ಮರೋಡಿ ಗ್ರಾಮದ ಕೂಕ್ರಬೆಟ್ಟು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಮತ್ತು ಕೊಕ್ರಾಡಿ ಸರ್ಕಾರಿ ಪ್ರೌಢಶಾಲಾ ನೂತನ ಕಟ್ಟಡ ನಿರ್ಮಾಣಕ್ಕಾಗಿ ಶ್ರೀಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಮುದಾಯ ಅಭಿವೃದ್ಧಿ ಯೋಜನೆಯಡಿ ಮಂಜೂರಾದ ತಲಾ ₹ 2 ಲಕ್ಷ ಮೊತ್ತದ ಮಂಜೂರಾತಿ ಪತ್ರವನ್ನು ಮರೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ವಾರ್ಷಿಕ ಆಯನ ಮತ್ತು ಸಿರಿಗಳ ಜಾತ್ರೋತ್ಸವದ ಸಂದರ್ಭದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಯೋಜನಾಧಿಕಾರಿ ದಯಾನಂದ ಪೂಜಾರಿ ಹಸ್ತಾಂತರಿಸಿದರು.
ಕೂಕ್ರಬೆಟ್ಟು ಶಾಲೆಯ ಮಂಜೂರಾದ ಪತ್ರವನ್ನು ಸರ್ಕಾರಿ ಶಾಲೆ ಉಳಿಸಿ ಬೆಳೆಸಿ ಸಮಿತಿ ಅಧ್ಯಕ್ಷ ಜಯಂತ ಕೋಟ್ಯಾನ್, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ ಅಧ್ಯಕ್ಷ ಯಶೋಧರ ಬಂಗೇರ, ಶಾಲಾ ಮುಖ್ಯ ಶಿಕ್ಷಕಿ ಸುಫಲಾ, ಸರ್ಕಾರಿ ಶಾಲೆ ಉಳಿಸಿ ಬೆಳೆಸಿ ಸಮಿತಿ ಕೋಶಾಧಿಕಾರಿ ಅಶೋಕ್ ಕೋಟ್ಯಾನ್ ಸ್ವೀಕರಿಸಿದರು.ಕೊಕ್ರಾಡಿ ಸರ್ಕಾರಿ ಪ್ರೌಢಶಾಲೆಯ ಮಂಜೂರಾತಿ ಪತ್ರವನ್ನು ಶಾಲಾ ಅಭಿವೃದ್ಧಿ (ಬೆಟರ್‌ಮೆಂಟ್) ಸಮಿತಿ ಅಧ್ಯಕ್ಷ ದೇವೇಂದ್ರ ಹೆಗ್ಡೆ ಕೊಕ್ರಾಡಿ, ಶಾಲಾ ಮುಖ್ಯಶಿಕ್ಷಕ ಕೃಷ್ಣ ಭಟ್, ಎಸ್‌ಡಿಎಂಸಿ ಉಪಾಧ್ಯಕ್ಷ ಮೋಹನ ಅಂಡಿಂಜೆ ಸ್ವೀಕರಿಸಿದರು.