ಬೆಳ್ತಂಗಡಿ: ದಕ್ಷಿಣ ಕನ್ನಡ ರೂರಲ್ ಡೆವೆಲಪ್ಮೆಂಟ್ ಸೊಸೈಟಿ (ರಿ) ಬೆಳ್ತಂಗಡಿ ಇದರ ನೇತೃತ್ವದಲ್ಲಿ ಕಾಯರ್ತಡ್ಕ ಸರಕಾರಿ ಪ್ರೌಢಶಾಲೆ, ಸ್ನಾತಕೋತ್ತರ ಸಮಾಜ ಕಾರ್ಯ ವಿಭಾಗ ಸಂತ ಅಲೋಶಿಯಸ್ ಕಾಲೇಜು ಮಂಗಳೂರು ಹಾಗೂ ಸ್ಕೂಲ್ ಆಫ್ ಸೋಶಿಯಲ್ ವರ್ಕ್ ರೋಶನಿ ನಿಲಯ ಮಂಗಳೂರು ಇವುಗಳ ಸಹಭಾಗಿತ್ವದಲ್ಲಿ ಕಾಯರ್ತಡ್ಕ ಸರಕಾರಿ ಪ್ರೌಢಶಾಲೆಯಲ್ಲಿ ಕ್ಯಾನ್ಸರ್ ರೋಗದ ಬಗ್ಗೆ ಜಾಗೃತಿ ಕಾರ್ಯಕ್ರಮವು ಜ.19 ರಂದು ನಡೆಯಿತು.
ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಸ್ಪರ್ಶ ಯೋಜನೆಯ ಸಂಯೋಜಕರಾದ ಸುನಿಲ್ ಗೊನ್ಸಾಲ್ವಿಸ್ ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿ ಮಾಹಿತಿ ನೀಡಿದರು.
ಶಾಲಾ ಮುಖ್ಯೋಪಾಧ್ಯಾಯರಾದ ಯಾಕೂಬ್ ಎಸ್. ಪ್ರಾಸ್ತಾವಿಕವಾಗಿ ಮಾತನಾಡಿದರು.ಶಾಲಾ ಹಿರಿಯ ಶಿಕ್ಷಕರಾದ ವಿನಾಯಕ ಜೋಶಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿನಿ ಬ್ಲೆಸ್ಸಿ ಮರಿಯ ಹಾಗೂ ಕು. ರೋಯ್ಲಿನ್ ಸಿಕ್ವೇರಾ ವಿದ್ಯಾರ್ಥಿಗಳಿಗೆ ವಿವಿಧ ಚಟುವಟಿಕೆಗಳನ್ನು ನಡೆಸಿದರು.ಶಾಲಾ ವಿದ್ಯಾರ್ಥಿಗಳು ಪ್ರಾರ್ಥನೆ ಹಾಡಿದರು.
ಡಿ.ಕೆ.ಆರ್.ಡಿ.ಎಸ್ ಸಂಸ್ಥೆಯ ಕಾರ್ಯಕರ್ತರಾದ ಮಾರ್ಕ್ ಡಿ’ಸೋಜರವರು ಎಲ್ಲರನ್ನು ಸ್ವಾಗತಿಸಿ, ಸಮಾಜ ಕಾರ್ಯ ವಿಭಾಗದ ವಿದ್ಯಾರ್ಥಿನಿ ಕು.ಕೀರ್ತನಾ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಒಟ್ಟು 80 ಮಂದಿ ವಿದ್ಯಾರ್ಥಿಗಳು ಈ ಕಾರ್ಯಗಾರದ ಪ್ರಯೋಜನ ಪಡೆದರು.