




ಬೆಳ್ತಂಗಡಿ ತಾಲೂಕು ತಹಶೀಲ್ದಾರರು ಹಾಗೂ ಇತರ ಸಿಬ್ಬಂದಿಗಳು ಕರ್ತವ್ಯಕ್ಕೆ ತೆರಳಿದಾಗ ಕೆಲ ವ್ಯಕ್ತಿಗಳು ಹಲ್ಲೆಗೆ ಪ್ರಯತ್ನಪಟ್ಟಿರುವುದು ತೀವ್ರ ಖಂಡನೀಯ ಎಂದು ಕರ್ನಾಟಕ ರಾಜ್ಯ ಸರ್ಕಾರಿ ನೌಕರ ರಾಜ್ಯ ಸಂಘದ ಜಂಟಿ ಕಾರ್ಯದರ್ಶಿ ಜಯಕೀರ್ತಿ ಜೈನ್ ಹೇಳಿದರು.


ಅಧಿಕಾರಿಗಳು ಸರ್ಕಾರಿ ಕೆಲಸಗಳನ್ನು ಮಾಡಲು ಮುಂದಾದಾಗ ಈ ರೀತಿ ತೊಂದರೆ ಮಾಡುವುದು, ಕೆಟ್ಟ ಪದಗಳನ್ನು ಉಪಯೋಗಿಸಿ ನಿಂದಿಸುವುದು ಸರ್ಕಾರಿ ಅಧಿಕಾರಿಗಳ ಸ್ಥೈರ್ಯವನ್ನು ಕುಂದಿಸುತ್ತದೆ.ಸರ್ಕಾರಿ ಅಧಿಕಾರಿಗಳಿಗೆ ನಿರ್ಭೀತಿಯಿಂದ ಕೆಲಸ ಮಾಡಲು ಅವಕಾಶ ಮಾಡಿಕೊಡಬೇಕಾಗಿ ಹಾಗೂ ತಪ್ಪಿಸ್ಥರ ವಿರುದ್ಧ ಕಠಿಣ ಕಾನೂನು ಕ್ರಮಗಳನ್ನು ತೆಗೆದುಕೊಂಡು ಇಂತಹ ಘಟನೆಗಳು ಮರುಕಳಿಸದಂತೆ ಪೊಲೀಸರು ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕಾಗಿ ಹೇಳಿದರು.








