Site icon Suddi Belthangady

ಬಂದಾರು ಗ್ರಾ.ಪಂ ನ ದ್ವಿತೀಯ ಸುತ್ತಿನ ಗ್ರಾಮ ಸಭೆ

ಬಂದಾರು ಗ್ರಾಮ ಪಂಚಾಯತ್ 2023-24ನೇ ಸಾಲಿನ ದ್ವಿತೀಯ ಸುತ್ತಿನ ಗ್ರಾಮಸಭೆ ಗ್ರಾ.ಪಂ.ಅಧ್ಯಕ್ಷ ದಿನೇಶ್ ಗೌಡ ಖಂಡಿಗ ಅಧ್ಯಕ್ಷತೆಯಲ್ಲಿ ಜ.30 ಗ್ರಾಮ ಪಂಚಾಯತ್ ನ ವಠಾರದಲ್ಲಿ ನಡೆಯಿತು.

ಕ್ಷೇತ್ರ ಶಿಕ್ಷಣಾಧಿಕಾರಿ, ಅಕ್ಷರ ದಾಸೋಹ ಅಧಿಕಾರಿ ತಾರಕೇಸರಿರವರ ಮಾರ್ಗದರ್ಶನದಲ್ಲಿ ಸಭೆ ನಡೆಯಿತು.ಕಂದಾಯ ಇಲಾಖೆ, ಕೃಷಿ ಇಲಾಖೆ, ಅರಣ್ಯ ಇಲಾಖೆ, ಪೊಲೀಸ್ ಇಲಾಖೆ, ಮೆಸ್ಕಾಂ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಸಮಾಜ ಕಲ್ಯಾಣ ಇಲಾಖೆ, ಪಂಚಾಯತ್ ರಾಜ್ ಇಲಾಖೆ ಇಂಜಿನಿಯರ್, ಆರೋಗ್ಯ ಇಲಾಖೆ ಹಾಗೂ ಪಶುಸಂಗೋಪನಾ ಇಲಾಖೆಯ ಅಧಿಕಾರಿಗಳು ಇಲಾಖಾ ಮಾಹಿತಿ ನೀಡಿದರು.

ಗ್ರಾಮದ ಅಭಿವೃದ್ಧಿಗೆ ಪೂರಕವಾದ ಚರ್ಚೆಗಳು ನಡೆಯಿತು.ಗ್ರಾ.ಪಂ.ಉಪಾಧ್ಯಕ್ಷೆ ಪುಷ್ಪಾವತಿ, ಗ್ರಾ.ಪಂ.ಸದಸ್ಯರುಗಳಾದ ಪರಮೇಶ್ವರಿ ಕೆ., ಗಂಗಾಧರ ಪೂಜಾರಿ, ಮಂಜುಶ್ರೀ ಊಂತನಾಜೆ, ಚೇತನ್ ಕುಮಾರ್, ಪವಿತ್ರ, ಮೋಹನ್ ಕೆ, ಅನಿತಾ, ಭಾರತಿ, ಬಾಲಕೃಷ್ಣ ಗೌಡ, ಶಾಂತಿ, ಶಿವ ಗೌಡ, ವಿಮಲಾ, ಸುಚಿತ್ರ ಹಾಗೂ ಶಿವಪ್ರಸಾದ್, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು.

ಪಿಡಿಓ ಪುರುಷೋತ್ತಮ ಸ್ವಾಗತಿಸಿದರು.ಕಾರ್ಯದರ್ಶಿ ಶಾಂತ, ಗ್ರಾ.ಪಂ.ಸಿಬ್ಬಂದಿಗಳು ಸಹಕರಿಸಿದರು.

Exit mobile version