ಕೊಕ್ಕಡ: ಯುವ ಕೇಸರಿ ಕಾವು ಇದರ ಆಶ್ರಯದಲ್ಲಿ ಮೋದಿ ಮತ್ತೊಮ್ಮೆ ಎಂಬ ಮಹಾಸಂಕಲ್ಪದೊಂದಿಗೆ ಶ್ರೀ ಲಲಿತಾ ಸಹಸ್ರನಾಮ ಯಾಗ, ಧಾರ್ಮಿಕ ಸಭೆ ಜ.25ರಂದು ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಕಾವು ಇಲ್ಲಿ ನಡೆಯಿತು.
ಕಾರ್ಯಕ್ರಮದಲ್ಲಿ ಸೌತಡ್ಕ ಶ್ರೀ ಮಹಾಗಣಪತಿ ಕ್ಷೇತ್ರದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಹರೀಶ್ ರಾವ್ ವಹಿಸಿದ್ದರು.
ಬಾಲವಾಗ್ಮಿ ಕು.ಹಾರಿಕಾ ಮಂಜುನಾಥ್ ದಿಕ್ಸೂಚಿ ಭಾಷಣ ಮಾಡಿದರು.ಕಾವು ತ್ರಿಗುಣಾತ್ಮಿಕ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಟ್ರಸ್ಟ್ ಅಧ್ಯಕ್ಷ ಕುಶಾಲಪ್ಪ ಗೌಡ ಪೂವಾಜೆ ಪ್ರಾಸ್ತಾವಿಕ ಮಾತುಗಳನ್ನಾಡಿದರು.ವಿಧಾನ ಪರಿಷತ್ ಶಾಸಕ ಪ್ರತಾಪಸಿಂಹ ನಾಯಕ್ ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಈ ಸಂದರ್ಭದಲ್ಲಿ ನಿವೃತ ಯೋಧರಾದ ಕೆ.ಮಹಾಬಲ ಮತ್ತು ಜಿ.ದೇವಪ್ಪ ಗೌಡ ಇವರಿಗೆ ಯುವ ಕೇಸರಿ ವತಿಯಿಂದ ಸನ್ಮಾನ ಕಾರ್ಯಕ್ರಮ ನಡೆಯಿತು.
ಕು.ಧಾತ್ರಿ ಗೋಖಲೆ ಪ್ರಾರ್ಥಿಸಿ, ತ್ರಿಗುಣಾತ್ಮಿಕ ದೇವಸ್ಥಾನದ ಅರ್ಚಕ ಮಂಜುನಾಥ್ ಭಟ್ ಸ್ವಾಗತಿಸಿ, ವೃಷಾಂಕ್ ಖಾಡಿಲ್ಕರ್ ಕಾರ್ಯಕ್ರಮ ನಿರೂಪಿಸಿದರು.ಡಾ.ಗಣೇಶ್ ಪ್ರಸಾದ್ ಕೊಕ್ಕಡ ಧನ್ಯವಾದವಿತ್ತರು.