ಉಜಿರೆ: ಇಲ್ಲಿನ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತ್ರಿ ಯೋಜನೆಯಡಿ ಕರ್ತವ್ಯ ನಿರ್ವಹಿಸುತ್ತಿರುವ ಮಹಿಳೆಯರ ಮಕ್ಕಳನ್ನು ಆರೈಕೆ ಮಾಡಲು ನಿರ್ಮಾಣವಾದ ಕೂಸಿನ ಮನೆ ಶಿಶು ಪಾಲನಾ ಕೇಂದ್ರವನ್ನು ಉಜಿರೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಉಷಾಕಿರಣ್ ಕಾರಂತ್ ಜ.18ರಂದು ಉದ್ಘಾಟಿಸಿದರು.
ಉಪಾಧ್ಯಕ್ಷ ರವಿ ಕುಮಾರ್ ಬರಮೇಲು, ಸದಸ್ಯರು, ಪಿಡಿಒ ಪ್ರಕಾಶ್ ಶೆಟ್ಟಿ, ಕಾರ್ಯದರ್ಶಿ ಶ್ರವಣ್ ಕುಮಾರ್, ತಾಲೂಕು ಐಇಸಿ ಸಂಯೋಜಕರು, ಕೇರ್ ಟೇಕರ್ಸ್ ಹಾಗೂ ಮಕ್ಕಳ ಪೋಷಕರು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಮತ್ತು ಆರೋಗ್ಯ ಕೇಂದ್ರದ ಸಿಬ್ಬಂದಿಗಳು, ಪಂಚಾಯತ್ ಸಿಬ್ಬಂದಿಗಳು ಉಪಸ್ಥಿತರಿದ್ದರು.