ನಾಳ : ಶ್ರೀ ದುರ್ಗಾ ಪರಮೇಶ್ವರಿ ದೇವಸ್ಥಾನದಲ್ಲಿ ಬೆಳಗ್ಗೆ ಉಷಾಕಾಲ ಪೂಜೆ, ಅಲಂಕಾರ ಪೂಜೆ ನಡೆದು ಮಧ್ಯಾಹ್ನ ಮಹಾಪೂಜೆ, ನಿತ್ಯಬಲಿ ನಡೆದು ಅನ್ನಸಂತರ್ಪಣೆ ನಡೆಯಿತು.
ಸಾಯಂಕಾಲ ದೇವರ ಬಲಿ ಹೊರಟು ಚಂದ್ರ ಮಂಡಲ ಉತ್ಸವ, ರಥಬೀದಿ ಕಟ್ಟೆ ಪೂಜೆ, ಪ್ರಸಾದ ವಿತರಣೆ, ಮಹಾಪೂಜೆ, ನಿತ್ಯಬಲಿ ಹಾಗೂ ದೀಪದ ಬಲಿ ಜ.26ರಂದು ನಡೆಯಿತು.
ಚಂದ್ರಮಂಡಲ ರಥ ಹಾಗೂ ಪಲ್ಲಕ್ಕಿಯನ್ನು ಸರ್ಮಪಿಸಲಾಯಿತು.
ಧಾರ್ಮಿಕ ಸಭಾ ಕಾರ್ಯಕ್ರಮ ದೇವಸ್ಥಾನದ ವಠಾರದಲ್ಲಿ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಭುವನೇಶ್ ಗೇರುಕಟ್ಟೆ ಅಧ್ಯಕ್ಷತೆಯಲ್ಲಿ ನಡೆಯಿತು.
ಮುಖ್ಯ ಅತಿಥಿಗಳಾಗಿ ವಿ.ಪ.ಸದಸ್ಯ ಪ್ರತಾಪ್ ಸಿಂಹ ನಾಯಕ್, ದ.ಕ.ಜಿಲ್ಲಾ ಬಿ.ಜೆ.ಪಿ. ಕಾರ್ಯಕಾರಿಣಿ ಸದಸ್ಯ ಕಿಶೋರ್ ಕುಮಾರ್ ಬೊಟ್ಯಾಡಿ, ಕೆ.ಪಿ.ಸಿ.ಸಿ. ಪ್ರದಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ, ಕಳಿಯ ಪ್ಯಾಕ್ಸ್ ಅಧ್ಯಕ್ಷ ವಸಂತ ಮಜಲು, ಉದ್ಯಮಿ ನವಶಕ್ತಿ ಶಶಿಧರ್ ಶೆಟ್ಟಿ ಬರೋಡಾ, ಓಡೀಲು ಮಹಾಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷ ಪ್ರಭಾಕರ ಶೆಟ್ಟಿ ಉಪ್ಪಡ್ಕ, ಉದ್ಯಮಿ ಹೇಮಂತ್ ಕುಮಾರ್ ಜೆ.ಕೆ.ನಿವಾಸ ಗೇರುಕಟ್ಟೆ, ಕಳಿಯ ಗ್ರಾ.ಪಂ.ಅಧ್ಯಕ್ಷ ದಿವಾಕರ ಮೆದಿನ, ಉದ್ಯಮಿ ಕಿರಣ್ ಚಂದ್ರ ಪುಷ್ಪಗಿರಿ, ಬೆಳ್ತಂಗಡಿ ಎಸ್.ಕೆ.ಡಿ.ಆರ್.ಡಿ.ಪಿ. ಯೋಜನಾಧಿಕಾರಿ ಸುರೇಂದ್ರ, ಬದಿನಡೆ – ಮಂಜಲಡ್ಕ ಪರಿವಾರ ದೈವಸ್ಥಾನದ ಅಭಿವೃದ್ಧಿ ಸಮಿತಿ ಅಧ್ಯಕ್ಷ ಸುವರ್ಣೇಂದ್ರ ಜೈನ್ ಕಳಿಯಬೀಡು, ಅಭಿವೃದ್ಧಿ ಸಮಿತಿ ಅಧ್ಯಕ್ಷ ಯಾದವ ಗೌಡ ಮುದ್ದಂಜ, ವ್ಯವಸ್ಥಾಪನಾ ಸಮಿತಿ ಸದಸ್ಯರುಗಳಾದ ಜನಾರ್ದನ ಪೂಜಾರಿ, ದಿನೇಶ್ ಗೌಡ ಕಲಾಯಿತೊಟ್ಟು, ಅಂಬಾ ಬಿ.ಆಳ್ವ, ವಿಜಯ ಎಚ್ ಪ್ರಸಾದ್, ಉಮೇಶ ಕೆ.ಕೇಲ್ದಡ್ಕ , ರಾಜೇಶ್ ಶೆಟ್ಟಿ ಅಡ್ಡಕೊಡಂಗೆ, ಭಜನಾ ಮಂಡಳಿಯ ಅಧ್ಯಕ್ಷ ಉಮೇಶ್ ಶೆಟ್ಟಿ ಸಂಬೊಳ್ಯ, ದುರ್ಗಾ ಮಾತೃ ಮಂಡಳಿಯ ಅಧ್ಯಕ್ಷೆ ರೀತಾ ಚಂದ್ರಶೇಖರ್ ಉಪಸ್ಥಿತರಿದ್ದರು.
ಉಪನ್ಯಾಸಕ ಕೇಶವ ಬಂಗೇರ ಕಾರ್ಯಕ್ರಮ ನಿರೂಪಿಸಿದರು.