ಎಸ್.ಎಸ್.ಎಲ್.ಸಿ, ದ್ವಿತೀಯ ಪಿಯುಸಿ ಪರೀಕ್ಷೆ ಅಂತಿಮ ವೇಳಾಪಟ್ಟಿ

0

ಬೆಳ್ತಂಗಡಿ: 2024ರ ಎಸ್.ಎಸ್‌ಎಲ್.ಸಿ. ಮತ್ತು ದ್ವಿತೀಯ ಪಿ.ಯು.ಸಿ. ಪರೀಕ್ಷೆ-1ರ ಅಂತಿಮ ವೇಳಾಪಟ್ಟಿ ಪ್ರಕಟವಾಗಿದೆ.ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್ 25ರಿಂದ ಏಪ್ರಿಲ್ 6ರವರೆಗೆ, ಪಿಯುಸಿ ಪರೀಕ್ಷೆ ಮಾರ್ಚ್ 1ರಿಂದ 22ರವರೆಗೆ ನಡೆಯಲಿದೆ.ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ವೇಳಾಪಟ್ಟಿ ಈ ಕೆಳಗಿನಂತಿದೆ.25-03-2024ರ ಸೋಮವಾರ ಪ್ರಥಮ ಭಾಷೆ ಕನ್ನಡ, ತೆಲುಗು, ಹಿಂದಿ, ಮರಾಠಿ, ತಮಿಳು, ಉರ್ದು, ಇಂಗ್ಲಿಷ್, +ಇಂಗ್ಲಿಷ್- NCERT, 27-03-2024ರಂದು ಸಮಾಜ ವಿಜ್ಞಾನ, 30-03-2024ರಂದು ವಿಜ್ಞಾನ, ರಾಜ್ಯಶಾಸ್ತ್ರ, 02-04-2024ರಂದು ಗಣಿತ, ಸಮಾಜಶಾಸ್ತ್ರ, 03-04-2024 ಅರ್ಥಶಾಸ್ತ್ರ ಪರೀಕ್ಷೆ ನಡೆಯಲಿದೆ.ಬೆಳಗ್ಗೆ 10.15ರಿಂದ ಮಧ್ಯಾಹ್ನ 1.30ರವರೆಗೆ ನಡೆಯಲಿರೋ ಪರೀಕ್ಷೆಗೆ ವಿದ್ಯಾರ್ಥಿಗಳು ಹಾಜರಾಗಬೇಕಾಗಿದೆ. ಅದೇ ರೀತಿ ದ್ವಿತೀಯ ಪಿಯುಸಿಯ ಪರೀಕ್ಷೆಯು ಈ ಕೆಳಗಿನಂತೆ ನಡೆಯಲಿದೆ.
ಮಾ.01-2024: ಕನ್ನಡ, ಅರೇಬಿಕ್
ಮಾ.04-2024: ಗಣಿತ
ಮಾ.05-2024 ರಾಜ್ಯ ಶಾಸ್ತ್ರ, ಸಂಖ್ಯಾಶಾಸ್ತ್ರ
ಮಾ.06-2024: ಮಾಹಿತಿ ತಂತ್ರಜ್ಞಾನ, ರೀಟೈಲ್, ಆಟೋ ಮೊಬೈಲ್
ಮಾ.07-2024: ಇತಿಹಾಸ ಹಾಗೂ ಭೌತಶಾಸ್ತ್ರ
ಮಾ.09-2024: ಐಚ್ಛಿಕ ಕನ್ನಡ, ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ,ಗೃಹ ವಿಜ್ಞಾನ
ಮಾ.11-2024: ತರ್ಕ ಶಾಸ್ತ್ರ, ವ್ಯವಹಾರ ಅಧ್ಯಯನ
ಮಾ.13-2024 : ಇಂಗ್ಲಿಷ್
ಮಾ.15-2024: ಹಿಂದೂಸ್ತಾನಿ ಸಂಗೀತ, ಮನಃಶಾಸ್ತ್ರ, ರಸಾಯನ ಶಾಸ್ತ್ರ, ಮೂಲಗಣಿತ
ಮಾ.16-2024: ಅರ್ಥಶಾಸ್ತ್ರ
ಮಾ.18-2024: ಭೂಗೋಳ ಶಾಸ್ತ್ರ, ಜೀವಶಾಸ್ತ್ರ ಪರೀಕ್ಷೆ
ಮಾ.20-2024: ಸಮಾಜಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ, ಗಣಕ ವಿಜ್ಞಾನ ಪರೀಕ್ಷೆ
ಮಾ.22-2024: ಹಿಂದಿ ಪರೀಕ್ಷೆ ನಡೆಯಲಿದೆ.

