Site icon Suddi Belthangady

ಮಡಂತ್ಯಾರು ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಗಣರಾಜ್ಯೋತ್ಸವ

ಮಡಂತ್ಯಾರು: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಜ.26ರಂದು ಗಣರಾಜ್ಯೋತ್ಸವವನ್ನು ಆಚರಿಸಲಾಯಿತು.

ಈ ಕಾರ್ಯಕ್ರಮವನ್ನು ಪ್ರಾರ್ಥನಾ ಗೀತೆಯನ್ನು ಹಾಡುವುದರ ಮೂಲಕ ಪ್ರಾರಂಭಿಸಲಾಯಿತು.ಶಾಲಾ ಸಂಚಾಲಕರಾದ ವಂ|ಸ್ವಾ| ಸ್ಟ್ಯಾನಿ ಗೊವಿಯಸ್ ರವರು ಧ್ವಜಾರೋಹಣವನ್ನು ನೆರವೇರಿಸಿದರು.

ವಿದ್ಯಾರ್ಥಿಯಾದ ಮಹಮ್ಮದ್ ಅಹಿಮಾನ್ ರವರು ಗಣರಾಜ್ಯೋತ್ಸವದ ಮಹತ್ವದ ಬಗ್ಗೆ ವಿವರಿಸಿದರು.ಎಲ್ಲಾ ಗಣ್ಯರು ಸಂವಿಧಾನದ ಪೀಠಿಕೆಗೆ ಪುಷ್ಪಾರ್ಚನೆಯನ್ನು ಮಾಡಿದರು.ನಂತರ ಎಲ್ಲರೂ ಸಂವಿಧಾನದ ಪೀಠಿಕೆಯನ್ನು ವಾಚಿಸಿದರು.ವಿದ್ಯಾರ್ಥಿಗಳು ದೇಶಭಕ್ತಿ ಗೀತೆಯನ್ನು ಹಾಡುವುದರ ಮೂಲಕ ದೇಶಕ್ಕೆ ಗೌರವವನ್ನು ಸಲ್ಲಿಸಿದರು ಹಾಗೂ ವಿದ್ಯಾರ್ಥಿಗಳು ಶಾಲಾ ವಾದ್ಯ ವೃಂದದೊಂದಿಗೆ ಪಥ ಸಂಚಲನವನ್ನು ಮಾಡಿದರು.

ಶಾಲಾ ಸಂಚಾಲಕರಾದ  ವಂ|ಸ್ವಾ| ಸ್ಟ್ಯಾನಿ ಗೊವಿಯಸ್ ರವರು ಮಕ್ಕಳನ್ನು ಉದ್ದೇಶಿಸಿ ಮಾತನಾಡಿ ನಾವೆಲ್ಲರೂ ಒಂದೇ, ನಾವೆಲ್ಲರೂ ಭಾರತೀಯರು, ಒಂದೇ ಕುಟುಂಬದವರು, ಭಾರತ ಒಂದು ಬಲಿಷ್ಠ ರಾಷ್ಟ್ರ ಆದರೆ ಇನ್ನೂ ಕೂಡ ಪರಿಪೂರ್ಣ ರಾಷ್ಟ್ರವಲ್ಲ, ನಾವೆಲ್ಲರೂ ಭಾರತವನ್ನು ಪರಿಪೂರ್ಣ ರಾಷ್ಟ್ರವನ್ನಾಗಿ ಮಾಡಬೇಕೆಂದು ಹೇಳಿ, ಎಲ್ಲರಿಗೂ ಗಣರಾಜ್ಯೋತ್ಸವದ ಶುಭಾಶಯವನ್ನು ಕೋರಿದರು.

ಈ ಕಾರ್ಯಕ್ರಮದಲ್ಲಿ ಶಾಲಾ ಮುಖ್ಯೋಪಾಧ್ಯಾಯರಾದ ವಂ|ಸ್ವಾ| ದೀಪಕ್ ಲಿಯೋ ಡೇಸ ರವರು, ಶಿಕ್ಷಕ-ರಕ್ಷಕ ಸಂಘದ ಸದಸ್ಯರು, ಶಿಕ್ಷಕ-ಶಿಕ್ಷಕೇತರ ವೃಂದದವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಈ ಕಾರ್ಯಕ್ರಮವನ್ನು ವಿದ್ಯಾರ್ಥಿನಿಯರಾದ ಜೋಶ್ಮ ಜೋಯಿಸ್ ರವರು ನಿರೂಪಿಸಿ, ಸಾನಿಯಾ ಲೀರರವರು ಸ್ವಾಗತಿಸಿ, ಸ್ವರ್ಣಗೌರಿರವರು ಧನ್ಯವಾದಗಳನ್ನು ಸಮರ್ಪಿಸಿದರು.ನಂತರ ಎಲ್ಲರಿಗೂ ಸಿಹಿ ತಿಂಡಿಯನ್ನು ಹಂಚಲಾಯಿತು.

Exit mobile version