ಕೊಳ್ಕೆಬೈಲು ಸ.ಕಿ.ಪ್ರಾ.ಶಾಲೆಯಲ್ಲಿ ಗಣರಾಜ್ಯ ದಿನಾಚರಣೆ, ಮಕ್ಕಳ ಮತ್ತು ಹಳೆ ವಿದ್ಯಾರ್ಥಿಗಳ ಪ್ರತಿಭೆಗಳ ಅನಾವರಣ

0

ಶಿಶಿಲ: ಶಿಶಿಲ ಗ್ರಾಮದ ಕೊಳ್ಕೆಬೈಲು ಸರಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ ಜ.26ರಂದು ಗಣರಾಜ್ಯ ದಿನಾಚರಣೆ, ಮಕ್ಕಳ ಮತ್ತು ಹಳೆ ವಿದ್ಯಾರ್ಥಿಗಳ ಪ್ರತಿಭೆಗಳ ಅನಾವರಣ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮವನ್ನು ಶಾಲಾ ಎಸ್.ಡಿ.ಎಂ.ಸಿ ಅಧ್ಯಕ್ಷೆ ಸುಮಿತ್ರಾರವರು ಉದ್ಘಾಟಿಸಿದರು.ಶಿಶಿಲ ಗ್ರಾ.ಪಂ.ಅಧ್ಯಕ್ಷ ಸುಧೀನ್ ಅಧ್ಯಕ್ಷತೆ ವಹಿಸಿದ್ದರು.ಪೃಥ್ವೀಶ್ ಧರ್ಮಸ್ಥಳ ದಿಕ್ಸೂಚಿ ಭಾಷಣವಿತ್ತರು.

ಕಾರ್ಯಕ್ರಮದಲ್ಲಿ ಲಲಿತಾ, ಕಮಲಾಕ್ಷಿ, ಸುಗುಣ ಕುಮಾರಿ ಉಪಸ್ಥಿತರಿದ್ದರು.ನಾಟಿ ವೈದ್ಯೆ ಗಿರಿಜಾರವರನ್ನು ಸನ್ಮಾನಿಸಲಾಯಿತು.ಶಾಲಾ ಶಿಕ್ಷಕರಿಗೆ ಮತ್ತು ಅಂಗನವಾಡಿ ಶಿಕ್ಷಕಿಗೆ ಗುರುವಂದನೆ ಕಾರ್ಯಕ್ರಮ ನಡೆಯಿತು.

ಶಿಶಿಲ ಗ್ರಾ.ಪಂ ಉಪಾಧ್ಯಕ್ಷ ಯತೀಶ್ ಭಟ್ ಸ್ವಾಗತಿಸಿ, ಶಿಕ್ಷಕರಾದ ಸುಮ, ಸಂತೋಷ್ ನಿರೂಪಿಸಿ, ಸೇಸಮ್ಮ ಧನ್ಯವಾದವಿತ್ತರು.

LEAVE A REPLY

Please enter your comment!
Please enter your name here