Site icon Suddi Belthangady

ಉಜಿರೆ ಗ್ರಾಮ ಪಂಚಾಯತ್ ನಲ್ಲಿ ಕೊರಗ ಸಮುದಾಯದವರಿಗೆ ಆಧಾರ್ ನೋಂದಣಿ ಶಿಬಿರ

ಉಜಿರೆ: ಕಂದಾಯ ಇಲಾಖೆ, ತಾಲೂಕು ಪಂಚಾಯತ್, ಸಮಾಜ ಕಲ್ಯಾಣ ಇಲಾಖೆ ಬೆಳ್ತಂಗಡಿ ಹಾಗೂ ಇತರ ಇಲಾಖೆಗಳ ಸಹಭಾಗಿತ್ವದಲ್ಲಿ ಆದಿವಾಸಿ ಕೊರಗ ಸಮುದಾಯದವರಿಗೆ ಆಧಾರ್ ಮತ್ತು ಇತರ ದಾಖಲೆಗಳ ನೋಂದಣಿ ಶಿಬಿರವು ಉಜಿರೆ ಗ್ರಾಮ ಪಂಚಾಯಿತಿ ಸಭಾಂಗಣದಲ್ಲಿ ಜ.18 ರಂದು ಜರಗಿತು.

ತಹಶೀಲ್ದಾರ್ ಪೃಥ್ವಿ ಸಾನಿಕಂ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿ ಸರಕಾರದ ಸವಲತ್ತುಗಳನ್ನು ಪಡೆಯಲು ಸರಿಯಾದ ದಾಖಲೆಗಳ ಅಗತ್ಯವಿದೆ ಎಂದರು.

ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಉಜಿರೆ ಗ್ರಾಮ ಪಂಚಾಯತ್ ಅಧ್ಯಕ್ಷೆ ಉಷಾಕಿರಣ ಕಾರಂತ್ ವಹಿಸಿದ್ದರು.

ಕೊರಗ ಸಮುದಾಯದ ಮುಖಂಡ ಸುಂದರ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಹೇಮಚಂದ್ರ ಬಬುಕಟ್ಟೆ, ಮ್ಯಾನೇಜರ್ ಧನಂಜಯ, ಗ್ರಾಮ ಪಂಚಾಯತ್ ಉಪಾಧ್ಯಕ್ಷ ರವಿಕುಮಾರ್ ಬರೆಮೇಲು, ಐಟಿಡಿಪಿ ಸಮನ್ವಯಾಧಿಕಾರಿ ಹೇಮಲತಾ, ಮುಂಡಾಜೆ ನವೋದಯ ಶಾಲೆಯ ಪ್ರಿನ್ಸಿಪಾಲ್ ಮುರಳೀಧರ ಮತ್ತಿತರರು ಉಪಸ್ಥಿತರಿದ್ದರು.

ತಾಲೂಕು ಪಂಚಾಯತ್ ಸಂಯೋಜಕ ಜಯಾನಂದ ಲಾಯಿಲ ಕಾರ್ಯಕ್ರಮ ನಿರೂಪಿಸಿದರು.

Exit mobile version