



ಕುವೆಟ್ಟು: ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲೆ ಕುವೆಟ್ಟು ಇಲ್ಲಿ ಜ.26 ಗಣರಾಜ್ಯೋತ್ಸವ ಕಾರ್ಯಕ್ರಮ ಆಚರಿಸಲಾಯಿತು.
ಶಾಲಾ ಎಸ್ ಡಿ ಎಂ ಸಿ ಅಧ್ಯಕ್ಷ ಸಿರಾಜ್ ಚಿಲಿಂಬಿ ದ್ವಜಾರೋಹಣ ಮಾಡಿ ಕಾರ್ಯಕ್ರಮದ ಬಗ್ಗೆ ಮಾತನಾಡಿದರು.


ಮುಖ್ಯ ಅತಿಥಿಗಳಾಗಿ ಕೊಡುಗೈದಾನಿ ಅಬ್ದುಲ್ ಮುಂಡೂರು ಮಾಲಕರು ಎಸ್.ಎಂ ಕಾಂಪ್ಲೆಕ್ಸ್ ಮದ್ದಡ್ಕ ಅವರು ಆಗಮಿಸಿದ್ದರು.
ಈ ಸಂದರ್ಭದಲ್ಲಿ ವಿಜ್ಞಾನ ಪ್ರತಿಭಾ ಪರೀಕ್ಷೆಯಲ್ಲಿ ಪ್ರಶಸ್ತಿ ಗಳಿಸಿದ ವಿದ್ಯಾರ್ಥಿಗಳಿಗೆ ಪ್ರಶಸ್ತಿ ಪತ್ರ ಹಾಗೂ ಪದಕ ನೀಡಿ ಗೌರವಿಸಲಾಯಿತು.ಬಳಿಕ ವಿದ್ಯಾರ್ಥಿಗಳಿಂದ ಸಾಂಸ್ಕ್ರತಿಕ ಕಾರ್ಯಕ್ರಮ ಜರಗಿತು.
ಎಸ್ ಡಿ ಎಂ ಸಿ ಉಪಾಧ್ಯಕ್ಷೆ ಪ್ರೇಮಾ ಮತ್ತು ಸದಸ್ಯರು ಪೋಷಕರು ಉಪಸ್ಥಿತರಿದ್ದರು.ಮುಖ್ಯ ಶಿಕ್ಷಕ ಬಾಸ್ಕರ್ ಸ್ವಾಗತಿಸಿ, ಶಿಕ್ಷಕ ಸುರೇಶ್ ಕಾರ್ಯಕ್ರಮ ನಿರೂಪಿಸಿದರು.


            





