ಸಾವ್ಯ ಮಿಯಾರುಪಲ್ಕೆ ಕೊರಗರ ಕಾಲೋನಿಯಲ್ಲಿ ಹೈಮಾಸ್ಟ್ ದೀಪ ಉದ್ಘಾಟನೆ

0

ಸಾವ್ಯ: ನಾರಾವಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಸಾವ್ಯದ ಮಿಯಾರುಪಳಿಕೆಯ ಕೊರಗ ಕಾಲೋನಿ ಕೊರಗಜ್ಜ ದೈವಸ್ಥಾನಕ್ಕೆ ವಿಧಾನ ಪರಿಷತ್ ಸದಸ್ಯ ಕೆ.ಹರೀಶ್ ಕುಮಾರ್ ಪ್ರದೇಶಾಭಿವೃದ್ದಿ ನಿಧಿಯಿಂದ ಒದಗಿಸಿದ ಹೈಮಾಸ್ಟ್ ದೀಪವನ್ನು ಉದ್ಘಾಟಿಸಿದರು.

ಪ್ರಾಸ್ತಾವಿಕವಾಗಿ ಸದಾಶಿವ ಹೆಗ್ಡೆ ಮಾತನಾಡಿದರು.

ಕಾಶಿಪಟ್ಣ ಗ್ರಾಮ ಪಂಚಾಯತ್ ಅಧ್ಯಕ್ಷ, ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸತೀಶ್ ಬಂಗೇರ ಕಾಶಿಪಟ್ಣ, ಜಿಲ್ಲಾ ಪಂಚಾಯತ್ ಮಾಜಿ ಉಪಾಧ್ಯಕ್ಷ ಧರಣೇಂದ್ರ ಕುಮಾರ್, ಸಾವ್ಯ ಕಾಂಗ್ರೆಸ್ ಗ್ರಾಮ ಸಮಿತಿ ಅಧ್ಯಕ್ಷ, ಉದ್ಯಮಿ ದಿನೇಶ್ ಕೋಟ್ಯಾನ್, ಅಂಡಿಂಜೆ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷ ಸೂರ್ಯನಾರಾಯಣ ಡಿ.ಕೆ., ಗ್ರಾಮ ಪಂಚಾಯತ್ ಮಾಜಿ ಸದಸ್ಯ ವಿಠ್ಠಲ, ಕೊರಗ ಸಮಾಜದ ಹಿರಿಯ ಮುಖಂಡರುಗಳಾದ ಅಪ್ಪು ಕೊರಗ, ಬಾಡು ಕೊರಗ, ಸಮುದಾಯದ ಹಿರಿಯರು ಮತ್ತು ಊರ ನಾಗರಿಕರು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here