ಎಕ್ಸೆಲ್ ನ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಗೆ ಬೆಹರಿನ್ ಇಂಡಿಯಾ ಇಂಟರ್‌ನ್ಯಾಷನಲ್ ಅವಾರ್ಡ್ ಪ್ರದಾನ

0

ಬೆಳ್ತಂಗಡಿ: ಗುರುವಾಯನಕೆರೆ ಎಕ್ಸೆಲ್ ಪದವಿ ಪೂರ್ವ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಸುಮಂತ್ ಕುಮಾರ್ ಜೈನ್ ಅವರಿಗೆ ಕನ್ನಡ ಪ್ರಭ ದಿನಪತ್ರಿಕೆ ಹಾಗೂ ಸುವರ್ಣ ನ್ಯೂಸ್ ಚಾನಲ್ ಪ್ರಾಯೋಜಕತ್ವದ ಬೆಹರಿನ್ ಇಂಡಿಯಾ ಇಂಟರ್ ನ್ಯಾಷನಲ್ ಅವಾರ್ಡ್ 2024 ದೊರೆತಿದೆ.

ಬೆಹರಿನ್ ದೇಶದಲ್ಲಿ ನಡೆದ ಅದ್ಧೂರಿ ಸಮಾರಂಭದಲ್ಲಿ ಈ ಪ್ರಶಸ್ತಿಯನ್ನು ಅಲ್ಲಿನ ಸಚಿವರಾದ ಮೊಹಮ್ಮದ್ ಮನ್ಸೂರ್ ಪ್ರದಾನ ಮಾಡಿದರು.

ಶಿಕ್ಷಣ ಕ್ಷೇತ್ರದಲ್ಲಿ ಮಾಡಿದ ಅನನ್ಯ ಸಾಧನೆಯನ್ನು ಪರಿಗಣಿಸಿ ಈ ಪ್ರಶಸ್ತಿಯನ್ನು ನೀಡಲಾಗಿದೆ.

LEAVE A REPLY

Please enter your comment!
Please enter your name here