


ಕುಕ್ಕೇಡಿ: ಕುಕ್ಕೇಡಿ ಗ್ರಾಮ ಪಂಚಾಯತಿನ 2023-24 ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮ ಸಭೆ ಜ.25 ರಂದು ಗ್ರಾಮ ಪಂಚಾಯತ್ ಅಧ್ಯಕ್ಷೆ ಅನಿತಾ ಕೆ. ಇವರ ಅಧ್ಯಕ್ಷತೆಯಲ್ಲಿ ಪಂಚಾಯತ್ ವಠಾರದಲ್ಲಿ ಜರಗಿತು.
ವೇಣೂರು ಸರಕಾರಿ ಪ್ರೌಢ ಶಾಲಾ ಮುಖ್ಯ ಶಿಕ್ಷಕ ವೆಂಕಟೇಶ್ ತುಳುಪುಳೆ ಮಾರ್ಗದರ್ಶಿ ಅಧಿಕಾರಿಯಾಗಿ ಸಭೆಯನ್ನು ಮುನ್ನಡೆಸಿದರು.
ಪಂಚಾಯತ್ ಉಪಾಧ್ಯಕ್ಷೆ ಕುಸುಮ, ನಿಕಟಪೂರ್ವ ಅಧ್ಯಕ್ಷ ಜನಾರ್ದನ ಪೂಜಾರಿ, ಪಂಚಾಯತ್ ಸದಸ್ಯರು, ಇಲಾಖೆಯ ಅಧಿಕಾರಿಗಳು ಹಾಜರಿದ್ದರು.
ಪಂಚಾಯತ್ ಅಭಿವೃದ್ಧಿ ಅಧಿಕಾರಿ ನವೀನ್ ಎ. ಅನುಪಾಲನಾ ವರದಿ ಹಾಗೂ ಲೆಕ್ಕ ಪತ್ರ ವಾಚಿಸಿದರು.ಸಿಬ್ಬಂದಿ ಆನಂದ ಸ್ವಾಗತಿಸಿದರು.ಆಶಾ ಕಾರ್ಯಕರ್ತರು, ಅಂಗನವಾಡಿ ಕಾರ್ಯಕರ್ತರು, ಗ್ರಾಮಸ್ಥರು ಹಾಜರಿದ್ದರು.ಇಲಾಖೆಯ ಅಧಿಕಾರಿಗಳು ವಿವಿಧ ಇಲಾಖಾ ಮಾಹಿತಿ ನೀಡಿದರು.
ರಾಷ್ಟ್ರೀಯ ಮತದಾರ ದಿನಾಚರಣೆಯ ಅಂಗವಾಗಿ ಪ್ರತಿಜ್ಞಾ ವಿಧಿ ಸ್ವೀಕರಿಸಲಾಯಿತು.ಆರೋಗ್ಯ ಇಲಾಖೆ ವತಿಯಿಂದ ಅರೋಗ್ಯ ತಪಾಸಣಾ ಶಿಬಿರ ನಡೆಯಿತು.