ಎಕ್ಸೆಲ್ ಕಾಲೇಜಿನ ಸುಮಂತ್ ಕುಮಾರ್ ಜೈನ್ ರವರಿಗೆ “ಬೆಹರಿನ್ ಇಂಡಿಯಾ ಇಂಟರ್‌ನ್ಯಾಷನಲ್ ಅವಾರ್ಡ್ಸ್-2024”

0

ಬೆಳ್ತಂಗಡಿ: ನಾಡಿನ ಶ್ರೇಷ್ಠ ಸಾಧಕರಿಗೆ ನೀಡುತ್ತಿರುವ “ಬೆಹರಿನ್ ಇಂಡಿಯಾ ಇಂಟರ್‌ನ್ಯಾಷನಲ್ ಅವಾರ್ಡ್ಸ್-2024” ಪ್ರಶಸ್ತಿಗೆ ಗುರುವಾಯನಕೆರೆ ಎಕ್ಸೆಲ್ ಸಂಸ್ಥೆಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್.ಬಿ ಆಯ್ಕೆಯಾಗಿದ್ದಾರೆ.

ಕರ್ನಾಟಕದ ಪ್ರತಿಷ್ಠಿತ ದಿನಪತ್ರಿಕೆ ಕನ್ನಡಪ್ರಭ ಹಾಗೂ ಸುದ್ದಿವಾಹಿನಿ ಏಷ್ಯಾನೆಟ್ ಸುವರ್ಣನ್ಯೂಸ್ ಸಂಸ್ಥೆಯ ಪ್ರಾಯೋಜಕತ್ವದಲ್ಲಿ, ಸಾಧನೆಯನ್ನು ಗುರುತಿಸಿ “ಬೆಹರಿನ್ ಇಂಡಿಯಾ ಇಂಟರ್ ನ್ಯಾಷನಲ್ ಅವಾರ್ಡ್ಸ್ 2024” ಪುರಸ್ಕಾರ ನೀಡಿ ಗೌರವಿಸಲಾಗುತ್ತಿದೆ.

ಈ ಪ್ರಶಸ್ತಿ ಪ್ರದಾನ ಕಾರ್ಯಕ್ರಮವು ಜ.19ರಂದು ಬೆಹರಿನ್ ದೇಶದಲ್ಲಿ ನಡೆಯಲಿದೆ.

LEAVE A REPLY

Please enter your comment!
Please enter your name here