ಮರೋಡಿ ಉಮಾಮಹೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರೆ ಪ್ರಾರಂಭ, ಧ್ವಜಾರೋಹಣ

0

ಮರೋಡಿ: ಶ್ರೀ ಉಮಾಮಹೇಶ್ವರ ದೇವಸ್ಥಾನ ಮರೋಡಿ ಇಲ್ಲಿಯ ವರ್ಷಾವಧಿ ಆಯನ ಮತ್ತು ಸಿರಿಗಳ ಜಾತ್ರೆಯ ಅಂಗವಾಗಿ ಜ.26ರಂದು ಬೆಳಿಗ್ಗೆ ದೇವತಾ ಪ್ರಾರ್ಥನೆ, ತೋರಣ ಮುಹೂರ್ತ, ನವಕಪ್ರಧಾನ ಹೋಮ, ಕಲಶಾಭಿಷೇಕ, ಅಲಂಕಾರ ಪೂಜೆ, ಧ್ವಜಾರೋಹಣ, ಗ್ರಾಮಸ್ಥರ ಹೊರೆಕಾಣಿಕೆ ಸಮರ್ಪಣೆಯೊಂದಿಗೆ ಪ್ರಾರಂಭವಾಯಿತು.

ಜ.29 ರ ವರೆಗೆ ವಿವಿಧ ಧಾರ್ಮಿಕ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ ಜರಗಲಿದೆ.

ಜ.26 ರಂದು ಸಂಜೆ ದೊಡ್ಡ ರಂಗ ಪೂಜೆ, ಸ್ಥಳೀಯ ಪ್ರತಿಭೆಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ, ಬಲಿ ಉತ್ಸವ, ಮಹಾಪೂಜೆ, ನಿತ್ಯಬಲಿ, ವ್ಯಾಘ್ರಚಾಮುಂಡಿ ಸಹಿತ ರಕ್ತೇಶ್ವರಿ, ಮೈಸಂದಾಯ ದೈವಗಳಿಗೆ ಗಗ್ಗರ ಸೇವೆ ನಡೆಯಿತು.

ಜ.27ರಂದು ಬೆಳಿಗ್ಗೆ ಆಶ್ಲೇಷಬಲಿ, ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ, ಮದ್ಯಾಹ್ನ ಧಾರ್ಮಿಕ ಸಭೆ, ಮಹಾಪೂಜೆ ಅನ್ನಸಂತರ್ಪಣೆ.ಸಂಜೆ ಉತ್ಸವ ಬಲಿ, ಮಹಾ ಪೂಜೆ, ಶ್ರೀ ಭೂತ ಬಲಿ, ಕವಾಟ ಬಂಧನ, ಪಟ್ಟದ ಪಂಜುರ್ಲಿ ಮತ್ತು ಕಲ್ಕಡ ದೈವಗಳಿಗೆ ಕೋಲ, ಜ.28 ರಂದು ಬೆಳಿಗ್ಗೆ ಕವಟ ಉದ್ಘಾಟನೆ, ಕಳಶಾಭಿಷೇಕ, ಅಲಂಕಾರ ಪೂಜೆ, ಚುರ್ಣೋತ್ಸವ, ದರ್ಶನ ಬಲಿ, ಬಟ್ಟಲು ಕಾಣಿಕೆ, ಪ್ರಸಾದ ವಿತರಣೆ, ಅನ್ನಸಂತರ್ಪಣೆ, ಜ.29 ರಂದು ಬೆಳಿಗ್ಗೆ ಸಂಪ್ರೊಕ್ಷಣೆ, ಕಳಶಾಭಿಷೇಕ, ಮಂಗಲ ಪ್ರಸಾದ ವಿತರಣೆ ನಡೆಯಲಿದೆ.

ದೇವಸ್ಥಾನದ ಆಡಳಿತ ಸಮಿತಿ ಅಧ್ಯಕ್ಷ ದೇವೇಂದ್ರ ಹೆಗ್ಡೆ, ಪ್ರಧಾನ ಕಾರ್ಯದರ್ಶಿ ಜಯಂತ ಕೋಟ್ಯಾನ್ ಮತ್ತು ಸಮಿತಿ ಸದಸ್ಯರು, ಅರ್ಚಕ ವೃಂದ, ಊರವರು ಭಕ್ತರು ಹಾಜರಿದ್ದರು.

p>

LEAVE A REPLY

Please enter your comment!
Please enter your name here