ಮೂರು ಬಾರಿ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಬರೆಯಲು ಅವಕಾಶ
ಈ ವರ್ಷ ಎಸ್‌ಎಸ್‌ಎಲ್‌ಸಿ ಓದುತ್ತಿರುವವರು ಹಾಗೂ ಖಾಸಗಿ ವಿದ್ಯಾರ್ಥಿಗಳು 2023-24ನೇ ಸಾಲಿನ ಎಸ್‌ಎಸ್‌ಎಲ್‌ಸಿ ವರ‍್ಷಿಕ ಪರೀಕ್ಷೆಯನ್ನು ಮೂರು ಬಾರಿ ಬರೆಯಬಹುದು.ಈ ಹಿಂದೆ ಒಂದು ಬಾರಿ ವರ‍್ಷಿಕ ಪರೀಕ್ಷೆ ಬರೆದು, ಅನುತ್ತೀರ್ಣರಾದವರು ಪೂರಕ ಪರೀಕ್ಷೆ ಬರೆಯಬೇಕಿತ್ತು.ಆದರೆ ಈ ಬಾರಿ ವಿದ್ಯಾರ್ಥಿಗಳು ಪಾಸಾಗಲಿ, ಫೇಲಾಗಲಿ ಮೂರು ಬಾರಿ ಪರೀಕ್ಷೆ ಬರೆಯಬಹುದು.ಮೂರರಲ್ಲಿ ಅತಿಹೆಚ್ಚು ಅಂಕಗಳನ್ನು ಪಡೆದ ಪರೀಕ್ಷೆಯನ್ನು ಮುಂದಿನ ಅನುಕೂಲಗಳಿಗಾಗಿ ಆಯ್ಕೆ ಮಾಡುವ ಅವಕಾಶ ನೀಡಲಾಗಿದೆ.
ಮೂರು ಪರೀಕ್ಷೆಯ ತಾತ್ಕಾಲಿಕ ವೇಳಾಪಟ್ಟಿ:
ಎಸ್‌ಎಸ್‌ಎಲ್‌ಸಿ ಪರೀಕ್ಷೆ-1: ಮಾರ್ಚ್ 30ರಿಂದ ಏಪ್ರಿಲ್ 15ರವರೆಗೆ.ಮೇ 8ರಂದು ಫಲಿತಾಂಶ.ಮೇ.23ರಂದು ಮರು ಮೌಲ್ಯಮಾಪನ ಫಲಿತಾಂಶ ಪ್ರಕಟ.
ಎಸ್‌ಎಸ್‌ಎಲ್‌ಸಿ ಪರೀಕ್ಷೆ-2: ಜೂನ್ 12ರಿಂದ 19ರವರೆಗೆ ಪರೀಕ್ಷೆ. ಜೂನ್ 29 ಕ್ಕೆ ಫಲಿತಾಂಶ.ಜುಲೈ 10 ರಂದು ಮರುಮೌಲ್ಯಮಾಪನದ ಫಲಿತಾಂಶ.
ಎಸ್‌ಎಸ್‌ಎಲ್‌ಸಿ ಪರೀಕ್ಷೆ-3: ಜೂನ್ 29ರಿಂದ ಆಗಸ್ಟ್ 5ರವರೆಗೆ ಪರೀಕ್ಷೆ. ಆಗಸ್ಟ್ 19 ರಂದು ಫಲಿತಾಂಶ.ಆಗಸ್ಟ್ 26ರಂದು ಮರುಮೌಲ್ಯಮಾಪನ ಫಲಿತಾಂಶ ಪ್ರಕಟವಾಗಲಿದೆ.

LEAVE A REPLY

Please enter your comment!
Please enter your name here