ಮಕ್ಕಳ ಜೊತೆ ಆಟವಾಡುತ್ತಿದ್ದ ಬಾಲಕ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದು ಸಾವು

0

ಬೆಳ್ತಂಗಡಿ : ಮಕ್ಕಳ ಜೊತೆ ಆಟವಾಡುತ್ತಿದ್ದ ಬಾಲಕ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದ ದಾರುಣ ಘಟನೆ ಜ.15ರಂದು ಸಂಜೆ ಸೋಣಂದೂರು ಗ್ರಾಮದ ಪಣಕಜೆ ಎಂಬಲ್ಲಿ ನಡೆದಿದೆ.

ಪಣಕಜೆ ನಿವಾಸಿ ಮಹಮ್ಮದ ಹನೀಫ್ ಎಂಬವರ ಪುತ್ರ ಮಹಮ್ಮದ್ ಅನಾನ್ (7 ವ) ಮೃತಪಟ್ಟ ಬಾಲಕನಾಗಿದ್ದಾನೆ.ಇಂದು ಶಾಲೆಗೆ ರಜೆ ಇದ್ದ ಕಾರಣ ಪಕ್ಕದ ಮನೆಯ ಮಕ್ಕಳ ಜೊತೆ ಆಟವಾಡುತ್ತಿದ್ದಾಗ ಈ ಘಟನೆ ನಡೆದಿದ.

ಕಟ್ಟೆ ಇಲ್ಲದ ಬಾವಿಯ ಬಳಿ ಮಕ್ಕಳು ಆಟವಾಡುತ್ತಿದ್ದಾಗ ಬಾಲಕ ಅನಾನ್ ಆಕಸ್ಮಿಕವಾಗಿ ಕಾಲು ಜಾರಿ ಬಾವಿಗೆ ಬಿದ್ದಿದ್ದು, ಕೂಡಲೇ ಸ್ಥಳೀಯರ ಸಹಕಾರದಲ್ಲಿ ಬಾಲಕನನ್ನು ಮೇಲೆತ್ತಿ ಬೆಳ್ತಂಗಡಿ ಸರಕಾರಿ ಆಸ್ಪತ್ರೆಗೆ ದಾಖಲಿಸಿದ್ದರೂ, ಆದಾಗಲೇ ಬಾಲಕ ಮೃತಪಟ್ಟಿರುವುದಾಗಿ ವರದಿಯಾಗಿದೆ.

ಈತ ಸ್ಥಳೀಯ ಶಾಲಾ ಎರಡನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದ.

ಪುಂಜಾಲಕಟ್ಟೆ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ.

LEAVE A REPLY

Please enter your comment!
Please enter your name here