ ಶಿಬಿರ ನಡೆಸುತ್ತಿದೆ. ಸಂಘವು ಈಗಾಗಲೇ ಒಟ್ಟು ೫೮ ಉಚಿತ ಆರೋಗ್ಯ ಶಿಬಿರಗಳನ್ನು ಆಯೋಜಿಸಿದ್ದು, 59ನೇ ಶಿಬಿರವು ಇದಾಗಿದೆ.ಹಣವನ್ನು ಯಾವಾಗ ಬೇಕಾದರೂ ಸಂಪಾದಿಸಬಹುದು ಆದರೆ ಆರೋಗ್ಯವನ್ನು ಸಂಪಾದಿಸಲು ಸಾಧ್ಯವಿಲ್ಲ. ನಮ್ಮ ಆರೋಗ್ಯವನ್ನು ಕಡೆಗಣಿಸದೆ ಅದರ ಮೇಲೆ ಗಮನ ಹರಿಸಬೇಕು ಎಂದು ಹೇಳಿದರು.

ಮಡಂತ್ಯಾರು ರೋಟರಿ ಕ್ಲಬ್ ಅಧ್ಯಕ್ಷ ಶ್ರೀಧರ ಭಟ್ ಮತ್ತು ಮಡಂತ್ಯಾರು ಗ್ರಾಂ.ಪಂ.ಅಧ್ಯಕ್ಷೆ ರೂಪಾ ನವೀನ್ ಮಾತನಾಡಿದರು.ಸಂಘದ ನಿರ್ದೇಶಕ ಗೋಪಾಲ್ ಎಂ, ಮಡವು ಸ್ವರ್ಣ ಸಂಜೀವಿನಿ ಸೇವಾ ಟ್ರಸ್ಟ್ ನ ಕಾರ್ಯದರ್ಶಿ ವಿನುತ್ ಕೊಡ್ಲಕ್ಕೆ, ಮಡಂತ್ಯಾರು ಜೆಸಿಐ ಅಧ್ಯಕ್ಷ ವಿಕೇಶ್ ಮಾನ್ಯ ಹಾಗೂ ಪೂರ್ವಾಧ್ಯಕ್ಷ ಅಶೋಕ್, ಇಂಡಿಯನ್ ಕ್ಯಾನ್ಸರ್ ಸೊಸೈಟಿನ ರೀಜನಲ್ ಆಪರೇಷನಲ್ ಮ್ಯಾನೇಜರ್ ಶೈಲಾ ಲೋಬೊ, ಗ್ರಾ.ಪಂ. ಸದಸ್ಯ ವಿಶ್ವನಾಥ್ ಪೂಜಾರಿ, ಶ್ರೀ ದುರ್ಗಾ ಕಾಂಪ್ಲೆಕ್ಸ್ ಕಲಾ ಸಭಾಂಗಣದ ಮಾಲಿಕ ತಿಮ್ಮಪ್ಪ ಗೌಡ, ಮತ್ತು ಮಡಂತ್ಯಾರು ಶಾಖೆಯ ಶಾಖಾಧಿಕಾರಿ ಸುರಕ್ಷ ಉಪಸ್ಧಿತರಿದ್ದರು.

ಸುಮಾರು 300ಕ್ಕೂ ಮಿಕ್ಕಿ ಶಿಬಿರಾರ್ಥಿಗಳಿಗೆ ಆರೋಗ್ಯ ತಪಾಸಣೆ ಹಾಗೂ ದಂತ ಚಿಕಿತ್ಸೆ, ಉಚಿತ ಔಷಧಿ ವಿತರಣೆ, ಕಣ್ಣಿನ ತಪಾಸಣೆ ಮತ್ತು ಕ್ಯಾನ್ಸರ್ ತಪಾಸಣೆ ಮಾಡಲಾಯಿತು.ಭಾರತೀಯ ಅಂಚೆ ಇಲಾಖೆ- ಪುತ್ತೂರು ವಿಭಾಗ ಆಧಾರ್ ಕಾರ್ಡ್ ನೋಂದಣಿ ಹಾಗೂ ತಿದ್ದುಪಡಿ ಮಾಡಲಾಗಿತ್ತು.

ಸಂಘದ ಮುಖ್ಯಕಾರ್ಯನಿರ್ವಾಹಣಾಧಿಕಾರಿ ಸೌಮ್ಯ ವಿಜಯ್ ಸ್ವಾಗತಿಸಿ, ಹಿರಿಯ ಶಾಖಾಧಿಕಾರಿ ರವಿಕಲಾ ವಂದಿಸಿ, ಮಾನವ ಸಂಪನ್ಮೂಲ ಅಧಿಕಾರಿ ದೀಪಿಕ ಸನಿಲ್ ಕಾರ್ಯಕ್ರಮ ನಿರೂಪಿಸಿದರು.

LEAVE A REPLY

Please enter your comment!
Please enter your name here