Site icon Suddi Belthangady

ಧರ್ಮಸ್ಥಳ ಶ್ರೀ ಮಂ.ಅ.ಪ್ರೌಢಶಾಲೆಯಲ್ಲಿ ಗಣರಾಜ್ಯೋತ್ಸವ

ಧರ್ಮಸ್ಥಳ: ಧರ್ಮಸ್ಥಳ ಶ್ರೀ ಮಂಜುನಾಥೇಶ್ವರ ಅನುದಾನಿತ ಪ್ರೌಢಶಾಲೆಯಲ್ಲಿ 75ನೇ ಗಣರಾಜ್ಯೋತ್ಸವವನ್ನು ವಿಜೃಂಭಣೆಯಿಂದ ಆಚರಿಸಲಾಯಿತು.

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಚಿಕ್ಕಬಳ್ಳಾಪುರದ ಜುಡಿಶಿಯಲ್ ನ್ಯಾಯಾಲಯದ ಕಚೇರಿ ಸಹಾಯಕರ ರಾಜು ಹಾಗೂ ಶಾಲಾ ಮುಖ್ಯೋಪಾಧ್ಯಾಯರಾದ ಪದ್ಮರಾಜ್ ಇವರು ಧ್ವಜಾರೋಹಣವನ್ನು ನೆರವೇರಿಸಿದರು.

ವಾಯು ಸೇನಾ ಎನ್ ಸಿ ಸಿ ಅಧಿಕಾರಿ ವಿಕಾಸ ಆರಿಗ ಕಾರ್ಯಕ್ರಮವನ್ನು ನಿರೂಪಿಸಿ, ಶಿಕ್ಷಕ ಜಯರಾಮ ಧನ್ಯವಾದವಿತ್ತರು.

ಕಾರ್ಯಕ್ರಮದಲ್ಲಿ ಎನ್‌.ಸಿ.ಸಿ ನೌಕಾದಳ ಹಾಗೂ ವಾಯುದಳದ ಕೆಡೆಟ್ ಗಳು ಹಾಗೂ ಶಾಲಾ ಶಿಕ್ಷಕರು, ಸಿಬ್ಬಂದಿಗಳು, ಶಾಲಾ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Exit mobile version