ಧರ್ಮಸ್ಥಳ: ಶ್ರೀ ಧ.ಮಂ.ಯೋಗ ಮತ್ತು ಶಿಕ್ಷಣ ಯೋಜನೆ ಶಾಂತಿವನ ಟ್ರಸ್ಟ್, ಶ್ರೀ ಕ್ಷೇತ್ರ ಧರ್ಮಸ್ಥಳ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸಹಕಾರದಲ್ಲಿ 29 ನೇ ವರ್ಷದ ಜ್ಞಾನಶರಧಿ ಹಾಗೂ ಜ್ಞಾನವಾರಿಧಿ ನೈತಿಕ ಮೌಲ್ಯಾಧಾರಿತ ಪುಸ್ತಕಗಳನ್ನಾಧರಿಸಿದ ವಿವಿಧ ಸ್ಪರ್ಧೆಗಳ ವಿಜೇತರಿಗೆ ಪುರಸ್ಕಾರ ಸಮಾರಂಭ ಜ.27ರಂದು ಧರ್ಮಸ್ಥಳ ಮಹೋತ್ಸವ ಸಭಾ ಭವನದಲ್ಲಿ ನಡೆಯಿತು.
ಶಾಂತಿವನ ಟ್ರಸ್ಟ್ ಟ್ರಸ್ಟಿ ಶ್ರೀ ಕ್ಷೇತ್ರ ಧರ್ಮಸ್ಥಳದ ಡಾ.ಹೇಮಾವತಿ.ವೀ.ಹೆಗ್ಗಡೆ ಅಧ್ಯಕ್ಷತೆ ವಹಿಸಿದ್ದರು.ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಸಾಹಿತಿ ಮತ್ತು ಸಂಶೋಧಕ ಡಾ.ಕಬ್ಬಿನಾಲೆ ವಸಂತ ಭಾರಧ್ವಜ ಶುಭಶಂಸನೆಗೈದರು.ಶಾಂತಿವನ ಟ್ರಸ್ಟ್ ಟ್ರಸ್ಟಿ ಧರ್ಮಸ್ಥಳದ ಡಿ.ಹರ್ಷೇಂದ್ರ ಕುಮಾರ್, ಸುಪ್ರೀಯ ಹರ್ಷೇಂದ್ರ ಕುಮಾರ್, ಶಾಂತಿವನ ಟ್ರಸ್ಟ್ ಕಾರ್ಯದರ್ಶಿ ಬಿ.ಸೀತಾರಾಮ ತೋಳ್ಪಡಿತ್ತಾಯ ಉಪಸ್ಥಿತರಿದ್ದರು.
ನಿರ್ದೇಶಕ ಡಾ.ಶಶಿಕಾಂತ ಜೈನ್ ಪ್ರಾಸ್ತಾವಿಕ ಮಾತನಾಡಿ ಸ್ವಾಗತಿಸಿದರು.
ಸ್ಪರ್ಧಾ ವಿಜೇತ ವಿದ್ಯಾರ್ಥಿಗಳಿಗೆ ಪುರಸ್ಕಾರ ನಡೆಯಿತು.ಸ್ಪರ್ಧಾ ವಿಜೇತ ವಿದ್ಯಾರ್ಥಿಗಳಾದ ದ.ಕ.ಜಿಲ್ಲೆಯ ಶ್ರವಣ್ ಎಸ್.ವೈ., ಉಡುಪಿ ಜಿಲ್ಲೆಯ ಪ್ರಣತಿ, ಚಿಕ್ಕಮಗಳೂರು ಜಿಲ್ಲೆಯ ವರ್ಷಿಣಿ, ಉತ್ತರ ಕನ್ನಡ ಜಿಲ್ಲೆಯ ಪ್ರಜ್ಞಾ ಎಂ.ಭಟ್ ಭಾಷಣ ಹಾಗೂ ಶ್ಲೋಕ ಹಾಡಿದರು.ಬೆಳ್ತಂಗಡಿ ಕ್ಷೇತ್ರ ಶಿಕ್ಷಣಾಧಿಕಾರಿ ತಾರಾಕೇಸರಿ, ವಿವಿಧ ಶಾಲಾ ವಿದ್ಯಾರ್ಥಿ ವಿದ್ಯಾರ್ಥಿನಿಯರು, ಶಿಕ್ಷಕರು ಹಾಜರಿದ್ದರು.